ಬೇಡಿಕೆಗಾಗಿ ಮುಷ್ಕರ ನಡೆಸಲು ನಿರ್ಧಾರ
Team Udayavani, Jul 7, 2019, 3:10 PM IST
ಮೂಡಲಗಿ: ವಿವಿಧ ಬೇಡಿಕೆಗೆ ಆಗ್ರಹಿಸಿ ಒಂದು ದಿನ ಮುಷ್ಕರ ನಡೆಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವ್ಯವಸ್ಥಾಪಕ ಕಿಶೋರ ಮೋರೆಯವರಿಗೆ ಮನವಿ ಸಲ್ಲಿಸಲಾಯಿತು.
ಮೂಡಲಗಿ: ರಾಜ್ಯದಲ್ಲಿರುವ ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮಾರಕವಾಗುವ ನಿಟ್ಟಿನಲ್ಲಿ ವೃಂದ ಬಲ ಹಾಗೂ ನೇಮಕಾತಿ ನಿಯಮದ ವಿರುದ್ಧ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜು.9ರಂದು ಚಿಕ್ಕೋಡಿಯ ಡಯಟ್ ಆವರಣದಲ್ಲಿ ಒಂದು ದಿನ ಮುಷ್ಕರ ಹಮ್ಮಿಕೊಳ್ಳಲು ನಿರ್ಧರಿಸಿದೆ.
ಈ ಕುರಿತು ಮೂಡಲಗಿ ತಾಲೂಕು ಘಟಕ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕು. ಎನ್.ಪಿ.ಎಸ್ ರದ್ದುಗೊಳಿಸುವುದು. ಎಲ್.ಕೆ.ಜಿ, ಯು.ಕೆ.ಜಿ ಪ್ರಾರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿಯ ನ್ಯೂನ್ಯತೆ ಸರಿ ಪಡಿಸುವುದು. 6ನೇ ವೇತನ ಆಯೋಗ ಅಂತಿಮ ವರದಿಯ ಶಿಫಾರಸ್ಸನ್ನು ಅನುಷ್ಠಾನಗೊಳಿಸುವುದು. ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಹಾಗೂ ಇನ್ನಿತರ ಎಲ್ಲಾ ಸೇವಾ ಸೌಲಭ್ಯ ಒದಗಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಲೋಕನ್ನವರ, ತಾಲೂಕಾಧ್ಯಕ್ಷ ಬಿ.ಆರ್. ಥರಕಾರ, ಕಾರ್ಯದರ್ಶಿ ಎಲ್.ಎಂ. ಬಡಕಲ, ಸಹ ಕಾರ್ಯದರ್ಶಿ ಎ.ಪಿ. ಪರಸಣ್ಣವರ, ಸಂಘಟನಾ ಕಾರ್ಯದರ್ಶಿ ವೈ.ಡಿ ಜಲ್ಲಿ, ಸರಕಾರಿ ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯ ಆರ್.ಎಂ. ಮಹಾಲಿಂಗಪುರ, ಸದಸ್ಯರಾದ ಎಂ.ವೈ. ಸಣ್ಣಕ್ಕಿ, ಕೆ.ಆರ್ ಅಜ್ಜಪ್ಪನವರ, ಎಲ್.ಎಂ. ಬೂಮನ್ನವರ, ಕೆ.ಎಲ್. ಮೀಶಿ, ಪಿ.ಬಿ ಕುಲಕರ್ಣಿ, ಬಿ.ಎ ಡಾಂಗೆ, ಎಸ್.ಎಂ. ಮಂಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.