ಸಿಆರ್ಎಫ್ ಅನುದಾನ ಹೆಚ್ಚಳಕ್ಕೆ ಆಗ್ರಹ
Team Udayavani, Jun 18, 2018, 6:45 AM IST
ಬೆಳಗಾವಿ: ಕೇಂದ್ರದ ಸಿಆರ್ಎಫ್ ಯೋಜನೆಯಡಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ
ಕೇಂದ್ರಕ್ಕೆ ಮನವಿ ಮಾಡಿಕೊಳ್ಳುವ ವಿಚಾರವಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಹಾಗೂ ಹಣಕಾಸು ಇಲಾಖೆ ಕಾರ್ಯದರ್ಶಿಗಳ ಸಭೆ ನಡೆಸಲಾಗುವುದು ಎಂದು ಲೋಕೋಪ ಯೋಗಿ ಸಚಿವ ಎಚ್.ಡಿ. ರೇವಣ್ಣ ಹೇಳಿದರು.
ಭಾನುವಾರ ನಗರದ ಜಿಪಂ ಸಭಾಭವನದಲ್ಲಿ ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಈಚೆಗೆ ಸುರಿದ ಭಾರಿ ಮಳೆ ಹಾಗೂ ನೆರೆ ಹಾವಳಿಯಿಂದ ಹಾಳಾಗಿರುವ ರಸ್ತೆ, ಸೇತುವೆ, ಸಿಡಿ ಹಾಗೂ ಕಟ್ಟಡಗಳ ಸ್ಥಿತಿ ಮತ್ತು ದುರಸ್ತಿ ಬಗ್ಗೆ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಕೇಂದ್ರದ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ನಿಯೋಗದ ಮೂಲಕ ಭೇಟಿ ಮಾಡಲಾಗುವುದು.
ಕೇಂದ್ರ ಸರಕಾರ ಈಗ ನೀಡುತ್ತಿರುವ ಸಿಆರ್ಎಫ್ ಹಣ ಸಾಲುವುದಿಲ್ಲ. ಇದರಿಂದ ಸಾಕಷ್ಟು ಯೋಜನೆಗಳು
ಅರ್ಧಕ್ಕೆ ನಿಂತಿವೆ. ಕೆಲಸ ಮಾಡಿದರೂ ಹಣ ಬಿಡುಗಡೆಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಕೇಂದ್ರ ಸಚಿವರನ್ನು
ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಪ್ರಯತ್ನಿಸಬೇಕೆಂದು ಸಂಸದರಾದ ಸುರೇಶ ಅಂಗಡಿ ಹಾಗೂ ಪ್ರಕಾಶ ಹುಕ್ಕೇರಿ ಅವರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.