ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹ


Team Udayavani, May 11, 2019, 11:54 AM IST

belegavi-tdy-3..

ರಾಮದುರ್ಗ: ರೈತರ ವಿವಿಧ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದಿಂದ ತಹಶೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದರು

ರಾಮದುರ್ಗ: ರೈತರ ವಿವಿಧ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದಿಂದ ತಹಶೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದರು.

ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮದುರ್ಗ ಮಾತನಾಡಿ, ತಾಲೂಕಿನಲ್ಲಿ ಭೀಕರ ಬರಗಾಲ ಎದುರಾಗಿದ್ದು, ಜನರಿಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ಕೂಡಲೇ ಕುಡಿಯುವ ನೀರಿನ ಸಮಸ್ಯೆ ನಿವಾರಿಸಿ, ಜಾನುವಾರುಗಳಿಗಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗೋಶಾಲೆ ತೆರೆಯಬೇಕು ಎಂದು ಒತ್ತಾಯಿಸಿದರು.

ಸರ್ಕಾರ ಸಾಲಮನ್ನಾ ಘೋಷಣೆ ಮಾಡಿದ್ದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ. ಬ್ಯಾಂಕುಗಳು ರೈತರಿಗೆ ನೋಟಿಸ್‌ ನೀಡಿ ಸಮನ್ಸ್‌ ಜಾರಿ ಮಾಡಿ ರೈತರನ್ನು ಆತ್ಮಹತ್ಯೆ ದಾರಿಯತ್ತ ತಳ್ಳುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ರೈತರಿಗರ ಬ್ಯಾಂಕನಿಂದ ನೋಟಿಸ್‌ ಬರುವದನ್ನು ತಡೆಗಟ್ಟುವಲ್ಲಿ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನೋಟಿಸ್‌ ಬಂದು ರೈತರು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ನೇರವಾಗಿ ತಾಲೂಕು ಆಡಳಿತವೇ ಕಾರಣವಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಲೀಜ್‌ ಪಡೆದ ಪ್ಯಾರಿ ಶುಗರ್ ಕಾರ್ಖಾನೆಯವರು 2018-19ರ ಪ್ರಕಾರ ಎಫ್‌.ಆರ್‌.ಪಿ ಪ್ರಕಾರ ಹಣ ಸಂದಾಯ ಮಾಡಬೇಕು. ಟ್ರ್ಯಾಕ್ಟರ ಮತ್ತು ಗ್ಯಾಂಗಿನ ಹಣವನ್ನು ತಕ್ಷಣ ನೀಡಲು ಆದೇಶ ಮಾಡಬೇಕು. ತಪ್ಪಿದಲ್ಲಿ ತಮ್ಮ ಇಲಾಖೆ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಅಲ್ಲದೇ ತಾಲೂಕಿನಲ್ಲಿ ಹೆಸ್ಕಾಂ ಇಲಾಖೆಯವರು ವಿಫಲಗೊಂಡ ಟಿಸಿಯನ್ನು ಕೆ.ಎ.ಆರ್‌.ಸಿ ನಿಯಮದ ಪ್ರಕಾರ ನೀಡುತ್ತಿಲ್ಲ. ಇದನ್ನು ಸರಿಪಡಿಸಬೇಕು. ತಾಲೂಕಿನಾದ್ಯಾಂತ ವಿದ್ಯುತ್‌ ವಾಯರ್‌ ಜೋತು ಬಿದ್ದಿದ್ದು, ಅಲ್ಲದೆ ಕಂಬಗಳು ಬಾಗಿವೆ. ಶೀಘ್ರವೇ ಹೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಜಗದೀಶ ದೇವರಡ್ಡಿ, ಯಲ್ಲಪ್ಪ ದೊಡಮನಿ, ನೂರಸಾಬ ಕಡಕೋಳ, ಹಸಿರು ಸೇನೆ ಅಧ್ಯಕ್ಷ ಶಿವಾನಂದ ದೊಡವಾಡ, ಮುಖಂಡರಾದ ಎಂ.ಪಿ. ತ್ಯಾವಟಗಿ, ಮಹ್ಮದಸಾಬ ದಾನಕಟಗಿ, ಮಂಜುನಾಥ ದೇಸಾಯಿ, ಮಲ್ಲಿಕಾರ್ಜುನ ದೇಸಾಯಿ, ಶಿವನಗೌಡ ಪಾಟೀಲ, ನಾಗಪ್ಪ ಮಾಯನ್ನವರ, ವಿಠuಲ ಹಳ್ಳಿ ಇತರರು ಇದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.