ರಾಹುಲ್ ಯಾತ್ರೆ ತಡೆಗೆ ಕೋವಿಡ್ ನೆಪ: ಸತೀಶ್ ಜಾರಕಿಹೊಳಿ
Team Udayavani, Dec 25, 2022, 7:38 PM IST
ಬೆಳಗಾವಿ: ದೇಶದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ “ಭಾರತ್ ಜೋಡೋ ಯಾತ್ರೆ’ ತಡೆಯಲು ಬಿಜೆಪಿ ಮತ್ತೆ ಕೊರೊನಾ ಬಳಕೆ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ. ಇದರಲ್ಲಿ ಮುಖ್ಯವಾಗಿ “ಭಾರತ ಜೋಡೋ ಯಾತ್ರೆ’ ಅಭೂತಪೂರ್ವವಾಗಿ ಮುನ್ನುಗ್ಗುತ್ತಿದೆ. ಇದನ್ನು ಸಹಿಸಿಕೊಳ್ಳದ ಬಿಜೆಪಿ ಅದನ್ನು ತಡೆಯಲು ಕೊರೊನಾ ನೆಪ ಹೇಳುತ್ತಿದೆ ಎಂದರು.
ದೇಶದಲ್ಲಿ 2019ರಿಂದ ಕೊರೊನಾ ಇತ್ತು. ಮೊದಲ ಹಾಗೂ ಎರಡನೇ ವರ್ಷದಲ್ಲಿ ಬಹಳ ವೇಗವಾಗಿ ಹರಡಿತ್ತು. ಆದರೆ ಈಗ ಕೊರೊನಾ ಅಂತಹ ಅಪಾಯಕಾರಿಯಾಗಿ ಕಾಣಿಸುತ್ತಿಲ್ಲ. ಈಗ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ನಡೆಗೆ ದೇಶದ ಜನ ಹೆದರಿ ಮತ್ತೆ ಮಾಸ್ಕ್ ಹಾಕಿಕೊಳ್ಳಲು ಯೋಚಿಸುತ್ತಿದ್ದಾರೆ ಎಂದು ಟೀಕಿಸಿದರು.
ಕರ್ನಾಟಕದಲ್ಲಿ ಈಗ ಚುನಾವಣೆ ಬರುತ್ತಿದೆ. ಕಾಂಗ್ರೆಸ್ ಕಾರ್ಯಕ್ರಮಗಳಿಗೆ ಜನ ಹೆಚ್ಚು ಗಮನಹರಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದನ್ನು ಅರಗಿಸಿಕೊಳ್ಳಲು ಬಿಜೆಪಿಗೆ ಆಗುತ್ತಿಲ್ಲ. ಹೀಗಾಗಿ ಕೊರೊನಾ ತಂತ್ರ ಹೂಡಲು ಮುಂದಾಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.