ನೆರೆ ಹಾವಳಿ ರಕ್ಷಣೆಗೆ ಪ್ರಾತ್ಯಕ್ಷಿಕೆ
Team Udayavani, Jul 7, 2019, 2:58 PM IST
ಚಿಕ್ಕೋಡಿ: ನೆರೆ ಹಾವಳಿಯಂತಹ ನೈಸರ್ಗಿಕ ವಿಪತ್ತಿನ ಸಂದರ್ಭದಲ್ಲಿ ಹೇಗೆ ರಕ್ಷಣೆ ಕೈಗೊಳ್ಳಬೇಕೆಂದು ಹುಬ್ಬಳ್ಳಿ ಹಾಗೂ ಗುಲ್ಬರ್ಗಾದ ಎಸ್‌ಡಿಆರ್‌ಎಫ್ ತಂಡ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಯಡೂರ ಗ್ರಾಮದ ಕೃಷ್ಣಾ ನದಿಯಲ್ಲಿ ಶನಿವಾರ ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು.
ಯಡೂರ ಗ್ರಾಮದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ, ಬಾಗಲಕೋಟೆ ಜಿಲ್ಲಾಧಿಕಾರಿ ಡಾ. ಆರ್.ರಾಮಚಂದ್ರನ್, ಬೆಳಗಾವಿ ಎಸ್‌ಪಿ ಸುಧೀರಕುಮಾರ ರೆಡ್ಡಿ, ಬಾಗಲಕೋಟೆ ಎಸ್‌ಪಿ ಲೋಕೇಶ ಸಮ್ಮುಖದಲ್ಲಿ ನೆರೆ ಹಾವಳಿಯಲ್ಲಿ ಜನರನ್ನು ರಕ್ಷಣೆ ಮಾಡುವ ಕುರಿತು ಎರಡು ಗಂಟೆಗಳ ಕಾಲ ಪ್ರಾತ್ಯಕ್ಷಿಕೆ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಮಾತನಾಡಿ, ತುರ್ತು ಪರಿಸ್ಥಿತಿಯಲ್ಲಿ ಜಿಲ್ಲಾಡಳಿತ ಹೇಗೆ ಕಾರ್ಯ ನಿರ್ವಹಿಸಬೇಕು. ಅದಕ್ಕಾಗಿ ಎಸ್‌ಡಿಆರ್‌ಎಫ್ ತಂಡ ರಚಿಸಲಾಗಿದ್ದು, ಈ ತಂಡಕ್ಕೆ ಬೇಕಾಗುವ ಎಲ್ಲ ಸಲಕರಣೆಗಳು ಗ್ರಾಮ ಪಂಚಾಯತಿಯಲ್ಲಿ ಲಭ್ಯವಿರುವುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ ಹುಬ್ಬಳ್ಳಿ ಪ್ರಾಂತ್ಯದ ಮುಖ್ಯ ಅಗ್ನಿಶಾಮಕ ದಳದ ಅಧಿಕಾರಿಗಳಾದ ಸಿ.ಬಸವಣ್ಣಾ, ವಿಭಾಗಿಯ ಅಗ್ನಿಶಾಮಕ ದಳ ಅಕಾರಿ ಶ್ರೀಕಾಂತ, ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ಶಿವಕುಮಾರ ಸ್ವಾಮಿ, ಚಿಕ್ಕೋಡಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಪ್ರವಾಹ ಮುನ್ನೆಚರಿಕೆ ಕ್ರಮದ ಕುರಿತು ಸಮಗ್ರ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಬೂದೆಪ್ಪ, ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ, ತಹಶೀಲ್ದಾರ ಡಾ| ಸಂತೋಷ ಬಿರಾದಾರ, ಸಿಪಿಐ ಬಸವರಾಜ ಮುಕರ್ತಿಹಾಳ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.