ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ
Team Udayavani, May 10, 2019, 1:48 PM IST
ತೆಲಸಂಗ: ನಿರ್ಮಿತಿ ಕೇಂದ್ರದಿಂದ ನಿರ್ಮಿಸಲಾಗುತ್ತಿರುವ ಎಸ್‌ಎಂವೈಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತಿರುವುದು.
ತೆಲಸಂಗ: ಇಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ಗ್ರಾಮದ ಎಸ್‌ಎಂವೈಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ವರ್ಷ ಸಮೀಪಿಸುತ್ತಿದೆ ಆದರೆ ಅರ್ಧಕ್ಕೆ ನಿಂತ ಕಟ್ಟಡ ಪ್ರಾರಂಭಿಸದೇ ಶಿಥಿಲಗೊಳ್ಳುತ್ತಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ತು ತಿಂಗಳ ಹಿಂದೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಮಹೇಶ ಕುಮಠಳ್ಳಿ ಕಟ್ಟಡದ ಭೂಮಿಪೂಜೆ ನೆರವೇರಿಸಿದ್ದರು. ಅಂದಿನಿಂದ ಇಂದಿನವರೆಗೂ ಕಾಮಗಾರಿ ಪ್ರಾರಂಭವಾಗದೇ ಕಟ್ಟಡ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ. ಇದರಿಂದ ಕಟ್ಟಡದ ಕಾಲಮ್‌ಗೆ ಹಾಕಿದ ಕಬ್ಬಿಣ ತುಕ್ಕು ಹಿಡಿಯುತ್ತಿದೆ. ಕಡಿಮೆ ವೆಚ್ಚದಲ್ಲಿ ಪರಿಸರ ಸ್ನೇಹಿ ಸಾಮಗ್ರಿ ಉಪಯೋಗಿಸಿ ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಿಸಬೇಕು. ಆದರೆ ಇದ್ಯಾವುದನ್ನು ಇಲ್ಲಿ ಪಾಲನೆ ಮಾಡಿಲ್ಲ. ಮಣ್ಣಿನ ಇಟ್ಟಿಗೆ ಉಪಯೋಗಿಸುವಂತಿಲ್ಲ. ಕಾರ್ಮಿಕ ಮುಖ್ಯ ಕಚೇರಿಯಿಂದ ತಾಂತ್ರಿಕ ಅನುಮೋದನೆ ಪಡೆಯಬೇಕು. ಈ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ಹೇಳಲಾಗುತ್ತಿದೆ. 50 ಲಕ್ಷ ವೆಚ್ಚದ 3 ಕಟ್ಟಡ ಮತ್ತು 75 ಲಕ್ಷ ವೆಚ್ಚದ 4 ಕಟ್ಟಡ ಒಟ್ಟು 1 ಕೋಟಿ 25ಲಕ್ಷ ರೂಗಳ ಕಟ್ಟಡಗಳು ಅರ್ಧಕ್ಕೆ ನಿಂತಿದ್ದರಿಂದ ಸಂಪೂರ್ಣ ಗುಣಮಟ್ಟ ಕಳೆದುಕೊಳ್ಳುತ್ತಿವೆ. ಅಲ್ಲದೆ ಸರಕಾರದ ನಿಯಮ ಗಾಳಿಗೆ ತೂರಿ ಮನಬಂದಂತೆ ನಿರ್ಮಿಸುತ್ತಿರುವ ಕಾಮಗಾರಿಯ ತನಿಖೆಯಾಗಬೇಕು. ಅಲ್ಲದೆ ಅರ್ಧಕ್ಕೆ ನಿಲ್ಲಿಸಿರುವ ಬಗ್ಗೆ ಕಾರ್ಮಿಕ ಮುಖ್ಯ ಕಚೇರಿಯಿಂದ ತಾಂತ್ರಿಕ ಅನುಮೋದನೆ ಪಡೆಯದಿರುವ ಬಗ್ಗೆ ತೆಲಸಂಗ ಗ್ರಾಮ ಪಂಚಾಯತ ಗ್ರಾಮ ಸಭೆಯಲ್ಲಿ ಮಾಹಿತಿ ನೀಡಬೇಕು.
ನಿರ್ಮಿತಿ ಕೇಂದ್ರದ ನಿಯಮಾವಳಿಯಂತೆಯೇ ಕಟ್ಟಡ ನಿರ್ಮಿಸಬೇಕು ಇಲ್ಲವಾದರೆ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯ ಕರವೆ ಅಧ್ಯಕ್ಷ ಬುರಾನ ಅರಟಾಳ, ಜನ ಜಾಗೃತಿ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಘದ ಅಧ್ಯಕ್ಷ ರಾಜಕುಮಾರ ಹೊನಕಾಂಬಳೆ ಹಾಗೂ ಸಂಘದ ಸದಸ್ಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.