ಇ-ಪಾಸ್ ಇಲ್ಲದೇ ಅನ್ಯ ರಾಜ್ಯಗಳಿಂದ ಅಕ್ರಮ ಪ್ರವೇಶ ಮಾಡಿದ್ರೆ ಕ್ರಿಮಿನಲ್ ಕೇಸ್
Team Udayavani, May 14, 2020, 1:54 PM IST
ಬೆಳಗಾವಿ: ಮಾರ್ಗಸೂಚಿ ಪ್ರಕಾರ ಸೇವಾಸಿಂಧು ಮೂಲಕ ಸೂಕ್ತ ಅನುಮತಿ ಪತ್ರ (ಇ-ಪಾಸ್) ಪಡೆಯದೇ ಕೆಲವರು ನೆರೆಯ ರಾಜ್ಯಗಳಿಂದ ಕಾನೂನು ಬಾಹಿರವಾಗಿ ಅಡ್ಡಮಾರ್ಗದಲ್ಲಿ ಬೆಳಗಾವಿ ಜಿಲ್ಲೆ ಪ್ರವೇಶಿಸುತ್ತಿರುವುದು ಕಂಡು ಬಂದಿದೆ. ಈ ರೀತಿ ಅಕ್ರಮವಾಗಿ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಈ ರೀತಿಯ ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನು ಬಾಹಿರವಾಗಿರುತ್ತದೆ. ಅಂತಹವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಸೇವಾಸಿಂಧು ಮೂಲಕ ಇ-ಪಾಸ್ ಪಡೆಯದೇ ಮಹಾರಾಷ್ಟ್ರ ಸೇರಿದಂತೆ ಇತರೆ ನೆರೆಯ ರಾಜ್ಯಗಳ ಮೂಲಕ ಬೆಳಗಾವಿ ಜಿಲ್ಲೆಯನ್ನು ಯಾರಾದರೂ ಪ್ರವೇಶಿಸಿದ್ದರೆ ಅಂತಹವರು ಸ್ವಯಂ ಪ್ರೇರಣೆಯಿಂದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಪರೀಕ್ಷೆಗೆ ಒಳಪಡಬೇಕು. ಇದೇ ರೀತಿ ಸಂಬಂಧಿಸಿದ ಪೊಲೀಸ್ ಠಾಣೆಗೂ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದ್ದಾರೆ.
ಈ ರೀತಿ ಅಕ್ರಮವಾಗಿ ಪ್ರವೇಶಿಸಿದವರು ಒಂದು ವೇಳೆ ಸ್ವಯಂಪ್ರೇರಣೆಯಿಂದ ಮುಂದೆ ಬಂದು ಮಾಹಿತಿ ನೀಡದಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.
ಅನ್ಯ ರಾಜ್ಯಗಳಿಂದ ಅಕ್ರಮವಾಗಿ ಬಂದಿರುವವರ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ಕೂಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ 0831-2407290 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.