ಡಂಬಳ: ಪಾಳು ಬಿದ್ದಿವೆ ತನಿಖಾ ಠಾಣೆಗಳು
Team Udayavani, Jul 11, 2023, 6:45 PM IST
ಡಂಬಳ: ಅಕ್ರಮ ಮರಳುಗಾರಿಕೆ, ಗಣಿಗಾರಿಕೆಗೆ ಕಡಿವಾಣ ಹಾಕಬೇಕಿದ್ದ ತನಿಖಾ ಠಾಣೆಗಳು ಕಾರ್ಯ ನಿರ್ವಹಿಸದೆ ಪಾಳು ಬಿದ್ದಿವೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆ 2016ರಲ್ಲಿ ಲಕ್ಷಾಂತರ ರೂ.ಖರ್ಚು ಮಾಡಿ ಗದಗ ಜಿಲ್ಲೆಯ ಬಸಾಪೂರ ಕ್ರಾಸ್, ಅಡವಿಸೋಮಾಪುರ ಕ್ರಾಸ್, ದುಂದೂರು ಕ್ರಾಸ್, ಗೋನಾಳ ಕ್ರಾಸ್, ಮಾಗಡಿ-ಮಾಡಳ್ಳಿ ಕ್ರಾಸ್, ರಾಮಗಿರಿ
ಕ್ರಾಸ್, ಹಳ್ಳಿಕೇರಿ, ಕುರವಿನಕೊಪ್ಪ, ಕೊರ್ಲಹಳ್ಳಿ, ಬೆಳವಣಕಿ, ಹೊಳೆಆಲೂರು, ಹಿರೇಹಳ್ಳ, ಅಚ್ಚಮಟ್ಟಿ ಕ್ರಾಸ್, ಕಣಿಕಿಕೊಪ್ಪ, ಹುಣಸಿಕಟ್ಟಿ, ಕಣ್ಣೂರು ಗ್ರಾಮದ ಬಳಿ ಸೇರಿ 16 ಸ್ಥಳಗಳಲ್ಲಿ ತನಿಖಾ ಠಾಣೆಗಳನ್ನು ಸ್ಥಾಪಿಸಿದೆ. ಈ ಪೈಕಿ ಕೊರ್ಲಹಳ್ಳಿ ಹಾಗೂ
ನರಗುಂದದಲ್ಲಿ ಮಾತ್ರ ಈ ಠಾಣೆಗಳು ಕಾರ್ಯ ನಿರ್ವಹಿಸುತ್ತಿದ್ದು, ಡಂಬಳ ವ್ಯಾಪ್ತಿಯ ಹಳ್ಳಿಕೇರಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ತನಿಖಾ ಠಾಣೆ ಪಾಳು ಬಿದ್ದು ಕುಡುಕರ ಅಡ್ಡೆಯಾಗಿದೆ. ಕಟ್ಟಡ ಬಿರುಕು ಬಿಟ್ಟಿದೆ.
ಎಲ್ಲೆಲ್ಲ ಅಕ್ರಮ ದಂಧೆ: ಐತಿಹಾಸಿಕ ಡಂಬಳ, ಹಿರೇವಡ್ಡಟ್ಟಿ, ಬರದೂರ, ಮೇವುಂಡಿ ದೊಡ್ಡಹಳ್ಳ, ಯಕ್ಲಾಸಪೂರ,
ಜಂತ್ಲಿ-ಶಿರೂರು ಭಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಸರ್ಕಾರಕ್ಕೆ ತೆರಿಗೆ ಪಾವತಿಸದೇ ಅಕ್ರಮವಾಗಿ ಅಕ್ರಮ ಕಲ್ಲು ಸಾಗಣೆ ಜೋರಾಗಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಅವಧಿ ಮುಗಿದರೂ ಅಕ್ರಮವಾಗಿ ರಾತ್ರೋರಾತ್ರಿ
ತುಂಗಭದ್ರಾ ನದಿತಟದಿಂದ ಟಿಪ್ಪರ್, ಟ್ರಾಕ್ಟರ್ ಮೂಲಕ ಮರಳು ಸಾಗಾಣಿಕೆ ದಂಧೆ ಎಗ್ಗಿಲ್ಲದೆ ಸಾಗಿದೆ.
*ವಿಜಯ ಸೊರಟೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.