ಯೋಜನೆ ಅರ್ಹರಿಗೆ ತಲುಪಿಸಿ
Team Udayavani, Sep 22, 2019, 10:30 AM IST
ಬೈಲಹೊಂಗಲ: ಕೇಂದ್ರ, ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಸೌಲಭ್ಯವನ್ನು ಪ್ರತಿಯೊಬ್ಬ ನಾಗರಿಕರಿಗೆ ಅಧಿಕಾರಿಗಳು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.
ತಾಲೂಕಿನ ನೇಸರಗಿ ಗ್ರಾಮದ ಶಾಸಕರ ಕಚೇರಿಯಲ್ಲಿ ಶನಿವಾರ ನಡೆದ ಪಿಂಚಣಿ ಅದಾಲತ್, ನೇಸರಗಿ ಹೋಬಳಿಯ ತಾಲೂಕು ಮಟ್ಟದ ಅ ಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರಕಾರಿ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ನಾಗರಿಕರು ಪರದಾಡುವಂತಾಗಿದೆ. ಸಾರ್ವಜನಿಕರ ಕೆಲಸಗಳಿಗೆ ತುರ್ತಾಗಿ ಅ ಧಿಕಾರಿಗಳು ಸ್ಪಂದನೆ ಮಾಡಬೇಕು. ತಾಲೂಕು ಅಧಿಕಾರಿಗಳು ಪ್ರತಿ ಸಿಬ್ಬಂದಿ ಕೆಲಸ ಮಾಡಿದ ದಿನಚರಿಯನ್ನು ಸಂಬಂಧಿಸಿದ ಶಾಸಕರು, ಜನಪ್ರತಿನಿ ಧಿಗಳಿಗೆ ಕಳುಹಿಸಿಕೊಡಬೇಕು.ಅಧಿಕಾರಿಗಳು ದಿನಚರಿ ಮಾಡುವ ಪರಿಪಾಠ ಬೆಳೆಸಿಕೊಳ್ಳಬೇಕು. ಕೆಲಸದಲ್ಲಿ ಗೈರು ಇದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ನೇಸರಗಿ ಸರಕಾರಿ ಐಟಿಐ ಕಾಲೇಜು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಕಚೇರಿ ಕಟ್ಟಡವನ್ನು ಎಪಿಎಂಸಿ ಪ್ರಾಂಗಣದಲ್ಲಿ ಬೇಗ ಗ್ರಾಮದಲ್ಲಿ ಪ್ರಾರಂಭಿಸಬೇಕು. ಶಾಸಕರು ಮುತುವರ್ಜಿ ವಹಿಸಿ ಕ್ರಮ ಕೈಗೊಳ್ಳಬೇಕು. ಗ್ರಾಮಸ್ಥರು ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ಗ್ರಾಮಸ್ಥರು ಸಭೆಯಲ್ಲಿ ತಿಳಿಸಿದರು. ಇದೇ ಸಂದರ್ಭದಲ್ಲಿ ಪಿಂಚಣಿ ಅದಾಲತ್‌ನಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಜಿಪಂ ಸದಸ್ಯ ನಿಂಗಪ್ಪ ತಳವಾರ, ತಹಶೀಲ್ದಾರ್ ಡಾ| ದೊಡ್ಡಪ್ಪ ಹೂಗಾರ, ತಾಪಂ ಕಾರ್ಯನಿರ್ವಾಹಕ ಅಧಿ ಕಾರಿ ಸಮೀರ್ ಮುಲ್ಲಾ, ಬಿಇಒ ಪಾರ್ವತಿ ವಸ್ತ್ರದ, ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ಪ್ರತಿಭಾ ಹೂಗಾರ, ತಾಪಂ ಉಪಾಧ್ಯಕ್ಷ ಮಲ್ಲನಾಯ್ಕ ಬಾಂವಿ, ತಾಪಂ ಸದಸ್ಯ ಶ್ರೀಶೈಲ ಕಮತಗಿ, ತಾಪಂ ಎಡಿ ಸುಭಾಶ ಸಂಪಗಾಂವಿ, ಐಟಿಐ ಪ್ರಾಚಾರ್ಯ ಎನ್.ಎಂ. ದಾಸ್ತಿಕೊಪ್ಪ, ಗ್ರಾಪಂ ಅಧ್ಯಕ್ಷ ಸತಾರ ಮೋಕಾಶಿ, ಮುಖಂಡರಾದ ಕೆಂಚಪ್ಪ ಕಳ್ಳಿಬಡ್ಡಿ, ಬಾಳಪ್ಪ ಮಾಳಗಿ, ಡಾ| ಚನಗೌಡ ಪಾಟೀಲ, ಅಡಿವೆಪ್ಪ ಮಾಳನ್ನವರ,ಸೋಮಶೇಖರ ಮಾಳನ್ನವರ, ನಿಂಗಪ್ಪ ತಳವಾರ, ಸೋಮನಗೌಡ ಪಾಟೀಲ, ಪ್ರಕಾಶ ತೋಟಗಿ, ಮುಕಬುಲ್ ಬೇಪಾರಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.