ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಆಗ್ರಹ
Team Udayavani, Feb 12, 2020, 12:48 PM IST
ಗೋಕಾಕ: ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಪ್ರವಾಹದಿಂದ ಹಾನಿಗೊಳಗಾದ ಮನೆಗಳ ಸರ್ವೇ ಕಾರ್ಯದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂತ್ರಸ್ತರಿಗೆ ಅನ್ಯಾಯವಾಗಿದ್ದು, ಅದನ್ನು ಸರಿಪಡಿಸುವಂತೆ ಆಗ್ರಹಿಸಿ ಮೆಳವಂಕಿ ಗ್ರಾಮದ ನೆರೆ ಸಂತ್ರಸ್ತರು ಹಾಗೂ ಮುಖಂಡರು ಮಂಗಳವಾರ ತಹಶೀಲ್ದಾರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಿಜವಾದ ಸಂತ್ರಸ್ತರಿಗೆ ಪರಿಹಾರ ಸಿಕ್ಕಿಲ್ಲ. ಕಳೆದ 6 ತಿಂಗಳಿನಿಂದ ತಹಶೀಲ್ದಾರ ಕಚೇರಿಗೆ ಮನವಿ ಮಾಡಿದರೂ ತಹಶೀಲ್ದಾರ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರಿಪಡಿಸಲು ಹೇಳಿದರೂ ತಹಶೀಲ್ದಾರ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಎ ವರ್ಗದ 78, ಬಿ ವರ್ಗದ 205, ಸಿ ವರ್ಗದ 305 ಸಂತ್ರಸ್ತರಿಗೆ ಸಂಪೂರ್ಣ ಪರಿಹಾರ ನೀಡಲಾಗಿಲ್ಲ. ಸರ್ವೇ ಸಮಯದಲ್ಲಿ ಆಯ್ಕೆಗೊಂಡ 189 ಫಲಾನುಭವಿಗಳನ್ನು ರದ್ದುಪಡಿಸಿದ್ದು, ಅವುಗಳನ್ನು ಸಿ ವರ್ಗದಿಂದ ಎ ವರ್ಗಕ್ಕೆ ಸೇರಿಸುತ್ತೇವೆ ಎಂದು ಹೇಳಿದ ಅಧಿಕಾರಿಗಳು ಈಗ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಈ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ, ಕಂದಾಯ ಸಚಿವ ಆರ್.ಅಶೋಕ, ನೀರಾವರಿ ಸಚಿವ ರಮೇಶ ಜಾರಕಿಹೊಳಿ, ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಒತ್ತಾಯಿಸಲಾಗುವುದು ಎಂದು ಸಂತ್ರಸ್ತರು ಹಾಗೂ ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ, ಬಸನಗೌಡ ಪಾಟೀಲ, ಸತ್ತೆಪ್ಪ ಬಬಲಿ, ಬಿ.ಬಿ.ಬೀರನಗಡ್ಡಿ, ರಾಮಪ್ಪಾ ಕಾಪಶಿ, ಅಪ್ಪಯ್ಯ ಅಗ್ನೆಪ್ಪನವರ, ಭೀಮಪ್ಪ ಚಿಪ್ಪಲಕಟ್ಟಿ, ಮಹಾದೇವಪ್ಪ ಪತ್ತಾರ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.