ಮೊಬೈಲ್ ಆ್ಯಪ್‌ದಿಂದ ಬೆಳೆ ಸಮೀಕ್ಷೆ
Team Udayavani, Dec 18, 2020, 3:38 PM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಜಿಲ್ಲೆಯ ಎಲ್ಲ ರೈತರು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಯೋಜನೆಯಲ್ಲಿ ಈಗಾಗಲೇ ಪಾಲ್ಗೊಂಡಂತೆ ಪ್ರಸಕ್ತ ಹಿಂಗಾರುಹಂಗಾಮಿನಲ್ಲಿಯೂ ರೈತರು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರಸಹಿತ ಬೆಳೆ ಸಮೀಕ್ಷೆ ಮೊಬೆ„ಲ್ ಆ್ಯಪ್ ಮೂಲಕ ದಾಖಲಿಸುವ ಯೋಜನೆಯನ್ನು ಪ್ರಾರಂಭಿಸಲಾಗಿದೆ.
ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖ್ಯಿಕ ಇಲಾಖೆಯ ಜಂಟಿ ಸಹಯೋಗದಲ್ಲಿ ಈ ಕಾರ್ಯ ನಡೆಯಲಿದ್ದು, ಸಂಗ್ರಹವಾದ ಬೆಳೆಗಳಮಾಹಿತಿಯನ್ನು ತಾಲೂಕ ಆಡಳಿತ ಪರಿಶೀಲಿಸಲಿದೆ. ರೈತರು ಸ್ಮಾರ್ಟ್ ಫೋನ್‌ಉಪಯೂಗಿಸಿ ಬೆಳೆ ಸಮೀಕ್ಷೆ ಮೊಬೆ„ಲ್‌ಆ್ಯಪ್‌ನ್ನು ಗೂಗಲ್‌ನ ಪ್ಲೇ ಸ್ಟೋರ್ ನಿಂದಡೌನಲೋಡ್ ಮಾಡಿಕೊಳ್ಳಬಹುದಾಗಿದೆಅಥವಾ ರೈತರ ಪರವಾಗಿ ಅವರ ಕುಟುಂಬದ ಸದಸ್ಯರು, ಸಂಬಂಧಿಕರು ಅಥವಾ ಮೊಬೆ„ಲ್ ಮಾಹಿತಿ ಹೊಂದಿರುವ ಕಂದಾಯ/ಕೃಷಿ ಇಲಾಖೆ ವತಿಯಿಂದ ನಿಯೋಜನೆಗೊಂಡ ತಮ್ಮದೆ ಗ್ರಾಮದ ಮಾಹಿತಿ ತಂತ್ರಜ್ಞಾನದ ಬಗ್ಗೆ ತಿಳಿವಳಿಕೆ ಇರುವ ಯುವಕರ (ಖಾಸಗಿ ನಿವಾಸಿ/ಪಿ.ಆರ್) ಸಹಾಯದೂಂದಿಗೆ ರೈತರು ತಮ್ಮ ಮೊಬೆ„ಲ್ ಸಂಖ್ಯೆಗೆ ಒಟಿಪಿ ಪಡೆಯುವ ಮೂಲಕ ತಮ್ಮ ಜಮೀನುಗಳಲ್ಲಿ (ಹಿಸ್ಸಾವಾರು) ತಾವುಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆಮೊಬೆ„ಲ್ ಆ್ಯಪ್ ಮೂಲಕ ಅಪ್‌ಲೋಡ್ ಮಾಡಬಹುದಾಗಿದೆ. ರೈತರುನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಅಪ್‌ಲೋಡ್ ಮಾಡದೇ ಇದ್ದರೆ ಪ್ರತಿ ಗ್ರಾಮಕ್ಕೆನಿಯೋಜನೆಗೊಂಡ ಬೆಳೆ ಸಮೀಕ್ಷಕರು(ಖಾಸಗಿ ನಿವಾಸಿ/ಪಿ.ಆರ್) ತಮ್ಮ ಹೊಲಗಳಿಗೆ ಭೇಟಿ ನೀಡಿ ಮೊಬೆ„ಲ್‌ಆ್ಯಪ್ ಬಳಸಿ ಬೆಳೆ ಮಾಹಿತಿ ಸಂಗ್ರಹಿಸಿ ಅಪಲೋಡ್ ಮಾಡುತ್ತಾರೆ.
ಬೆಳೆ ಸಮೀಕ್ಷೆ ಯೋಜನೆಯಡಿ ಸಂಗ್ರಹವಾಗುವ ಮಾಹಿತಿ ಸಾಂಖ್ಯಿಕ ಇಲಾಖೆಯ ಕೃಷಿ, ತೋಟಗಾರಿಕೆ, ರೇಷ್ಮೆಬೆಳೆ ವಿಸ್ತೀರ್ಣ ಎಣಿಕಾ ಕಾರ್ಯದಲ್ಲಿ ಬಳಸಲು ಅನುಮತಿಸಲಾಗಿದೆ. ಪ್ರಕೃತಿವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಸಹಾಯಧನ ನೀಡಲು ವರದಿತಯಾರಿಸಲಾಗುವದು. ಹಾಗೂ ಬೆಳೆ ವಿಮೆ ಯೋಜನೆಯಡಿ ರೈತರ ತಾಲೂಕುವಾರು ಬೆಳೆ ಪರಿಶೀಲಿಸಲು,ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನುಗುರುತಿಸಲಾಗುವದು, ಹಾಗೂ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕಾಗಿ.
ಅಲ್ಲದೆ ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಜಿಲ್ಲೆಯ ಎಲ್ಲಾ ರೈತರು ರೈತರು ತಮ್ಮ ಜಮೀನುಗಳಲ್ಲಿ (ಹಿಸ್ಸಾವಾರು) ತಾವು ಬೆಳೆದ ಹಿಂಗಾರು ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‌ನಲ್ಲಿ ನಿಗದಿತ ಸಮಯದೊಳಗೆ ಅಪ್ಲೋಡ್ ಮಾಡಿ ಕಡ್ಡಾಯವಾಗಿ ಬೆಳೆ ಸಮೀಕ್ಷೆ ಯೋಜನೆಯಲ್ಲಿ ಭಾಗವಹಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.