ಗೋಕಾಕದ ಇಂಜಿನಿಯರ್‌ಗೆ ಕೋವಿಡ್
Team Udayavani, Jul 13, 2020, 12:59 PM IST
ಗೋಕಾಕ: ಬೆಂಗಳೂರಿನಲ್ಲಿ ಇಂಜನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಇಲ್ಲಿಯ ಬಸವ ನಗರದ ನಿವಾಸಿ, 27 ವರ್ಷದ ಯುವಕನಿಗೆ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಜಗದೀಶ ಜಿಂಗಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಆತನೊಂದಿಗೆ ವಾಸವಾಗಿದ್ದ ಪೊಲೀಸ್ ಪೇದೆಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಂಜಿನಿಯರ್ ಅವರ ಗಂಟಲ ದ್ರವವನ್ನು ಪರೀಕ್ಷೆ ಒಳಪಡಿಸಿ, ವರದಿ ಬರುವವರೆಗೂ ಹೋಮ್ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಲಾಗಿತ್ತು. ಆದರೆ ಕಳೆದ 2 ದಿನಗಳ ಹಿಂದೆ ಯುವಕನು ರಾತ್ರೋರಾತ್ರಿ ಬೆಂಗಳೂರಿನಿಂದ ಗೋಕಾಕ ನಗರಕ್ಕೆ ಆಗಮಿಸಿ ವಿಕೋಪ ನಿರ್ವಹಣಾ ಕಾಯ್ದೆ-2005 ಉಲ್ಲಂಘನೆ ಮಾಡಿದ್ದಾನೆ ಎಂದು ಡಾ. ಜಿಂಗಿ ಅವರು ಮಾಹಿತಿ ನೀಡಿದರು.
ಈ ಪ್ರಕರಣದ ಕುರಿತು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರು ಪ್ರತಿಕ್ರಿಯಿಸಿ ವಿಕೋಪ ನಿರ್ವಹಣಾ ಕಾಯ್ದೆ-2005ರ ಉಲ್ಲಂಘಿಸಿ ನಗರಕ್ಕೆ ಆಗಮಿಸಿರುವ ಸೋಂಕಿತ ಇಂಜಿನಿಯರ್ ಮೇಲೆ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಲಾಗಿದೆ. ಅಲ್ಲದೇ ಮನೆಯ ಸುತ್ತಮುತ್ತ 50 ಮೀಟರ್ ಸಿಲ್‌ಡೌನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.