ಫುಟ್‌ಪಾತ್ ಅತಿಕ್ರಮಣ ತೆರವಿಗೆ ಡಿಸಿ ಸೂಚನೆ
ನೀರು ಪೂರೈಕೆ; 24 ಗಂಟೆಯಲ್ಲಿ ಸಮಸ್ಯೆ ಪರಿಹರಿಸಿ ; ಆದ್ಯತೆ ಮೇರೆಗೆ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸಿ
Team Udayavani, Jun 3, 2022, 2:54 PM IST
ಬೆಳಗಾವಿ: ಫುಟ್‌ಪಾತ್ ಅತಿಕ್ರಮಣ ತೆರವುಗೊಳಿಸುವ ಜೊತೆಗೆ ನಗರದ ಸೌಂದಯೀìಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕುಡಿವ ನೀರು ಪೂರೈಕೆಗೆ ಸಂಬಂಧಿಸಿದ ದೂರು 24 ಗಂಟೆಯಲ್ಲಿ ಪರಿಹರಿಸುವಂತೆ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಆಗಿರುವ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಕಚೇರಿಗೆ ಗುರುವಾರ ಭೇಟಿ ನೀಡಿ ವಿವಿಧ ವಿಭಾಗಗಳ ಕಾರ್ಯಚಟುವಟಿಕೆ ಪರಿಶೀಲಿಸಿದ ನಂತರ ಅಧಿಕಾರಿಗಳ ಸಭೆ ನಡೆಸಿದ ಅವರು, ಕೆಲವು ಪ್ರಮುಖ ರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ಪಾದಚಾರಿ ಮಾರ್ಗ (ಫುಟ್ ಪಾತ್) ಒತ್ತುವರಿ ಮಾಡಿರುವುದು ಕಂಡುಬಂದಿದೆ. ಇದರಿಂದ ಸಾರ್ವಜನಿಕರ ಓಡಾಟ ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಆದ್ದರಿಂದ ಕೂಡಲೇ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಬೇಕು ಎಂದರು.
ನಗರದಲ್ಲಿ ಕುಡಿವ ನೀರಿನ ಸಮಸ್ಯೆಗೆ ಸಂಬಂಧಪಟ್ಟಂತೆ ಯಾವುದೇ ದೂರುಗಳು ಬಂದರೆ 24 ಗಂಟೆಗಳಲ್ಲಿ ಪರಿಹರಿಸುವ ಕೆಲಸ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಮಳೆಗಾಲ ಆರಂಭಗೊಳ್ಳುತ್ತಿರುವುದರಿಂದ ಒಳಚರಂಡಿ ಕಾಮಗಾರಿ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಪ್ರಮುಖ ರಸ್ತೆಗಳು ಹಾಗೂ ಜನವಸತಿ ಬಡಾವಣೆಗಳ ಅಕ್ಕಪಕ್ಕದಲ್ಲಿರುವ ನಾಲಾಗಳನ್ನು ಆಗಾಗ ಸ್ವತ್ಛಗೊಳಿಸಬೇಕು ಎಂದು ಹೇಳಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಸಂಬಂಧಿಸಿದಂತೆ ಡಿಜಿಟಲ್ ದಾಖಲೆ ಸಿದ್ಧಪಡಿಸಿ “ಇ-ಆಸ್ತಿ’ ತಂತ್ರಾಂಶ ಮೂಲಕ ಸಾರ್ವಜನಿಕರು ಸುಲಭವಾಗಿ ಪಡೆಯಲು ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಕಟ್ಟಡ ಪರವಾನಗಿಗೆ ಸಂಬಂಧಿಸಿದ ಅರ್ಜಿಗಳನ್ನು ಸಕಾಲದಲ್ಲಿ ವಿಲೇವಾರಿ ಮಾಡಬೇಕು. ವಿನಾಕಾರಣ ವಿಳಂಬ ಧೋರಣೆ ಅನುಸರಿಸಬಾರದೆಂದು ಎಚ್ಚರಿಸಿದರು.
ತೆರಿಗೆ ಸಂಗ್ರಹ ಹೆಚ್ಚಿಸಲು ಸಲಹೆ: ಮಹಾನಗರ ಪಾಲಿಕೆ ಪ್ರಸಕ್ತ ವರ್ಷದಲ್ಲಿ ಇದುವರೆಗೆ ಶೇ.48 ತೆರಿಗೆ ಸಂಗ್ರಹಿಸಿದೆ. ಇನ್ನುಳಿದ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ ಜಿಲ್ಲಾಧಿಕಾರಿ ಪಾಲಿಕೆಯ ಆಸ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ಡಾ| ರುದ್ರೇಶ್ ಘಾಳಿ ಮಾತನಾಡಿ, ಕುಡಿವ ನೀರು ಪೂರೈಕೆ, ಸ್ವಚ್ಛತೆ ಸೇರಿದಂತೆ ನಾಗರಿಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಪಾಲಿಕೆ ವತಿಯಿಂದ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಾಲಿಕೆ ಆವರಣದಲ್ಲಿ ಸಸಿ ನೆಡುವ ಮೂಲಕ ಉದ್ಯಾನವನದ ಸೌಂದರ್ಯೀಕರಣಕ್ಕೆ ಚಾಲನೆ ನೀಡಿದರು. ಪಾಲಿಕೆ ಉಪ ಆಯುಕ್ತರಾದ ಭಾಗ್ಯಶ್ರೀ ಹುಗ್ಗಿ, ಪಾಲಿಕೆ ಅಧಿಕಾರಿಗಳು ಇದ್ದರು.
ಸ್ಮಾರ್ಟ್‌ಸಿಟಿ ಕೇಂದ್ರಕ್ಕೆ ಭೇಟಿ: ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ನಾಗರಿಕರಿಗೆ ವಿವಿಧ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಕಾರ್ಯಚಟುವಟಿಕೆಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪರಿಶೀಲಿಸಿದರು. ವಿಶ್ವೇಶ್ವರಯ್ಯ ನಗರದಲ್ಲಿ ಇರುವ ಕಮಾಂಡ್ ಕಂಟ್ರೋಲ್ ಸೆಂಟರ್ ಗೆ ಗುರುವಾರ ಭೇಟಿ ನೀಡಿದ ಅವರು, ಈ ಸ್ಮಾರ್ಟ್ ಸಿಟಿ ಕೇಂದ್ರದ ಕಾರ್ಯ ನಿರ್ವಹಣೆ ಬಗ್ಗೆ ಮಾಹಿತಿ ಪಡೆದರು. ಸಂಚಾರ ನಿರ್ವಹಣೆ, ಬಸ್ ಸಂಚಾರ ಮಾಹಿತಿ, ಭದ್ರತಾ ನಿಗಾ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.