ಟ್ಯಾಂಕರ್ ನೀರು ಪೂರೈಕೆಗೆ ಆಗ್ರಹ
Team Udayavani, May 18, 2019, 12:28 PM IST
ರಾಯಬಾಗ: ಪಟ್ಟಣಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಶಾಸಕ ಡಿ.ಎಂ. ಐಹೊಳೆ ಅವರ ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ರಾಯಬಾಗ: ರಾಯಬಾಗ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.1 ರಿಂದ 19 ರವರೆಗೆ ಸಾರ್ವಜನಿಕರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಶುಕ್ರವಾರ ರಾಯಬಾಗ ಶಾಸಕ ಡಿ.ಎಂ.ಐಹೊಳೆ ಅವರ ನೇತೃತ್ವದಲ್ಲಿ ತಹಶೀಲ್ದಾರ ಡಿ.ಎಚ್.ಕೋಮಾರ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣಕ್ಕೆ ನೀರು ಪೂರೈಕೆಯಾಗುತ್ತಿರುವ ಹುಲ್ಯಾಳ ಕೆರೆ ಬತ್ತಿ ಹೋಗಿದ್ದು ಪಟ್ಟಣದಲ್ಲಿರುವ ಪ್ರತಿಶತ 80 ರಷ್ಟು ಕೊಳವೆ ಬಾವಿಗಳು ಕೂಡ ಬತ್ತಿ ಹೋಗಿವೆ. ಮತ್ತು ಭೀಕರ ಬರಗಾಲದಿಂದ ಅಂತರ್ಜಲ ಮಟ್ಟ ಸಹ ಕುಸಿದಿದೆ. ಇದರಿಂದ ಪಟ್ಟಣದ ಸಾರ್ವಜನಿಕರಿಗೆ ಕುಡಿಯುವ ನೀರಿಗಾಗಿ ಬಹಳ ತೊಂದರೆಯಾಗುತ್ತಿದೆ. ಆದ್ದರಿಂದ ಘಟಪ್ರಭಾ ಎಡದಂಡೆ ಕಾಲುವೆಯಿಂದ ರಾಯಬಾಗ ಪಟ್ಟಣಕ್ಕೆ ನೀರು ಸರಬರಾಜು ಆಗುವ ಹುಲ್ಯಾಳ ಕೆರೆ ಭರ್ತಿ ಮಾಡಬೇಕು ಹಾಗೂ ಪಟ್ಟಣದ 19 ವಾರ್ಡುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗೆ ಕೂಡಲೇ ಟ್ಯಾಂಕರ್ ನೀರು ಪೂರೈಕೆ ಮಾಡಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಡಿ.ಎಂ.ಐಹೊಳೆ, ಪ.ಪಂ ಸದಸ್ಯರಾದ ಡಾ.ಗಾಯತ್ರಿ ಬಾನೆ, ಚಂದ್ರಕಾಂತ ಬುರುಡ, ಅಜ್ಜಪ್ಪ ಕುಲಗುಡೆ, ಸದಾಶಿವ ದೇಶಿಂಗೆ, ಅಪ್ಪಾಸಾಬ ಕುಲಗುಡೆ. ಬಿ.ಎನ್.ಬಂಡಗಾರ, ಬಿಜೆಪಿ ಅಧ್ಯಕ್ಷ ಸದಾನಂದ ಹಳಿಂಗಳೆ, ಸದಾಶಿವ ಘೋರ್ಪಡೆ, ಅಣ್ಣಾಸಾಬ ಖೇಮಲಾಪೂರೆ, ನಾರಾಯಣ ಮೇತ್ರಿ, ಅಣ್ಣಾಸಾಬ ಕುಲಗುಡೆ, ಸುರೇಶ ಮಾಳಿ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.