ನದಿ ನೀರಿನ ಮಟ್ಟದಲ್ಲಿ ಇಳಿಕೆ

•ಕೃಷ್ಣಾ-2, ದೂಧಗಂಗಾ-4 ಅಡಿ ಇಳಿಕೆ•'ಮಹಾ'ದಲ್ಲಿ ಮಳೆ ಕಡಿಮೆ

Team Udayavani, Jul 15, 2019, 10:08 AM IST

bg-tdy-2..

ಚಿಕ್ಕೋಡಿ: ಯಕ್ಸಂಬಾ-ದಾನವಾಡ ಸೇತುವೆ ಬಳಿ ದೂಧಗಂಗಾ ನದಿ ನೀರಿನಲ್ಲಿನ ಇಳಿಕೆಯಾಗಿದೆ.

ಚಿಕ್ಕೋಡಿ: ಮಹಾರಾಷ್ಟ್ರ ಕೊಂಕಣ ಭಾಗದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಅಬ್ಬರದ ಮಳೆ ಸಂಪೂರ್ಣ ತಗ್ಗಿದೆ. ಇದರಿಂದ ತಾಲೂಕಿನ ಕೃಷ್ಣಾ ನದಿ 2 ಅಡಿ ಮತ್ತು ದೂಧಗಂಗಾ ನದಿ ನೀರಿನ ಮಟ್ಟದಲ್ಲಿ ನಾಲ್ಕು ಅಡಿಯಷ್ಟು ಇಳಿಕೆ ಕಂಡಿದೆ.

ಕಳೆದ ಹದಿನೈದು ದಿನಗಳಿಂದ ಕೊಂಕಣ ಭಾಗವಾದ ಕೊಯ್ನಾ, ಮಹಾಬಳೇಶ್ವರ, ನವಜಾ, ರಾಧಾನಗರಿ, ಕಾಳಮ್ಮವಾಡಿ ಪ್ರದೇಶದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮ ಚಿಕ್ಕೋಡಿ ತಾಲೂಕಿನ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಳಗೊಂಡು ಮೂರು ನದಿಗಳು ಅಪಾಯ ಮಟ್ಟ ಮೀರಿ ಹರಿಯತೊಡಗಿದ್ದವು. ಆದರೆ ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಮಳೆರಾಯನ ರೌದ್ರಾವತಾರ ಕಡಿಮೆಯಾಗಿದೆ. ಇದರಿಂದ ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಎರಡು ಅಡಿಯಷ್ಟು ಇಳಿಕೆಯಾದರೆ ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟದಲ್ಲಿ ನಾಲ್ಕು ಅಡಿಯಷ್ಟು ಇಳಿಕೆ ಕಂಡಿದೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ರಾಜ್ಯಕ್ಕೆ 57911 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ದೂಧಗಂಗಾ ಮತ್ತು ವೇದಗಂಗಾ ನದಿಯಿಂದ 21,824 ಕ್ಯೂಸೆಕ್‌ ನೀರು ಹರಿದು ಕೃಷ್ಣಾ ನದಿಗೆ ಬರುತ್ತಿದ್ದು, ಇದರಿಂದ ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೃಷ್ಣಾ ನದಿಗೆ ಒಟ್ಟು 79.735 ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ.

ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯದಿಂದ 97 ಸಾವಿರ ಕ್ಯೂಸೆಕ್‌ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಹರಿಬಿಡಲಾಗುತ್ತಿದೆ. ಮಹಾರಾಷ್ಟ್ರದಿಂದ ಬರುವ ನೀರಿನ ಪ್ರಮಾಣದಷ್ಟೇ ಹಿಪ್ಪರಗಿ ಬ್ಯಾರೇಜ್‌ ಮೂಲಕ ಆಲಮಟ್ಟಿ ಅಣೆಕಟ್ಟಿಗೆ ಹರಿಬಿಡುವುದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಪ್ರವಾಹ ಎದುರಾಗಿಲ್ಲ. ಆಲಮಟ್ಟಿ ಅಣೆಕಟ್ಟಿನಿಂದ 28 ಸಾವಿರ ಕ್ಯೂಸೆಕ್‌ ನೀರನ್ನು ನಾರಾಯಣಪುರಕ್ಕೆ ಹರಿಬಿಡಲಾಗುತ್ತದೆಂದು ಕಂದಾಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಳೆ ಕ್ಷೀಣಿಸುತ್ತಾ ಬಂದರೂ ನದಿಗಳ ನೀರಿನ ಹರಿವಿನಲ್ಲಿ ಹೆಚ್ಚಳವಿದೆ. ಹೀಗಾಗಿ ಮುಳುಗಡೆಗೊಂಡಿರುವ ಚಿಕ್ಕೋಡಿ ತಾಲೂಕಿನ ಆರು ಸೇತುವೆಗಳ ಮೇಲೆ ನಾಲ್ಕೈದು ಅಡಿಯಷ್ಟು ನೀರು ಹರಿಯುತ್ತಿದೆ. ಹೀಗಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ಕಲ್ಲೋಳ-ಯಡೂರ ಸೇತುವೆ, ದೂಧಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಲಿಕವಾಡ-ದತ್ತವಾಡ, ಕಾರದಗಾ-ಭೋಜ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬೋಜವಾಡಿ-ಕುನ್ನೂರ ಸೇತುವೆಗಳು ಮುಳುಗಡೆ ಸ್ಥಿತಿಯಲ್ಲಿವೆ. ಇದೇ ರೀತಿ ನದಿಗಳ ನೀರಿನ ಮಟ್ಟದಲ್ಲಿ ಒಳಹರಿವಿನಲ್ಲಿ ಕಡಿಮೆ ಆಗುತ್ತಾ ಹೋದರೆ ಬರುವ 24 ಗಂಟೆಯೊಳಗೆ ನದಿಗಳ ನೀರಿನ ಹರಿವು ಸಂಪೂರ್ಣ ಕಡಿಮೆಯಾಗುತ್ತದೆ.

ಟಾಪ್ ನ್ಯೂಸ್

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.