![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jun 5, 2020, 6:17 AM IST
ಘಟಪ್ರಭಾ: ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಹರಡದಂತೆ ತಡೆಯಲು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಹೋಮ್ ಕ್ವಾರಂಟೈನ್‌ನಲ್ಲಿರುವ ಜನರ ಮನೆಗಳಿಗೆ ಪ್ರತಿದಿನ ಭೇಟಿ ನೀಡಿ ಪರಿಶೀಲನೆ ಮಾಡಬೇಕೆಂದು ಮುಖ್ಯಾಧಿಕಾರಿಗಳಾದ ಕೆ. ಬಿ. ಪಾಟೀಲ ಹೇಳಿದರು. ಅವರು ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ಗುರುವಾರ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.
ಅನ್ಯ ರಾಜ್ಯಗಳಿಂದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು, ಭಕ್ತಾದಿಗಳು ಹಾಗೂ ಇತರೇ ಜನರು ಆಗಮಿಸಿದ್ದು, ಅಂತಹ ಜನರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮಾಡಬೇಕು. ಅವಧಿ ಮುಗಿದ ನಂತರ ಹೋಮ್ ಕ್ವಾರಂಟೈನ್‌ನಲ್ಲಿ ಇಡಬೇಕು. ಹೋಮ್ ಕ್ವಾರಂಟೈನ್‌ನಲ್ಲಿರುವ ಮನೆಗಳಿಗೆ ಪ್ರತಿ ದಿನ ಭೇಟಿ ನೀಡಿದ ಮಾಹಿತಿಯನ್ನು ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಬೇಕು. ತಮ್ಮ ವಾರ್ಡ ವ್ಯಾಪ್ತಿಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿವಳಿಕೆ ನೀಡಬೇಕೆಂದು ಹೇಳಿದರು.
ಪಟ್ಟಣ ಪಂಚಾಯತ್ ಸದಸ್ಯರು, ಆರೋಗ್ಯ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.