ಹಲಗಾದಲ್ಲಿ ಸಿಲಿಂಡರ್ ಸ್ಫೋಟ: ನಾಲ್ಕು ಮನೆಗಳು ಭಸ್ಮ
Team Udayavani, Dec 23, 2019, 11:54 AM IST
ಬೆಳಗಾವಿ: ತಾಲೂಕಿನ ಹಲಗಾ ಗ್ರಾಮದಲ್ಲಿ ರವಿವಾರ ಬೆಳಗ್ಗೆ ಸಿಲಿಂಡರ್ ಗ್ಯಾಸ್ ಸ್ಫೋಟಗೊಂಡು ನಾಲ್ಕು ಮನೆಗಳು ಬೆಂಕಿಗಾಹುತಿಯಾಗಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಗ್ರಾಮದ ಲಕ್ಷ್ಮೀ ಗಲ್ಲಿಯಲ್ಲಿರುವ ಶಾಂತಿನಾಥ ಚಿಕ್ಕಪರಪ್ಪ, ಜೀನಪ್ಪ ಚಿಕ್ಕಪರಪ್ಪ ಹಾಗೂ ಸುನೀಲ ಚಿಕ್ಕಪರಪ್ಪ ಎಂಬವರ ಮನೆಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಬೆಳಗ್ಗೆ 9:30ರ ಸುಮಾರಿಗೆ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡು ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರವಿವಾರ ಬೆಳಗ್ಗೆ ಶಾಂತಿನಾಥ ಚಿಕ್ಕಪರಪ್ಪ ಎಂಬವರು ಭತ್ತದ ರಾಶಿ ಮಾಡಲು ಹೊಲಕ್ಕೆ ತೆರಳಿದ್ದರು. ಸುಜಾತಾ ಎಂಬ ಇವರ ಮಗಳು ಮಾತ್ರ ಮನೆಯಲ್ಲಿದ್ದಳು. ಗ್ಯಾಸ್ ಒಲೆ ಹೊತ್ತಿಸಿ ಮನೆಯ ಹೊರಗಡೆ ಬಂದು ಕೆಲಸದಲ್ಲಿ ನಿರತಳಾಗಿದ್ದಳು. ನೋಡುವಷ್ಟರಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಆಗ ಚೀರಾಡಲು ಶುರು ಮಾಡಿದ ಸುಜಾತಾ ಓಡಿ ಹೊರ ಬಂದಿದ್ದಾಳೆ. ಬಳಿಕ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಆವರಿಸಿಕೊಂಡಿತ್ತು. ಸುತ್ತಲಿನ ಜನ ಸೇರಿ ಬೆಂಕಿ ಆರಿಸಲು ಯತ್ನಿಸಿದರೂ ಅಷ್ಟರೊಳಗೆ ಬೆಂಕಿ ಇನ್ನುಳಿದ ಮನೆಗಳಿಗೂ ವ್ಯಾಪಿಸಿಕೊಂಡಿತ್ತು. ಪಕ್ಕದ ಮನೆ ಮೇಲೆ ಹತ್ತಿದ ಜನರು ಕೊಡಗಳಿಂದ ನೀರು ಸುರಿದು ಬೆಂಕಿ ನಂದಿಸಲು ಪ್ರಯತ್ನಿಸಿದರು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.