ವೈದ್ಯಕೀಯ ಸೇವೆ ಮನೆ ಬಾಗಿಲಿಗೆ ತಲುಪಿಸಿ
Team Udayavani, Mar 19, 2019, 9:33 AM IST
ಬೆಳಗಾವಿ: ಸೇವಾ ಮನೋಭಾವದಿಂದ ಮಾನವೀಯತೆಯನ್ನು ಮೆರೆಯಬೇಕು ಎಂದು ಕೆಎಲ್‌ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿರ್ದೇಶಕ ಡಾ|ಎಸ್.ಸಿ. ಧಾರವಾಡ ಹೇಳಿದರು.
ನಗರದ ಕೆಎಲ್‌ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯಲ್ಲಿ ನಡೆದ ಹೋಮ್ ನರ್ಸಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಹಿರಿಯ ನಾಗರಿಕರಿಗೆ, ಒಬ್ಬಂಟಿ ಜೀವನ ನಡೆಸುವವರಿಗೆ ವೈದ್ಯಕೀಯ ಸೇವೆಗಳು ಸಿಗುವುದು ಕೇವಲ ಆಸ್ಪತ್ರೆಗಳಲ್ಲಿ ಎಂಬ ಕಲ್ಪನೆ ನಮ್ಮ ಜನರಲ್ಲಿದೆ. ಅದನ್ನು ಹೊರಹಾಕಲು ಹಾಗೂ ವೈದ್ಯಕೀಯ ಸೇವೆಗಳು ಮನೆಬಾಗಿಲಿಗೆ ತಲುಪಬೇಕು ಎಂಬ ಸದುದ್ದೇಶದಿಂದ ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯುಎಸ್‌ಎಂ ಕೆಎಲ್‌ಇ ನಿರ್ದೇಶಕ ಡಾ| ಹೆಚ್.ಬಿ. ರಾಜಶೇಖರ ಮಾತನಾಡಿ, ಆಸ್ಪತ್ರೆಯ ಪರಿಸರದಲ್ಲಿ ದಾದಿಯರು ಸೇವೆಸಲ್ಲಿಸುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಸೇವೆ ಪಡೆಯಲು ಸಾಧ್ಯವಾಗದ ಜನರಿಗೆ ಸೇವೆ ನೀಡಲು ಈ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಇದು ನಿಮಗೆ ಉದ್ಯೋಗವನ್ನಷ್ಟೇ ಅಲ್ಲದೇ ಸಮಾಜಕ್ಕೆ ಮಾದರಿ ವ್ಯಕ್ತಿಯನ್ನಾಗಿ ಮಾಡುತ್ತದೆ ಎಂದರು. ಬೆಳಗಾವಿ ಜಿಲ್ಲಾ ಹಿರಿಯ ನಾಗರಿಕ ಸಂಘದ ಅಧ್ಯಕ್ಷ ಪ್ರಭಾಕರ ಕುಲಕರ್ಣಿ ಹಾಗೂ ಕೆಎಲ್‌ಇ ಹೋಮಿಯೊಪಥಿಕ್ ಪ್ರಾಂಶುಪಾಲ ಡಾ| ಎಂ.ಎ. ಉಡಚನಕರ ಮಾತನಾಡಿ, ಮಾನವೀಯತೆ, ಸೃಜನಶೀಲತೆ, ತ್ಯಾಗ, ಸೇವಾ ಮನೋಭಾವದ ಅಗತ್ಯತೆ ಇದೆ ಎಂದರು.
ಹಿರಿಯ ತಜ್ಞ ಡಾ| ಸಿ.ಎನ್. ತುಗಶೆಟ್ಟಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ನಗರಸೇವಕ ಸಂಜಯ ಸವ್ವಾಶೇರಿ, ಡಾ| ಬಿ.ಎಸ್. ಮಹಾಂತಶೆಟ್ಟಿ, ಮಾಜಿ ನಗರ ಸೇವಕ ಮನೋಹರ ಹಲಗೇಕರ, ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞ ಡಾ| ಸತೀಶ ಧಾಮನಕರ, ನರ್ಸಿಂಗ್ ಅಧೀಕ್ಷಕಿ ವಾಗಮಾರೆ ಉಪಸ್ಥಿತರಿದ್ದರು. ಸಂತೋಷ ಇತಾಪೆ ನಿರೂಪಿಸಿದರು. ಮಂಜುಳಾ ಪಿಸೆ ಸ್ವಾಗತಿಸಿದರು. ಸುರೇಖಾ ಚಿಕ್ಕೋಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.