ಬಾಪೂಜಿ ಕೇಂದ್ರ ಆರಂಭಕ್ಕೆ ಮೀನಮೇಷ
Team Udayavani, Nov 28, 2018, 4:49 PM IST
ಗೋಕಾಕ: ಸರ್ಕಾರ ರಾಜ್ಯಾದ್ಯಂತ ಬಾಪೂಜಿ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಆದೇಶ ನೀಡಿದ್ದರೂ ತಾಲೂಕಿನಲ್ಲಿ ರೈತರಿಗೆ ಹಾಗೂ ಗ್ರಾಮಾಂತರ ಪ್ರದೇಶದ ಜನರಿಗೆ ಅನುಕೂಲವಾಗುವ ಬಾಪೂಜಿ ಸೇವಾ ಕೇಂದ್ರಗಳು ಇನ್ನೂ ಆರಂಭಗೊಂಡಿಲ್ಲ. ಇದರಿಂದ ಗ್ರಾಮೀಣ ಭಾಗದ ಜನರು ತಾಲೂಕು ಕೇಂದ್ರಕ್ಕೆ ಎಡತಾಕುವಂತಾಗಿದೆ.
ರಾಜ್ಯದ ಪ್ರತಿ ಗ್ರಾಪಂನಲ್ಲಿ ವಿವಿಧ ಇಲಾಖೆಗಳ 50ಕ್ಕೂ ಸೇವೆ ಒದಗಿಸುವ ಉದ್ದೇಶದಿಂದ ರಾಜ್ಯ ಸರಕಾರ 2016ರಲ್ಲಿ ಒಂದು ಆದೇಶ ಹೊರಡಿಸಿ ಪ್ರತಿ ಗ್ರಾಪಂನಲ್ಲಿ ಗ್ರಾಮೀಣ ಜನತೆಗೆ ಪ್ರಮುಖವಾಗಿ ಬೇಕಾಗುವ ಜಾತಿ ಆದಾಯ ಪ್ರಮಾಣ ಪತ್ರ, ಉತಾರ (ಪಹಣಿ), ಖಾತೆ ಬದಲಾವಣೆ, ವಿಧವಾ, ವೃದ್ಧಾಪ್ಯ, ವಿಧವಾ, ಸಂಧ್ಯಾ ಸುರಕ್ಷಾ, ಗೇಣಿ ರಹಿತ, ಜನನ ಮರಣ, ರಹವಾಸಿ ಸೇರಿದಂತೆ ವಿವಿಧ 43 ಸೇವೆಗಳನ್ನು’ಗ್ರಾಪಂ-100′ ಯೋಜನೆಯನ್ವಯ ಒದಗಿಸುವ ಗುರಿ ಹೊಂದಲಾಗಿತ್ತು. ಈ ಬಗ್ಗೆ ಪಿಡಿಒ ಹಾಗೂ ಕಂಪ್ಯೂಟರ್ ಆಪರೇಟರ್‌ಗಳಿಗೆ ತರಬೇತಿ ಕೂಡಾ ನೀಡಲಾಗಿದೆ. ಅಲ್ಲದೇ ಬಾಪೂಜಿ ಸೇವಾ ಕೇಂದ್ರದಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಭಿತ್ತಿಪತ್ರ ತಯಾರಿಸಿ ಪ್ರತಿ ನಾಡ ಕಚೇರಿ ಮುಂದೆ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಲು ಸರಕಾರ ಆದೇಶ ನೀಡಿದ್ದರೂ ಈವರೆಗೆ ತಾಲೂಕಿನ ಯಾವ ನಾಡಕಚೇರಿ ಮುಂದೆ ಬೋರ್ಡ್ ಕಂಡು ಬರುತ್ತಿಲ್ಲ.
ತಾಲೂಕಿನಲ್ಲಿ ಒಟ್ಟು 56 ಗ್ರಾಪಂಗಳಿದ್ದು, ಅವುಗಳ ಮೇಲ್ವಿಚಾರಣೆ ತಾಪಂ ಇಒಗಳಿದ್ದರೂ ಅವರು ಕೂಡಾ ಮೌನವಹಿಸಿದ್ದಾರೆ. ಸರ್ಕಾರ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೇವೆ ಸಲ್ಲಿಸಲು ಮುಂದಾದರೆ ತಾಲೂಕಿನಲ್ಲಿ ಬಾಪೂಜಿ ಸೇವಾ ಕೇಂದ್ರಗಳಿಗೆ ಬೆಲೆ ಇಲ್ಲದಂತಾಗಿದೆ. ಇದರ ಬಗ್ಗೆ ಚುನಾಯಿತ ಜನಪ್ರತಿನಿಧಿಗಳು ಮತ್ತು ಸಂಬಂಧಿ ಸಿದ ಅಧಿಕಾರಿಗಳು ಗಮನ ಹರಿಸಬೇಕು. ತಾಲೂಕಿನವರೇ ಆದ ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಅವಶ್ಯಕ ಕ್ರಮ ಕೈಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ಡಿಸಿ ಗಮನಕ್ಕೆ ತರಲಾಗಿದೆ
ರೈತರಿಗಾಗುವ ತೊಂದರೆ ಗಮನಿಸಿ ತಾಲೂಕಿನ ಗ್ರಾಪಂಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಆರಂಭವಾಗದಿರುವ ಬಗ್ಗೆ ಜಿಲ್ಲಾಧಿಕಾರಿಗಳು ಕರೆದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲಾಗಿದೆ. ಅಲ್ಲದೇ ಸೇವಾ ಕೇಂದ್ರಗಳನ್ನು ಆಯಾ ಗ್ರಾಪಂಗಳಲ್ಲಿ ಆರಂಭಿಸುವಂತೆ ಈಗಾಗಲೇ ತಾಪಂ ಇಒಗಳಿಗೆ ತಿಳಿಸಲಾಗಿದೆ.
ಜಿ.ಎಸ್.ಮಳಗಿ, ತಹಶೀಲ್ದಾರ್.
ಹೋರಾಟ ಎಚ್ಚರಿಕೆ
ಸರ್ಕಾರ ರೈತರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದರೂ ಅಧಿಕಾರಿಗಳ ನಿರುತ್ಸಾಹದಿಂದ ಅವು ಜಾರಿಯಾಗುತ್ತಿಲ್ಲ. ಗೋಕಾಕ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿಯೇ ಬಾಪೂಜಿ ಸೇವಾ ಕೇಂದ್ರಗಳು ಆರಂಭವಾಗಿಲ್ಲ. ಈ ಕುರಿತು ಜಿಲ್ಲಾಧಿಕಾರಿಗಳು ಎಚ್ಚೆತ್ತುಕೊಳ್ಳದೇ ಹೋದರೆ ಬರುವ ವಿಧಾನಸಭೆ ಚಳಿಗಾಲದ ಅಧಿವೇಶನ ಸಮಯದಲ್ಲಿ ರೈತ ಸಂಘದಿಂದ ಹೋರಾಟ ಮಾಡಲಾಗುವುದು.
ಭೀಮಶಿ ಗದಾಡಿ
ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷರು.
ಗ್ರಾಮಗಳಲ್ಲೇ ವಿತರಣೆಯಾಗಲಿ
ನಮಗೆ ಪಹಣಿ ಪತ್ರಿಕೆಗಳು ಹಾಗೂ ಆಧಾರ್ ಕಾರ್ಡ್ ಪಡೆಯಬೇಕಾದರೆ ಗೋಕಾಕ ನಗರಕ್ಕೆ ಹೋಗಬೇಕಾದ ಪರಿಸ್ಥಿತಿ ಇದೆ. ಹೊಲದಲ್ಲಿನ ಕೆಲಸ ಬಿಟ್ಟು ಒಂದು ದಿನ ಪೂರ್ತಿಯಾಗಿ ಸರದಿ ಸಾಲಿನಲ್ಲಿ ನಿಂತು ಪಹಣಿ ಪತ್ರಿಕೆ ಪಡೆಯಬೇಕಾಗುತ್ತದೆ. ಅಧಿಕಾರಿಗಳು ಕೂಡಲೇ ಗ್ರಾಮಗಳಲ್ಲಿ ವಿತರಿಸುವ ಕಾರ್ಯವಾಗಬೇಕು.
ಎಸ್.ಆರ್.ಮುಕ್ಕಣ್ಣವರ
ಗುಜನಟ್ಟಿ ಗ್ರಾಮಸ್ಥ.
ಮಲ್ಲಪ್ಪ ದಾಸಪ್ಪಗೋಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.