ಹಂತ ಹಂತಗಳಲ್ಲಿ ನೀರು; ಮಹಾ ಒಪ್ಪಿಗೆ

ಒಮ್ಮೆಲೆ ನೀರು ಬಿಟ್ಟರೆ ರಾಜ್ಯದಲ್ಲಿ ಪ್ರವಾಹ | ಆದರೂ ಪ್ರವಾಹ ಎದುರಿಸಲು ಸನ್ನದ್ಧರಾಗಿರಿ: ಡಿಸಿಎಂ ಕಾರಜೋಳ

Team Udayavani, Jun 24, 2021, 4:49 PM IST

IMG_1115

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಜಲಾಶಯಗಳು ಸಂಪೂರ್ಣ ಭರ್ತಿಯಾದಾಗ ಒಮ್ಮೆಲೇ ನೀರು ಬಿಡುಗಡೆ ಮಾಡಿದರೆ ರಾಜ್ಯದಲ್ಲಿ ತೊಂದರೆಯಾಗುತ್ತದೆ. ಆದ್ದರಿಂದ ಹಂತ ಹಂತವಾಗಿ ನೀರು ಬಿಡುಗಡೆ ಮಾಡಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

ಮುಂಗಾರು ಮಳೆಯಿಂದ ತೊಂದರೆಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ಕೋವಿಡ್‌ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಚಿಕ್ಕೋಡಿ ಉಪವಿಭಾಗ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಂತ ಹಂತವಾಗಿ ನೀರು ಬಿಡುಗಡೆಗೆ ಮಹಾರಾಷ್ಟ್ರ ಸರಕಾರ ಸಹಮತ ವ್ಯಕ್ತಪಡಿಸಿದೆ. ಪ್ರವಾಹ ಪರಿಸ್ಥಿತಿ ಉದ್ಭವಿಸಿದರೆ ನದಿತೀರದ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಪ್ರವಾಹ ಬಂದಾಗ ಸಂಪೂರ್ಣ ಜಲಾವೃತವಾಗುವ ಗ್ರಾಮಗಳ ಜನರು ಹಾಗೂ ಜಾನುವಾರುಗಳ ರಕ್ಷಣೆಗೆ ಆದ್ಯತೆ ನೀಡಬೇಕು. ಪ್ರವಾಹ ಸಂದರ್ಭದಲ್ಲಿ ತುರ್ತು ಸೇವೆಗೆ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ದೀರ್ಘ‌ ರಜೆ ನೀಡಬಾರದು. ತುರ್ತು ಸಂದರ್ಭದಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಔಷಧ ಮತ್ತಿತರ ಅಗತ್ಯ ಸಾಮಗ್ರಿಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಚಿಕಿತ್ಸೆಗೆ ಆಗಮಿಸುವ ಜನರಿಗೆ ಔಷಧ ಚೀಟಿ ಬರೆದುಕೊಟ್ಟರೆ ಸಂಬಂಧಿಸಿದ ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮನೆ ಹಾನಿ ಸಮೀಕ್ಷೆ: ಮನೆ ಹಾನಿಯ ಕುರಿತು ಅನೇಕ ಜನರು ಅಹವಾಲು ಸಲ್ಲಿಸುತ್ತಾರೆ. ಮುಕ್ತ ಮನಸ್ಸಿನಿಂದ ಪರಿಹಾರ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಬೇಕು. ಮಣ್ಣು ಹಾಗೂ ಮೇಲ್‌ ಮುದ್ದಿಗಳು ಈ ಭಾಗದಲ್ಲಿ ಪಕ್ಕಾ ಮನೆಗಳೇ ಆಗಿರುವುದರಿಂದ ಅವುಗಳನ್ನು ಪಕ್ಕಾ ಮನೆ ಎಂದೇ ಪರಿಗಣಿಸಿ ಪರಿಹಾರ ನೀಡಬೇಕು. ಭಾಗಶಃ ಮನೆಹಾನಿಗಳನ್ನು ಸಮೀಕ್ಷೆ ಮಾಡುವಾಗ ಸ್ಥಳೀಯ ಜನರ ಸ್ಥಿತಿಗತಿ ಆಧರಿಸಿ ಉದಾರ ಮನೋಭಾವದಿಂದ ಪರಿಹಾರಕ್ಕೆ ಪರಿಗಣಿಸಬೇಕು ಎಂದರು.

ಪ್ರವಾಹ ಮುನ್ನೆಚ್ಚರಿಕೆ ಅಗತ್ಯ: ಪ್ರತಿವರ್ಷ ಪ್ರವಾಹ ಉಂಟಾಗುತ್ತಿದೆ. ಈ ಬಾರಿ ಆರಂಭದಲ್ಲಿಯೇ ಜಾಸ್ತಿ ಮಳೆಯಾಗಿರುವುದರಿಂದ ಬಹಳಷ್ಟು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ವಿಧಾನಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ನೆರೆಯ ರಾಜ್ಯದ ಅಧಿಕಾರಿಗಳ ಜತೆ ಸಮನ್ವಯದಿಂದ ಪ್ರವಾಹ ಸ್ಥಿತಿ ನಿರ್ವಹಿಸಬೇಕು. ನದಿತೀರದ ಗ್ರಾಮಗಳಲ್ಲಿ ಕೆಲವು ಕಡೆ ಹೆಚ್ಚಿನ ಜನಸಂಖ್ಯೆ ಇರುವುದರಿಂದ ತುರ್ತು ಸಂದರ್ಭದಲ್ಲಿ ತಕ್ಷಣವೇ ಸ್ಥಳಾಂತರಕ್ಕೆ ಅನುಕೂಲವಾಗುವಂತೆ ಆಯಾ ಗ್ರಾಮದಲ್ಲಿ ಬೋಟ್‌ ಸಜ್ಜಾಗಿಟ್ಟಿರಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಪ್ರವಾಹ ಸಂದರ್ಭದಲ್ಲಿ ಜನರನ್ನು ಸ್ಥಳಾಂತರಿಸಿ ತಾತ್ಕಾಲಿಕ ವಸತಿ ಕಲ್ಪಿಸಲು ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶಗಳಿದ್ದು, ಈ ಬಗ್ಗೆ ಪರಿಶೀಲಿಸಬೇಕು ಎಂದು ಮಹಾಂತೇಶ ಕವಟಗಿಮಠ ತಿಳಿಸಿದರು.

ನೆರೆ ರಾಜ್ಯದ ಗಡಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ. ಈ ಬಾರಿ ಕೂಡ ಸಮಸ್ಯೆ ಉದ್ಭವಿಸದಂತೆ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಈಗಾಗಲೇ ಕಾಳಜಿ ಕೇಂದ್ರಕ್ಕಾಗಿ ಗುರುತಿಸಲಾಗಿರುವ ಯಾವುದಾದರೂ ಶಾಲಾ ಕಟ್ಟಡಗಳು ಶಿಥಿಲಗೊಂಡಿದ್ದರೆ ಅವುಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಚಿಕ್ಕೋಡಿ ಉಪ ವಿಭಾಗದಲ್ಲಿ ಇದುವರೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಉಪ ವಿಭಾಗಾಧಿಕಾರಿ ಯುಕೇಶ್‌ ಕುಮಾರ್‌, ಜೂನ್‌ ತಿಂಗಳಲ್ಲಿ ಒಟ್ಟಾರೆ ವಾಡಿಕೆ ಮಳೆಗಿಂತ ಶೇ.94 ಅಧಿಕ ಮಳೆಯಾಗಿದೆ. ಸದ್ಯಕ್ಕೆ ಕೇವಲ 67 ಕ್ಯೂಸೆಕ್‌ ನೀರಿನ ಹರಿವು ಇದೆ. ಎರಡೂವರೆ ಲಕ್ಷ ಕ್ಯೂಸೆಕ್‌ ನೀರಿನ ಹರಿವು ಇದ್ದರೆ ಮಾತ್ರ ಪ್ರವಾಹ ಸ್ಥಿತಿ ಉದ್ಭವಿಸುತ್ತದೆ ಎಂದು ತಿಳಿಸಿದರು. ಎಲ್ಲ ತಾಲೂಕುಗಳಲ್ಲಿ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ. ಎಸ್‌.ಡಿ.ಆರ್‌.ಎಫ್‌ ಹಾಗೂ ಎನ್‌.ಡಿ.ಆರ್‌. ಎಫ್‌. ತಂಡಗಳನ್ನು ನಿಯೋಜಿಸಲಾಗಿದೆ. ನುರಿತ ಈಜುಗಾರರನ್ನು ಗುರುತಿಸಲಾಗಿದ್ದು, ಅಗತ್ಯತೆ ಆಧರಿಸಿ ಅವರ ಸೇವೆಯನ್ನು ಪಡೆದುಕೊಳ್ಳಲಾಗುವುದು ಎಂದರು. ಇತ್ತೀಚೆಗೆ ಸುರಿದ ಮಳೆಯಲ್ಲಿ 43 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಚಿಕ್ಕೋಡಿ ಉಪ ವಿಭಾಗದಲ್ಲಿ 168 ಕಾಳಜಿ ಕೇಂದ್ರಗಳನ್ನು ಸಿದ್ಧಪಡಿಸಲಾಗಿಟ್ಟುಕೊಳ್ಳಲಾಗಿದೆ ಎಂದು ಯುಕೇಶ್‌ ಕುಮಾರ್‌ ಹೇಳಿದರು.

ಸಭೆಯಲ್ಲಿ ಜವಳಿ ಮತ್ತು ಕೈಮಗ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ, ರಾಜ್ಯಸಭೆ ಸದಸ್ಯ ಈರಣ್ಣಾ ಕಡಾಡಿ, ಶಾಸಕ ಮಹೇಶ ಕುಮಟೊಳ್ಳಿ, ಜಿಪಂ ಸಿಇಒ ದರ್ಶನ್‌ ಎಚ್‌ .ವಿ., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಡಿಪಿಐ ಗಜಾನನ ಮನ್ನಿಕೇರಿ, ಡಿವೈಎಸ್‌ಪಿ ಮನೋಜ ನಾಯಿಕ, ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

accident

Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು

1-kambala

Mangaluru Kambala; ಬಂಗ್ರಕೂಳೂರಿನಲ್ಲಿ ಚಾಲನೆ, ನಾಳೆ ಸಮಾರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.