![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Nov 25, 2023, 12:44 PM IST
ಬೆಳಗಾವಿ: ಇಲ್ಲಿಯ ದಂಡು ಮಂಡಳಿಯ ಸಿ.ಇ.ಓ. ಕೆ. ಆನಂದ ಅವರು ನಿಗೂಢ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವು ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ.
ಕ್ಯಾಂಪ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.25ರ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬೆಳಗಾವಿ ದಂಡು ಮಂಡಳಿಯಲ್ಲಿ ಕಳೆದ ಒಂದುವರೆ ವರ್ಷಗಳಿಂದ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದ ಕೆ.ಆನಂದ್ ಮೂಲತಃ ತಮಿಳುನಾಡಿನವರು. ಶನಿವಾರ ಬೆಳಿಗ್ಗೆ ಅವರ ಮನೆ ಬಾಗಿಲು ತೆಗೆಯದೇ ಇದ್ದಾಗ ಅನುಮಾನಗೊಂಡ ಅಲ್ಲಿನ ಸಿಬ್ಬಂದಿಗಳು ಕ್ಯಾಂಪ್ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಆನಂದ್ ಶವವಾಗಿ ಪತ್ತೆಯಾಗಿದ್ದಾರೆ.
ದಂಡು ಮಂಡಳಿಯ ನೇಮಕಾತಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂಬ ಆರೋಪ ಹಾಗೂ ದೂರುಗಳ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಸಿಬಿಐ ಅಧಿಕಾರಿಗಳು ದಂಡು ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ಬೆನ್ನಲ್ಲೇ ಈಗ ಸಿಇಒ ಆನಂದ್ ಆತ್ಮಹತ್ಯೆ ಮಾಡಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.