ದಕ್ಷಿಣ ಕನ್ನಡ: 86 ಡ್ರಗ್ಸ್ ಪ್ರಕರಣ; ಸದನದಲ್ಲಿ ಗೃಹ ಸಚಿವ ಆರಗ ಮಾಹಿತಿ
Team Udayavani, Dec 28, 2022, 8:08 PM IST
ಬೆಳಗಾವಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ವರ್ಷಗಳ ಅವಧಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಖಾಸಗಿ ಕಂಪೆನಿ ಉದ್ಯೋಗಿಗಳನ್ನು ಗುರಿಯಾಗಿ ಇರಿಸಿಕೊಂಡು ನಡೆದ ಡ್ರಗ್ಸ್ ಮಾರಾಟದ ಒಟ್ಟು 86 ಪ್ರಕರಣಗಳು ದಾಖಲಾಗಿವೆ.
ಅವುಗಳಲ್ಲಿ 280 ಕೆ.ಜಿ.ಗೂ ಅಧಿಕ ಗಾಂಜಾ ಮತ್ತು ಇತರ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
146 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ 18 ಪ್ರಕರಣಗಳಲ್ಲಿ 24 ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ವಿಧಾನಪರಿಷತ್ತಿನ ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಅವರ ಪ್ರಶ್ನೆಗೆ ಲಿಖಿತ ಉತ್ತರವನ್ನು ಗೃಹ ಸಚಿವರು ಸದನದಲ್ಲಿ ಮಂಡಿಸಿದ್ದು, ಅದರಲ್ಲಿ ಈ ಮಾಹಿತಿ ಒದಗಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ 2019ರಲ್ಲಿ 17 ಪ್ರಕರಣಗಳು ದಾಖಲಾಗಿದ್ದು, 22 ಆರೋಪಿಗಳನ್ನು ಬಂಧಿಸಲಾಗಿದೆ. 6 ಕೆ.ಜಿ. ಗಾಂಜಾ ವಶಪಡಿಸಿಕೊಂಡು 3 ಪ್ರಕರಣಗಳಲ್ಲಿ 5 ಮಂದಿ ಆರೋಪಿಗಳಿಗೆ ಶಿಕ್ಷೆಯಾಗಿದೆ.
2020ರಲ್ಲಿ 28 ಪ್ರಕರಣಗಳಲ್ಲಿ 55 ಆರೋಪಿಗಳನ್ನು ಬಂಧಿಸಲಾಗಿದ್ದು, 251.16 ಕೆ.ಜಿ. ಗಾಂಜಾ, 350 ಗ್ರಾಂ ಹಶೀಷ್ ಆಯಿಲ್ ವಶಪಡಿಸಿಕೊಳ್ಳಲಾಗಿದ್ದು, 7 ಪ್ರಕರಣಗಳಲ್ಲಿ 8 ಮಂದಿಗೆ ಶಿಕ್ಷೆಯಾಗಿದೆ.
2021ರಲ್ಲಿ 9 ಪ್ರಕರಣಗಳಲ್ಲಿ 20 ಆರೋಪಿಗಳನ್ನು ಬಂಧಿಸಲಾಗಿದ್ದು, 12 ಕೆ.ಜಿ. ಗಾಂಜಾ, 350 ಗ್ರಾಂ ಹಶೀಷ್ ಆಯಿಲ್, 3.19 ಗ್ರಾಂ ಎಂಡಿಎಂಎ, 1.20 ಗ್ರಾಂ ಎಲ್‌ಎಸ್‌ಡಿ ವಶಪಡಿಸಿಕೊಳ್ಳಲಾಗಿದ್ದು, ಯಾವ ಪ್ರಕರಣದಲ್ಲೂ ಶಿಕ್ಷೆಯಾಗಿಲ್ಲ.
2022ರ ನವೆಂಬರ್ ಅಂತ್ಯದ ವರೆಗೆ 32 ಪ್ರಕರಣಗಳು ದಾಖಲಾಗಿದ್ದು, 49 ಆರೋಪಿಗಳನ್ನು ಬಂಧಿಸಲಾಗಿದೆ. 8 ಪ್ರಕರಣಗಳಲ್ಲಿ 11 ಮಂದಿಗೆ ಶಿಕ್ಷೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಮಾದಕ ವಸ್ತುಗಳ ಅಕ್ರಮ ಸಾಗಾಣಿಕೆ, ಮಾರಾಟ ಮಾಡಲು ಯತ್ನಿಸುವ, ಮಾದಕ ವಸ್ತುಗಳ ಸೇವನೆ ಹಾಗೂ ಮಾದಕ ವಸ್ತುಗಳನ್ನು ಅಕ್ರಮವಾಗಿ ಹೊಂದಿದವರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುತ್ತಿದೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ದ್ರವ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.