ಬೈಲವಾಡದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಬೆಳಗಾವಿ ಜಿಲ್ಲೆಯಲ್ಲಿ 20ರಂದು ವಾಸ್ತವ್ಯಕ್ಕೆ ಮುನ್ನುಡಿ,ಜನರ ಸಮಸ್ಯೆಗೆ ಸಿಗುವುದೇ ಸ್ಥಳದಲ್ಲೇ ಪರಿಹಾರ?

Team Udayavani, Feb 17, 2021, 6:08 PM IST

ಬೈಲವಾಡದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಬೆಳಗಾವಿ: ಗ್ರಾಮಗಳ ಜನರು ಪಿಂಚಣಿ, ವೃದ್ಧಾಪ್ಯ, ವಿಧವಾ ವೇತನದಂತಹ ಸಮಸ್ಯೆ ಎದುರಿಸಬಾರದು. ಪ್ರತಿ ಸಮಸ್ಯೆಗೆ ಪರಿಹಾರಕ್ಕಾಗಿ ಜಿಲ್ಲಾ ಕೇಂದ್ರಕ್ಕೆ ಬರುವಂತಾಗಬಾರದು.

ಬದಲಾಗಿ ಸ್ಥಳದಲ್ಲೇ ಸಾಧ್ಯವಾದಷ್ಟು ಪರಿಹಾರ ದೊರೆಯಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭಿಸುತ್ತಿದ್ದು ಬೆಳಗಾವಿ ಜಿಲ್ಲೆಯಲ್ಲಿಯೂ ಬರುವ ಶನಿವಾರ ಇದಕ್ಕೆ ಮುನ್ನುಡಿ ಸಿಗಲಿದೆ.

ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯಕ್ಕೆ ಹೊಸ ಪರಿಕಲ್ಪನೆ ಕೊಟ್ಟಿದ್ದರು. ನಂತರ ಜನಪ್ರತಿನಿಧಿಗಳ ಜತೆಗೆ ಅಧಿಕಾರಿಗಳಿಗೂ ಗ್ರಾಮ ವಾಸ್ತವ್ಯ ಕಡ್ಡಾಯವಾಗಿ ಮಾಡಲಾಗಿತ್ತು. ಆದರೆ ಹಿಂದಿನ ಸರ್ಕಾರದ ಅವಧಿಯಲ್ಲಿ ಈ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರಲೇ ಇಲ್ಲ. ಇದರಿಂದ ಗ್ರಾಮದ ಜನರು ಪಿಂಚಣಿ, ವೃದ್ಧಾಪ್ಯ ವೇತನ ಮೊದಲಾದ ಸೌಲಭ್ಯಗಳಿಗೆ ಜಿಲ್ಲಾ ಕೇಂದ್ರಕ್ಕೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಯಿತು.

ಈಗ ರಾಜ್ಯ ಸರ್ಕಾರ ಪ್ರತಿ ತಿಂಗಳು ಒಂದು ದಿನ ಗ್ರಾಮ ವಾಸ್ತವ್ಯ ಕಡ್ಡಾಯವಾಗಿ ಮಾಡಬೇಕೆಂದು ಆದೇಶಿಸಿದ್ದು ಇದರಿಂದ ಗ್ರಾಮದ ಬಡ ಜನರಲ್ಲಿ ಹೊಸ ಆಶಾಭಾವನೆ ಮೂಡಿದೆ. ತಮ್ಮ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸಿಗಲಿದೆ ಎಂಬ ವಿಶ್ವಾಸ ಮೂಡಿದೆ.

ರಾಜ್ಯ ಸರ್ಕಾರದ ನಿರ್ದೇಶನದಂತೆ ಗ್ರಾಮ ವಾಸ್ತವ್ಯಕ್ಕೆ ಮುಂದಾಗಿರುವ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ತಮ್ಮ ಮೊದಲ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮ ಆಯ್ಕೆ ಮಾಡಿಕೊಂಡಿದ್ದಾರೆ. ಬರುವ ಶನಿವಾರ ಫೆ.20ರಂದು ಗ್ರಾಮಕ್ಕೆ ಭೇಟಿ ನೀಡುವ ಜಿಲ್ಲಾಧಿಕಾರಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಗ್ರಾಮಸ್ಥರ ಕುಂದುಕೊರತೆ ಆಲಿಸಲಿದ್ದಾರೆ. ಸಂಜೆ 5 ಗಂಟೆಗೆ ಗ್ರಾಮದ ಜನರ ಸಭೆ ನಡೆಸಲಿದ್ದಾರೆ.

ವೇದಿಕೆ ಕಾರ್ಯಕ್ರಮದ ಬಳಿಕ ಗ್ರಾಮದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗದವರ ವಸತಿ ನಿಲಯದಲ್ಲಿ (ಹಾಸ್ಟೆಲ್‌) ಜಿಲ್ಲಾಧಿಕಾರಿಗಳು ವಾಸ್ತವ್ಯ ಮಾಡಲಿದ್ದು ವಿವಿಧ ಇಲಾಖೆ ಅಧಿಕಾರಿಗಳು ಇವರಿಗೆ ನೆರವು ನೀಡಲಿದ್ದಾರೆ.

ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮುಖ್ಯವಾಗಿ ಗ್ರಾಮದ ಜನರು ಎದುರಿಸುವ ಪಿಂಚಣಿ, ವೃದ್ಧಾಪ್ಯ, ಅಂಗವಿಕಲರ ವೇತನ ಮೊದಲಾದ ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಮಾಡಲಾಗುತ್ತದೆ. ಗ್ರಾಮದ ಸಂಕ್ಷಿಪ್ತ ಇತಿಹಾಸ: ಜಿಲ್ಲಾ ಕೇಂದ್ರ ಬೆಳಗಾವಿಯಿಂದ ಸುಮಾರು 38 ಕಿ.ಮೀ ದೂರದಲ್ಲಿರುವ ಬೈಲಹೊಂಗಲ ತಾಲೂಕಿನ ಬೈಲವಾಡ ದೊಡ್ಡದಾದ ಗ್ರಾಮವೇನಲ್ಲ. ಸಮಸ್ಯೆಗಳೂ ಇಲ್ಲಿ ಗಂಭೀರವಾಗಿಲ್ಲ. ಗ್ರಾಮದಲ್ಲಿ ಈಗ ಸುಮಾರು 3020 ಜನಸಂಖ್ಯೆ ಇದೆ. ಕೃಷಿ ಚಟುವಟಿಕೆ ಇಲ್ಲಿನ ಮುಖ್ಯ ಕಸಬು. ಬೈಲವಾಡ ಗ್ರಾಪಂ ತನ್ನ ವ್ಯಾಪ್ತಿಯಲ್ಲಿ ಯರಡಾಲ ಗ್ರಾಮವನ್ನು ಹೊಂದಿದೆ.

ಎಲ್ಲ ಗ್ರಾಮಗಳಂತೆ ಇಲ್ಲಿಯೂ ಸಮಸ್ಯೆಗಳಿವೆ. ಆದರೆ ನಿರೀಕ್ಷೆ ಮಾಡಿದಷ್ಟು ಗಂಭೀರವಾಗಿಲ್ಲ. ನಾಲ್ಕು ಕಡೆ ಇನ್ನೂ ಕಾಂಕ್ರೀಟ್‌ ರಸ್ತೆಗಳಾಗಬೇಕಿವೆ. ಚರಂಡಿವ್ಯವಸ್ಥೆ ಇನ್ನೂ ಸುಧಾರಣೆಯಾಗಬೇಕಿದ್ದು ನರೇಗಾ ಯೋಜನೆಯಡಿ ಇದರ ನಿರ್ಮಾಣ ಮಾಡಲುಉದ್ದೇಶಿಸಲಾಗಿದೆ ಎಂಬುದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಸ್‌.ಜಿ. ಪೂಜೇರಿ ಹೇಳಿಕೆ.

ಗ್ರಾಮದಲ್ಲಿ ಕುಡಿವ ನೀರಿಗಾಗಿ ಅಂದುಕೊಂಡಂತೆ ಹಾಹಾಕಾರ ಇಲ್ಲ. 13 ಬೋರ್‌ವೆಲ್‌ಗ‌ಳು ಮತ್ತು 11 ಕೈ ಪಂಪ್‌ಗ್ಳು ಕಾರ್ಯನಿರ್ವಹಿಸುತ್ತಿವೆ.ಆದರೆ ಶೌಚಾಲಯದ ವ್ಯವಸ್ಥೆ ಇನ್ನೂ ಸುಧಾರಣೆಕಾಣಬೇಕಾಗಿದೆ. ಪ್ರತಿಶತ 75ರಷ್ಟು ಮನೆಗಳುವೈಯಕ್ತಿಕ ಶೌಚಾಲಯ ಹೊಂದಿವೆ. ಜಾಗದಸಮಸ್ಯೆಯಿಂದಾಗಿ ಸಮುದಾಯ ಶೌಚಾಲಯ ಗ್ರಾಮದಲ್ಲಿ ಕಾಣುತ್ತಿಲ್ಲ. ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯದ ಕಾಲಕ್ಕೆ ಇದರ ಬಗ್ಗೆ ಗಮನಹರಿಸಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯದಲ್ಲಿ ಕಂದಾಯ ಇಲಾಖೆ ಯೋಜನೆಗಳ ಜತೆಗೆ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೂ ಗಮನ ನೀಡಲಾಗುತ್ತಿದೆ. ಸ್ವತಃ ಜಿಲ್ಲಾಧಿಕಾರಿಗಳು ತಮ್ಮಗ್ರಾಮಕ್ಕೆ ಆಗಮಿಸಿ ಸಮಸ್ಯೆ ಕೇಳುತ್ತಿರುವುದರಿಂದ ಸಹಜವಾಗಿಯೇ ಗ್ರಾಮದ ಜನರಲ್ಲಿ ಹೊಸನಿರೀಕ್ಷೆಗಳು ಮೂಡಿವೆ. ತಮ್ಮ ತೊಂದರೆಗಳಿಗೆ ಇಲ್ಲಿಯೇ ಪರಿಹಾರ ಸಿಗುತ್ತದೆ ಎಂಬ ಆಶಾಭಾವನೆ ಹೊಂದಿದ್ದಾರೆ. ಇನ್ನೊಂದೆಡೆ ಗ್ರಾಪಂ ಅಧಿಕಾರಿಗಳು ಕಂದಾಯ ಇಲಾಖೆ ವ್ಯಾಪ್ತಿಯ ಯೋಜನೆ ಫಲಾನುಭವಿಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ.

ತಮ್ಮ ಮೊದಲ ಗ್ರಾಮ ವಾಸ್ತವ್ಯಕ್ಕೆ ಬೈಲವಾಡ ಗ್ರಾಮ ಆಯ್ಕೆ ಮಾಡಿಕೊಳ್ಳಲಾಗಿದೆ. ಇಲ್ಲಿ ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಸಮಸ್ಯೆ ಆಲಿಸಿ ಅವುಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಡಲು ಪ್ರಯತ್ನಿಸಲಾಗುವುದು. ಮುಖ್ಯವಾಗಿ ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲರ ವೇತನ, ವಿಧವಾ ವೇತನ ಮೊದಲಾದ ಸಮಸ್ಯೆಗಳಿಗೆ ಹೆಚ್ಚಿನ ಗಮನ ನೀಡಲಾಗುವುದು. ಇದಲ್ಲದೆ ಗ್ರಾಮದ ಮೂಲ ಸೌಲಭ್ಯಗಳ ಬಗ್ಗೆ ಜನರಿಂದ ಆಹವಾಲು ಆಲಿಸಲಾಗುತ್ತದೆ. – ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

ಗ್ರಾಮದಲ್ಲಿ ಈಗ 340 ಜನರು ಸಂಧ್ಯಾ ಸುರಕ್ಷಾ, ಮನಸ್ವಿನಿ, ವಿಧವಾ ವೇತನ, ಅಂಗವಿಕಲರ ವೇತನ ಹಾಗೂ ವೃದ್ಧಾಪ್ಯ ವೇತನ ಸೌಲಭ್ಯ ಪಡೆಯುತ್ತಿದ್ದಾರೆ. ಇದಲ್ಲದೆಈಗ ಹೊಸದಾಗಿ ಮೂವರು ಸಂಧ್ಯಾ ಸುರಕ್ಷಾ ಯೋಜನೆ, ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದರ ಹೊರತಾಗಿ ಗ್ರಾಮದಲ್ಲಿವಿವಿಧ ಸೌಲಭ್ಯ ಪಡೆಯಬೇಕಾದವರ ಮಾಹಿತಿ ಸಂಗ್ರಹಿಸಲಾಗುತ್ತಿದೆ.  -ಸುಮಾ, ಗ್ರಾಮ ಲೆಕ್ಕಾಧಿಕಾರಿ

ಗ್ರಾಮದಲ್ಲಿ ಅಂತಹ ಗಂಭೀರ ಸಮಸ್ಯೆಗಳಿಲ್ಲ. ಉದ್ಯೋಗ ಖಾತ್ರಿ ಯೋಜನೆಯಡಿ ಗಟಾರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಶೌಚಾಲಯ ನಿರ್ಮಾಣಕ್ಕೆ ವಿಶೇಷ ಗಮನ ಹರಿಸಲಾಗಿದೆ. ಕುಡಿವ ನೀರಿನ ಎಲ್ಲ ಬೋರ್‌ವೆಲ್‌ಗ‌ಳು ಕಾರ್ಯನಿರ್ವಹಿಸುತ್ತಿವೆ. – ಎಸ್‌.ಜಿ. ಪೂಜೇರಿ, ಪಿಡಿಒ, ಬೈಲವಾಡ ಗ್ರಾಪಂ

-ಕೇಶವ ಆದಿ

ಟಾಪ್ ನ್ಯೂಸ್

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.