D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ
ಬಿಜೆಪಿ ಭಾವನೆ ಬಗ್ಗೆ ಮಾತಾಡುತ್ತದೆ ಹೊರತು ಜನರ ಬದುಕಿನ ಬಗೆಗಲ್ಲ
Team Udayavani, May 6, 2024, 12:33 AM IST
ಬೆಳಗಾವಿ: ಮೋದಿ ಕೇವಲ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿ ಭಾವನೆ ಬಗ್ಗೆ ಮಾತಾಡು ತ್ತದೆಯೇ ಹೊರತು ಜನರ ಬದುಕಿನ ಬಗೆಗಲ್ಲ. ಕಾಂಗ್ರೆಸ್‌ನ ಭರವಸೆ ಹಾಗೂ ಬಿಜೆಪಿಯ ಬುರುಡೆ ಮಧ್ಯೆ ಚುನಾವಣೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಬಳಿಕ ಗ್ಯಾರಂಟಿ ಸ್ಥಗಿತ ಎಂದು ಯಡಿಯೂರಪ್ಪ, ಆರ್.ಅಶೋಕ್ ಹಾಗೂ ವಿಜಯೇಂದ್ರ ಹೇಳಿದ್ದಾರೆ. ಸರಕಾರದ ಗ್ಯಾರಂಟಿ ಗಳಿಂದ ಜನರು ಸಂತೋಷವಾಗಿದ್ದು, ಆದರೆ ಇದನ್ನು ನಿಲ್ಲಿಸಲು ಬಿಜೆಪಿ ನಾಯಕರು ಬಯಸುತ್ತಿದ್ದಾರೆ. ಯೋಜನೆಗಳಿಗೆ ಬಜೆಟ್‌ನಲ್ಲಿ 58 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ರಾಜ್ಯದ 7 ಕೋಟಿ ಜನರ ಪೈಕಿ 5.60 ಕೋಟಿ ಜನರಿಗೆ ನಮ್ಮ ಯೋಜನೆ ತಲುಪುತ್ತಿವೆ ಎಂದರು.
ಉತ್ತರ ಕರ್ನಾಟಕ ಭಾಗದ ನೀರಾವರಿಗಾಗಿ 9 ಸಾವಿರ ಕೋಟಿ ರೂ. ಕಾಮಗಾರಿ ಕೈಗೊಂಡಿದ್ದೇವೆ. ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಕೈಗೆತ್ತಿಕೊಂಡಿದ್ದು, ಮಹಾದಾಯಿ ಯೋಜನೆಗೆ ಕೇಂದ್ರದ ಪರಿಸರ ಇಲಾಖೆ ಅನುಮತಿ ನೀಡದಿ ದ್ದರೂ ನಾವು ಟೆಂಡರ್ ಕರೆದಿದ್ದೇವೆ. ಬಿಜೆಪಿ ನಾಯಕರಾದ ಶೆಟ್ಟರ್, ಬೊಮ್ಮಾಯಿ ಹಾಗೂ ಜೋಷಿ ಸಂಭ್ರಮಾಚರಣೆ ಮಾಡಿದರು. ಅವರದ್ದು ಕೇವಲ ಬುರುಡೆ ಹಾಗೂ ಖಾಲಿ ಮಾತು. ನಾವು ನುಡಿದಂತೆ ನಡೆದಿದ್ದೇವೆ ಎಂದರು.
ಸುರೇಶ ಅಂಗಡಿಗೆ ಅಗೌರವ
ಕೋವಿಡ್ ವೇಳೆ ಸುರೇಶ ಅಂಗಡಿ ಪಾರ್ಥಿವ ಶರೀರವನ್ನು ಇಲ್ಲಿಗೆ ತಂದು ಅಂತ್ಯಸಂಸ್ಕಾರ ಮಾಡಲಿಲ್ಲ. ಜೆಸಿಬಿಯಲ್ಲಿ ಅವರ ಮೃತದೇಹ ತಳ್ಳಿ ಅಪಮಾನ ಮಾಡಿದರು. ಶೆಟ್ಟರ್ ಮನಸ್ಸು ಮಾಡಿದ್ದರೆ ಇಲ್ಲಿಯೇ ಅಂತ್ಯಸಂಸ್ಕಾರ ಮಾಡಬಹುದಿತ್ತು. ಅಂಗಡಿ ಅವರಿಗೆ ಅಗೌರವ ತೋರಿಸಿದ್ದಾರೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದಲ್ಲಿ ಕಾಂಗ್ರೆಸ್ 10 ಕ್ಷೇತ್ರ ಗೆಲ್ಲಲಿದ್ದು, 12 ಸ್ಥಾನ ಗೆದ್ದರೂ ಅಚ್ಚರಿ ಇಲ್ಲ. ರಾಜ್ಯದಲ್ಲಿ ನಾವು 20ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು
ಎ ದರ್ಜೆ ದೇವಾಲಯಗಳ ಆದಾಯದಲ್ಲಿ ಶೇ.10ರಷ್ಟನ್ನು ಸಿ ದರ್ಜೆಯ ದೇವಾಲಯಗಳ ಅಭಿವೃದ್ಧಿಗೆ ಬಳಸುವ ಐತಿಹಾಸಿಕ ಕಾನೂನು ಸರಕಾರ ತಂದಿತ್ತು. ಇದರಿಂದ ಹಳ್ಳಿಗಳಲ್ಲಿರುವ ಮಾರಮ್ಮ, ಕೆಂಕೇರಮ್ಮ, ಕಬ್ಟಾಳಮ್ಮ ಸಹಿತ ಸ್ಥಳೀಯ ದೇವಾಲಯಗಳ ಅಭಿವೃದ್ಧಿಗೆ ಸಹಕಾರಿಯಾಗುತ್ತಿತ್ತು. ಅಲ್ಲದೆ ಅರ್ಚಕರ ಮಕ್ಕಳ ಶಿಕ್ಷಣ, ವಿಮೆ, ಪಿಂಚಣಿ ಭದ್ರತೆಗೆ ನೀಡಲು ಮುಂದಾದರೆ ಬಿಜೆಪಿಯವರು ರಾಜ್ಯಪಾಲರಿಗೆ ಹೇಳಿ ಕಾನೂನಿಗೆ ತಡೆ ಹಿಡಿದಿದ್ದಾರೆ. ಈ ಕಾಯ್ದೆಯನ್ನು ವಿರೋಧಿಸುವ ಬಿಜೆಪಿ ಇನ್ನು ಯಾವ ರೀತಿಯಲ್ಲಿ ಧರ್ಮ ರಕ್ಷಣೆ ಮಾಡುತ್ತದೆ? ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅರ್ಚಕರಿಗೆ ನೆರವಾಗಲು ಬಿಜೆಪಿ ಅಡ್ಡಿ ಮಾಡಿದೆ ಎಂದು ಡಿಕೆಶಿ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.