ಕೋವಿಡ್ ವಾರಿಯರ್ಸ್ ಸೇವೆ ಶ್ಲಾಘನೆ-ಅಭಿನಂದನೆ
Team Udayavani, Jun 1, 2020, 11:46 AM IST
ಬೆಳಗಾವಿ: ಕೋವಿಡ್ ಸೋಂಕು ತಡೆಯಲು ದಿನದ 24 ಗಂಟೆಗಳ ಕಾಲ ಶ್ರಮಿಸುತ್ತಿರುವ ಪೊಲೀಸ್, ಆರೋಗ್ಯ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರನ್ನು ಇಲ್ಲಿನ ರಾಮತೀರ್ಥ ನಗರದ ನಿವಾಸಿಗಳು ರವಿವಾರ ಸತ್ಕರಿಸಿ ಮೆರವಣಿಗೆ ನಡೆಸಿದರು. ರಾಮತೀರ್ಥ ನಗರದ ಗಣೇಶ ವೃತ್ತದಿಂದ ಪ್ಯಾರಡೈಸ್ ಹಾಲ್‌ವರೆಗೆ ಮೆರವಣಿಗೆ ನಡೆಸಿ ಗೌರವ ಸಲ್ಲಿಸಲಾಯಿತು.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಶಾಸಕ ಅನಿಲ ಬೆನಕೆ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ ಮೊದಲಾದವರು ಮೆರವಣಿಗೆಯಲ್ಲಿ ಪಾಲ್ಗೊಂಡು ಕೋವಿಡ್ ಸೇನಾನಿಗಳ ಮೇಲೆ ಹೂ ಮಳೆ ಸುರಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ ಅಂಗಡಿ, ಕೋವಿಡ್ ಸೋಂಕು ತಡೆಯುವಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿರುವ ಎಲ್ಲರನ್ನೂ ಕೋವಿಡ್ ವಾರಿಯರ್ಸ್ ಎಂದು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದಾರೆ.
ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಕೋವಿಡ್ ಸೋಂಕು ನಿಯಂತ್ರಣದಲ್ಲಿದೆ. ಹೀಗಾಗಿ ಈ ಯೋಧರು ಸಾರ್ವಜನಿಕರ ದೃಷ್ಟಿಯಲ್ಲಿ ದೇವರಾಗಿ ಕಾಣುತ್ತಿದ್ದಾರೆ. ಅವರನ್ನು ಗೌರವಿಸುವುದು ಸಮಾಜದ ಕರ್ತವ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಮುಕ್ತಾರ ಪಠಾಣ, ಬಿಜೆಪಿ ಮಹಾನಗರ ಘಟಕದ ಅಧ್ಯಕ್ಷ ಶಶಿ ಪಾಟೀಲ, ಬಿಜೆಪಿ ಬೆಳಗಾವಿ ಉತ್ತರ ಘಟಕದ ಅಧ್ಯಕ್ಷ ಪಾಂಡುರಂಗ ಧಾಮನೇಕರ, ಎಸಿಪಿ ನಾರಾಯಣ ಭರಮನಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.