ಟಿಪ್ಪುವಿನಿಂದ ರಾಜಮನೆತನಕ್ಕೆ ಹಾನಿ
Team Udayavani, Nov 15, 2018, 6:00 AM IST
ಬೆಳಗಾವಿ: “”ಟಿಪ್ಪು ಸುಲ್ತಾನ್‌ನಿಂದ ನಮ್ಮ ಕುಟುಂಬಕ್ಕೆ ತುಂಬಾ ತೊಂದರೆಯಾಗಿದೆ. ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿರುವುದಕ್ಕೆ ವೈಯಕ್ತಿಕವಾಗಿ ನಮ್ಮ ಬೆಂಬಲವಿಲ್ಲ” ಎಂದು ಮೈಸೂರಿನ ರಾಜಮಾತೆ ಪ್ರಮೋದಾದೇವಿ ಹೇಳಿದರು.
ನಗರದ ಕೆಎಲ್‌ಇ ಸಂಸ್ಥೆಯ ಫಿಸಿಯೋಥೆರಪಿ ವಿಭಾಗವನ್ನು ಬುಧವಾರ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “”ಒಂದು ಕುಟುಂಬಕ್ಕೆ ತೊಂದರೆ ಆದರೇನಂತೆ ಎಂಬ ಭಾವನೆಯಿಂದ ಸರ್ಕಾರ ನೋಡುತ್ತಿರಬಹುದು. ಯಾವ ಆಧಾರ ಇಟ್ಟುಕೊಂಡು ಜಯಂತಿ ಆಚರಣೆ ಎಂಬುದು ಗೊತ್ತಿಲ್ಲ. ವೈಯಕ್ತಿಕವಾಗಿ ಜಯಂತಿಯ ಪರವಾಗಿಯೂ ಇಲ್ಲ, ವಿರೋಧಕ್ಕೆ ಬೆಂಬಲವೂ ಇಲ್ಲ. ಈ ಬಗ್ಗೆ ಮಾತನಾಡುತ್ತ ಹೋದರೆ ಮನಸ್ಸಿಗೆ ನೋವಾಗುವುದೇ ಜಾಸ್ತಿ. ಹೀಗಾಗಿ, ದೂರವಿರುವುದೇ ಒಳ್ಳೆಯದು. ಟಿಪ್ಪು ಜಯಂತಿಯಂತೆ ಇನ್ನುಳಿದ ಸ್ವಾತಂತ್ರ್ಯವೀರರ, ಮಹಾನ್ ನಾಯಕರ ಜಯಂತಿ ಆಚರಿಸಲಿ ಎಂಬುದೇ ನಮ್ಮ ಆಶಯ” ಎಂದರು.
ರಾಜಕೀಯದ ಆಸಕ್ತಿ ಇಲ್ಲ:
ಇದೇ ವೇಳೆ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ ರಾಜಮಾತೆ ಪ್ರಮೋದಾದೇವಿ, “”ಚುನಾವಣೆಗೆ ಸ್ಪರ್ಧಿಸಬೇಕೆನ್ನುವ ಆಸಕ್ತಿ ಇಲ್ಲ. ಪುತ್ರ ಯದುವೀರ್‌ಗೂ ರಾಜಕೀಯ ಸೇರುವ ಆಸಕ್ತಿ ಇಲ್ಲ. ಮುಂದಿನ ದಿನಗಳಲ್ಲಿ ಮತ್ತೆ ಮನಸ್ಸು ಬದಲಾಯಿಸಿಬಹುದು, ಗೊತ್ತಿಲ್ಲ. ಪ್ರತಿ ಚುನಾವಣೆ ವೇಳೆಯಲ್ಲೂ ಎಲ್ಲ ಪಕ್ಷದವರೂ ಬಂದು ಭೇಟಿ ಆಗುತ್ತಾರೆ. ಸುಮಾರು 15 ವರ್ಷಗಳಿಂದ ನಮ್ಮನ್ನು ಸಂಪರ್ಕ ಮಾಡುತ್ತಿದ್ದಾರೆ. ನಮಗೆ ಆಸಕ್ತಿ ಇಲ್ಲವೆಂದು ಅರ್ಥ ಮಾಡಿಕೊಂಡು ಸುಮ್ಮನಾಗುತ್ತಾರೆ” ಎಂದು ಹೇಳಿದರು.
ಬಿಜೆಪಿ ಸೇರುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪಕ್ಕದಲ್ಲಿದ್ದ ರಾಜ್ಯಸಭಾ ಸದಸ್ಯ ಡಾ| ಪ್ರಭಾಕರ ಕೋರೆ ಪ್ರತಿಕ್ರಿಯಿಸಿ, ಸಮಯ ಬಂದಾಗ ನಾವೇ ಎಲ್ಲವನ್ನೂ ಹೇಳುತ್ತೇವೆ ಎಂದು ನಕ್ಕರು.
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿ, ಇದು ದೇವಸ್ಥಾನದ ನಂಬಿಕೆ ಹಾಗೂ ಪರಂಪರೆ ಮೇಲೆ ಅವಲಂಬಿತವಾಗಿರುತ್ತದೆ. ಮಹಿಳೆಯರಿಗೂ ಸಮಾನತೆಯ ಹಕ್ಕು ಇದೆ. ಧಾರ್ಮಿಕ ನಂಬಿಕೆಯ ವಿಚಾರವೂ ಇದಾಗಿದೆ. ನಮ್ಮ ಮನೆಯ ಪದ್ಧತಿ-ಪರಂಪರೆಯನ್ನು ಅನುಸರಿಸಿಕೊಂಡು ಹಿಂದಿನಿಂದಲೂ ಬರಲಾಗಿದೆ. ಹೀಗಾಗಿ, ಶಬರಿಮಲೆಗೆ ಹೋಗಬೇಕೋ, ಬೇಡವೋ ಎಂಬುದು ಅವರವರ ಭಾವಕ್ಕೆ ಬಿಟ್ಟಿದ್ದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.