ಅತಿಥಿ ಶಿಕ್ಷಕರ ಬಾಕಿ ವೇತನಕ್ಕೆ ಆಗ್ರಹ
Team Udayavani, Jul 7, 2019, 3:03 PM IST
ರಾಮದುರ್ಗ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಶಿಕ್ಷಕರು ಶಾಸಕರ ಸಹೋದರ ಮಲ್ಲಣ್ಣ ಯಾದವಾಡ ಮುಖಾಂತರ ಶಾಸಕ ಮಹಾದೇವಪ್ಪ ಯಾದವಾಡಗೆ ಮನವಿ ಸಲ್ಲಿಸಿದರು.
ರಾಮದುರ್ಗ: ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರ ಬಾಕಿ ವೇತನ ಪಾವತಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಾಸಕ ಮಹಾದೇವಪ್ಪ ಯಾದವಾಡ ಮನವಿ ಸಲ್ಲಿಸಿದರು.
ಬೇರೆ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕಳೆದ ಮಾರ್ಚ್ ತಿಂಗಳು ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸಿದ ವೇತನ ಪಾವತಿ ಮಾಡಿಲ್ಲ. ಅಲ್ಪ ಮೊತ್ತದ ವೇತನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಮಾರ್ಚ್ ತಿಂಗಳ ವೇತನ ಶೀಘ್ರ ನೀಡುವಂತೆ ಹಲವು ಬಾರಿ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಆಗ್ರಹಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. ಮಾರ್ಚ್ ವೇತನ ದೊರೆಯುವಂತೆ ಕ್ರಮ ತೆಗೆದುಕೊಂಡು ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರತಿ ಶೈಕ್ಷಣಿಕ ವರ್ಷದಿಂದ ಸೇವೆಗೆ ಅವಕಾಶ ಮಾಡಿಕೊಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ನೇಮಕಾತಿಯಲ್ಲಿ ಅತಿಥಿ ಶಿಕ್ಷಕರಿಗೆ ಕೃಪಾಂಕ ದೊರೆಯುವಂತಾಗಲು ಸರ್ಕಾರದ ಮಟ್ಟದಲ್ಲಿ ವಿಷಯ ಚರ್ಚಿಸಿ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮೂಲಕ ಒತ್ತಾಯಿಸಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ಯುವ ಧುರೀಣ ಮಲ್ಲಣ್ಣ ಯಾದವಾಡ, ತಮ್ಮ ಬೇಡಿಕೆಯನ್ನು ಶಾಸಕರ ಗಮನಕ್ಕೆ ತಂದು ಸರ್ಕಾರಕ್ಕೆ ಬೇಡಿಕೆಗಳ ಪ್ರಸ್ತಾವಣೆ ಸಲ್ಲಿಸಲು ಶ್ರಮಿಸುವುದಾಗಿ ಹೇಳಿದರು.
ಈ ವೇಳೆ ಅತಿಥಿ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಯಲ್ಲಪ್ಪ ಕಾಕನೂರ, ಕಾರ್ಯದರ್ಶಿ ಎಚ್. ಎನ್. ಜಲಗೇರಿ, ಉಪಾಧ್ಯಕ್ಷ ಎಸ್. ಬಿ. ಆಮ್ಟೆ, ಸಂಘಟನಾ ಕಾರ್ಯದರ್ಶಿ ವಿ.ಕೆ. ಸಿರಿಗೊಂಡ, ಜಿ. ಎಚ್. ಮುಧೋಳ, ಎಂ.ವಿ. ಅರಿಷಿನಗೋಡಿ, ಮಹಾದೇವಿ ಕಾಕನೂರ, ಲಮಾಣಿ, ಕೊಪ್ಪದ, ದಳವಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.