ಬೆಳಗಾವಿ ಜೀವನರೇಖಾ ಆಸ್ಪತ್ರೆಯಲ್ಲಿ ಮಕ್ಕಳ ಮೇಲೆ ಲಸಿಕೆ ಟ್ರಯಲ್
Team Udayavani, May 20, 2021, 2:11 PM IST
Representative Image Used
ಬೆಳಗಾವಿ: ಕೋವಿಡ್ ನಿಯಂತ್ರಣ ಸಂಬಂಧ ಕೋವ್ಯಾಕ್ಸಿನ್ ಲಸಿಕಾ ಪ್ರಯೋಗದಲ್ಲಿ ಭಾಗಿಯಾಗಿದ್ದ ಬೆಳಗಾವಿಯ ಜೀವನರೇಖಾ ಆಸ್ಪತ್ರೆ ಈಗ ಮತ್ತೊಂದು ಮಹತ್ವದ ಸಾಧನೆಯತ್ತ ಹೆಜ್ಜೆ ಇಟ್ಟಿದ್ದು ಮಕ್ಕಳ ಮೇಲಿನ ಕ್ಲಿನಿಕಲ್ ಪ್ರಯೋಗದಲ್ಲಿ ಭಾಗಿಯಾಗಿದೆ.
ಝೈಡಸ್ ಕ್ಯಾಡಿಲಾ ಕಂಪನಿಯು ಅಭಿವೃದ್ಧಿ ಪಡಿಸುತ್ತಿರುವ ಕೋವಿಡ್ ಲಸಿಕೆ ಝೈಕೋವ್-ಡಿ-3 ಹಂತದ ಕ್ಲಿನಿಕಲ್ ಟ್ರಯಲ್ಸದಲ್ಲಿ 12 ರಿಂದ 18 ವರ್ಷದ ಮಕ್ಕಳ ಮೇಲೆ ಪ್ರಯೋಗ ನಡೆಸಿದ್ದು ಅದರಲ್ಲಿ ಬೆಳಗಾವಿಯ ಜೀವನ ರೇಖಾ ಆಸ್ಪತ್ರೆ ಸಹ ಭಾಗಿಯಾಗಿದೆ.
ಈ ಕ್ಲಿನಿಕಲ್ ಟ್ರಯಲ್ಸಗೆ ಬೆಳಗಾವಿಯ ತಲಾ 10 ಬಾಲಕ ಹಾಗೂ ಬಾಲಕಿಯರನ್ನು ಸ್ವಯಂ ಸೇವಕರನ್ನಾಗಿ ಆಯ್ಕೆ ಮಾಡಲಾಗಿದ್ದು ಅವರಿಗೆ ಈಗಾಗಲೇ ಮೊದಲ ಡೋಸ್ ನೀಡಲಾಗಿದೆ. ಯಾರಿಗೂ ಇದರಿಂದ ಅಡ್ಡಪರಿಣಾಮಗಳಾಗಿಲ್ಲ ಎಂದು ಜೀವನರೇಖಾ ಆಸ್ಪತ್ರೆಯ ನಿರ್ದೇಶಕ ಡಾ ಅಮಿತ್ ಭಾತೆ ‘ಉದಯವಾಣಿ’ ಗೆ ಹೇಳಿದರು.
ಇದನ್ನೂ ಓದಿ:ಹಣಕ್ಕಾಗಿ ಕೋವಿಡ್ ಟೆಸ್ಟ್ ನಕಲಿ ವರದಿ: ಬೆಂಗಳೂರಿನಲ್ಲಿ ವೈದ್ಯರು ಸೇರಿ ಆರು ಜನರು ವಶಕ್ಕೆ
ಈ ಮಕ್ಕಳಿಗೆ ಮೂರು ಡೋಸ್ ಗಳನ್ನು ನೀಡಲಾಗುತ್ತದೆ. ಮೊದಲ ಡೋಸ್ ಬಳಿಕ 28 ನೇ ದಿನಕ್ಕೆ ಎರಡನೇ ಹಾಗೂ 52ನೇ ದಿನಕ್ಕೆ ಮೂರನೇ ಡೋಸ್ ನೀಡಲಾಗುತ್ತದೆ. ಪ್ರತಿ ಡೋಸ್ ಪಡೆದ ನಂತರ ಅವರಲ್ಲಿ ರೋಗ ನಿರೋಧಕ ಶಕ್ತಿಯನ್ನು ಪರೀಕ್ಷಿಸಲು ರಕ್ತದ ಮಾದರಿಯನ್ನು ಸಂಗ್ರಹಿಸಲಾಗುವದು ಎಂದು ಡಾ ಅಮಿತ್ ಹೇಳಿದರು.
ದೇಶದ 120 ಕಡೆಗಳಲ್ಲಿ ಈ ರೀತಿಯ ಕ್ಲಿನಿಕಲ್ ಟ್ರಯಲ್ಸ್ ಗಳು ನಡೆದಿವೆ. ಇದರಲ್ಲಿ ಕರ್ನಾಟಕದ 1500 ಕ್ಕೂ ಹೆಚ್ಚು ಮಕ್ಕಳು ಭಾಗಿಯಾಗಿದ್ದಾರೆ. ಇದಲ್ಲದೆ ಕೋವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ನಡೆಸಲು ಉದ್ದೇಶಿಸಲಾಗಿದ್ದು ಅದರಲ್ಲೂ ಸಹ ಜೀವನ ರೇಖಾ ಆಸ್ಪತ್ರೆ ಭಾಗಿಯಾಗಲಿದೆ ಎಂದು ಡಾ ಅಮಿತ್ ಭಾತೆ ‘ಉದಯವಾಣಿ’ಗೆ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.