ಆರೋಪಿಗೆ ಕೋವಿಡ್: ಕ್ಯಾಂಪ್ ಠಾಣೆ ಸೀಲ್‌ಡೌನ್
Team Udayavani, Jul 4, 2020, 3:48 PM IST
ಬೆಳಗಾವಿ: ಪಿಸ್ತೂಲು ತೋರಿಸಿ ಚಿನ್ನಾಭರಣ ದೋಚಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ ದರೋಡೆಕೋರನಿಗೆ ಕೋವಿಡ್ ಪಾಸಿಟಿವ್ ಇರುವುದು ಖಾತ್ರಿಯಾಗಿದ್ದು, ಹೀಗಾಗಿ ಕ್ಯಾಂಪ್ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಿ 11 ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ.
ಮಜಗಾಂವಿಯ ಸಂತ ಜ್ಞಾನೇಶ್ವರ ನಗರದ 29 ವರ್ಷದ ವ್ಯಕ್ತಿಯನ್ನು ನಾಲ್ಕು ದಿನಗಳ ಹಿಂದೆ ಕ್ಯಾಂಪ್ ಪೊಲೀಸರು ಬಂಧಿಸಿ ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಪಿಸ್ತೂಲು ವಶಕ್ಕೆ ಪಡೆದುಕೊಂಡಿದ್ದರು. ಆರೋಪಿಯನ್ನು ಬಂಧಿಸಿ ಸಂಪರ್ಕಕ್ಕೆ ಬಂದ ಎಲ್ಲ 11 ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಕ್ಯಾಂಟೋನ್ಮೆಂಟ್ ಪ್ರದೇಶದಲ್ಲಿರುವ ಕ್ಯಾಂಪ್ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಿ ಕಿಮಿನಾಶಕ ಔಷಧಿ ಸಿಂಪಡಣೆ ಮಾಡಲಾಗಿದೆ. ಆರೋಪಿಯನ್ನು ಬಂಧಿಸಿದ ಕೂಡಲೇ ಸುದ್ದಿಗೋಷ್ಠಿ ಕೂಡ ನಡೆಸಲಾಗಿತ್ತು. ಬಂಧಿತನನ್ನು ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಹಿಂಡಲಗಾ ಕಾರಾಗೃಹಕ್ಕೆ ರವಾನಿಸಲಾಗಿದೆ. ಈಗ ಆರೋಪಿಗೆ ಕೋವಿಡ್ ಸೋಂಕು ದೃಢವಾಗುತ್ತಿದ್ದಂತೆ ಹಿಂಡಲಗಾ ಜೈಲಿನಲ್ಲಿಯೂ ಆತಂಕ ಶುರುವಾಗಿದೆ. ಕ್ಯಾಂಪ್ ಪೊಲೀಸ್ ಠಾಣೆ ಎದುರು ಸುದ್ದಿಗೋಷ್ಠಿ ನಡೆಸಿದಾಗ ಡಿಸಿಪಿ ಯಶೋಧಾ ವಂಟಗೋಡಿ, ಇನ್ಸಪೆಕ್ಟರ್ ಡಿ. ಸಂತೋಷಕುಮಾರ ಸೇರಿದಂತೆ ಅನೇಕ ಸಿಬ್ಬಂದಿ ಫೋಟೊ ತೆಗೆಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.