ಸಾವಿರಕ್ಕೇರಿದ ಗುಣಮುಖರ ಸಂಖ್ಯೆ
Team Udayavani, Aug 4, 2020, 12:48 PM IST
ಬೆಳಗಾವಿ: 15 ದಿನಗಳ ಅವಧಿಯಲ್ಲಿ ಅತಿ ಕಡಿಮೆ ಸಂಖ್ಯೆ ಕೋವಿಡ್ ಪ್ರಕರಣಗಳು ಸೋಮವಾರ ಪತ್ತೆಯಾಗಿದ್ದು, ಕೇವಲ 60 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಆದರೆ ಒಂದೇ ದಿನ 10 ಜನ ಕೋವಿಡ್ ಗೆ ಬಲಿಯಾಗಿರುವುದು ಭಯ ಹುಟ್ಟಿಸಿದೆ.
ಜಿಲ್ಲೆಯಲ್ಲಿ ಒಟ್ಟಾರೆ 3688 ಮಂದಿ ಕೋವಿಡ್ ಸೋಂಕಿತರಾಗಿದ್ದು, ಇದರಲ್ಲಿ ಸೋಮವಾರ 29 ಜನ ಬಿಡುಗಡೆ ಆಗಿದ್ದಾರೆ. ಒಟ್ಟು 1080 ಜನ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇನ್ನೂ 868 ಜನರ ವರದಿ ಬರುವುದು ಬಾಕಿ ಇದೆ. ಬೈಲಹೊಂಗಲದ 54 ವರ್ಷದ ವ್ಯಕ್ತಿ, ಬೆಳಗಾವಿಯ 56 ವರ್ಷದ ವ್ಯಕ್ತಿ, ಬೆಳಗಾವಿಯ 68 ವರ್ಷದ ವ್ಯಕ್ತಿ, ರಾಮದುರ್ಗದ 50 ವರ್ಷದ ವ್ಯಕ್ತಿ, ಬೆಳಗಾವಿಯ 47 ವರ್ಷದ ಮಹಿಳೆ, ಅಥಣಿಯ 70 ವ ವರ್ಷದ ವೃದ್ಧ, ರಾಮದುರ್ಗ 51 ವರ್ಷದ ವ್ಯಕ್ತಿ, ಚಿಕ್ಕೋಡಿಯ 75 ವರ್ಷದ ವೃದ್ಧ, ಬೆಳಗಾವಿಯ 56 ವರ್ಷದ ವ್ಯಕ್ತಿ, ಅಥಣಿಯ 70 ವರ್ಷದ ವೃದ್ಧ ಕೋವಿಡ್ ಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 85ಕ್ಕೇರಿಕೆ ಆಗಿದೆ.
ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್-19 ವಾರ್ಡ್‌ನಲ್ಲಿ ಸದ್ಯ 2523 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 44479 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 8975 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 7839 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದಾರೆ. 25278 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 43183 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 37853 ವರದಿ ನಕಾರಾತ್ಮಕವಾಗಿದೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.