ನೇಕಾರರಿಗೆ ಸೂಕ್ತ ಪರಿಹಾರಕ್ಕೆ ಆಗ್ರಹ
Team Udayavani, Aug 17, 2019, 5:37 PM IST
ರಾಮದುರ್ಗ: ಪಟ್ಟಣದ ನೇಕಾರ ಪೇಟೆಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ನೇಕಾರ ವೇದಿಕೆಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ರಾಮದುರ್ಗ: ಮಲಪ್ರಭಾ ನದಿ ಪ್ರವಾಹದಿಂದ ತಾಲೂಕಿನ ನೇಕಾರರ ಮನೆಗಳು ಹಾಗೂ ಜವಳಿ ಉದ್ಯಮದ ವಸ್ತುಗಳು ಹಾನಿಗೊಳಗಾಗಿದ್ದು, ಅವುಗಳಿಗೆ ಸರಕಾರ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ನೇಕಾರರ ವೇದಿಕೆಯ ಪದಾಧಿಕಾರಿಗಳು ತಹಶೀಲ್ದಾರ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಮಚಂದ್ರ ಯಾದವಾಡ, ಈ ಮೊದಲು ನೇಕಾಕರರ ಬದುಕಿನ ಬಂಡಿ ಸುಂದರವಾಗಿ ಸಾಗುತ್ತಿತ್ತು. ಆದರೆ ಈಗ ಮಲಪ್ರಭಾ ನದಿ ಪ್ರವಾಹ ಇಲ್ಲಿರುವ ನೇಕಾರರ ಬದುಕನ್ನೇಕೊಚ್ಚಿಕೊಂಡು ಹೋಗಿದೆ. ಬದುಕಿಗೆ ಆಸೆರೆಯಾಗಬಿಕಿದ್ದ ವಿದ್ಯುತ್ ಮಗ್ಗಗಳು ನೀರಿನಲ್ಲಿ ಹಾಳಾಗಿವೆ ಎಂದ ಅವರು, ಆರ್ಥಿಕ ಸಂಕಷ್ಟದಲ್ಲಿರುವ ನೇಕಾರರಿಗೆ ಪ್ರವಾಹದಿಂದ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಶೀಘ್ರವೇ ರಾಜ್ಯ ಸರಕಾರ ತ್ವರಿತಗತಿಯಲ್ಲಿ ನೇಕಾರರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
ವಿವಿಧ ಬೇಡಿಕೆಗಳು: ಹಾನಿಯಾದ ನೇಕಾರರಿಗೆ ಮನೆ ನಿರ್ಮಿಸಿಕೊಡಬೇಕು. ಪ್ರವಾಹದಿಂದ ನಷ್ಟವಾದ ವಿದ್ಯುತ್ ಮತ್ತು ಕೈಮಗ್ಗಗಳ ಸಂಪೂರ್ಣ ವೆಚ್ಚವನ್ನು ಸರಕಾರ ಭರಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಹಾನಿಯಾದ ಕಚ್ಚಾ ವಸ್ತುಗಳಿಗೆ ಪರಿಹಾರ ನೀಡಬೇಕು. ವೈಂಡಿಂಗ್ ಮತ್ತು ಡೋಲೆ ಮಶೀನ್‌ಗಳಿಗೂ ಸೂಕ್ತ ಧನ ಸಹಾಯ ಮಾಡಬೇಕು. ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಜಾಗ ಗುರುತಿಸಿ ಮನೆ ನಿರ್ಮಿಸಿಕೊಡುವುದು ಸೇರಿದಂತೆ ವಿವಿಧ ಬೇಡಿಕೆಗೆ ಶೀಘ್ರವೇ ಸ್ಪಂದಿಸಬೇಕೆಂದು ಮನವಿ ಮೂಲಕ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ವಿಠuಲ ಮುರುಡಿ, ದೇವಾಂಗ ಸಂಘದ ರಾಜ್ಯಉಪಾಧ್ಯಕ್ಷ ಶಂಕ್ರಣ್ಣ ಮುರುಡಿ, ಏಕನಾಥ ಕೊಣ್ಣುರ, ಮನೋಹರ ಹೊನ್ನುಂಗರ, ಪ್ರಕಾಶ ಸೂಳಿಭಾವಿ, ಶಿವಾನಂದ ಬಳ್ಳಾರಿ, ನಾರಾಯಣ ಬೆಣ್ಣೂರ, ನಾರಾಯಣ ಚೌವಣ್ಣವರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.