ದೇಸಿ ಆಟ ಖೋ ಖೋ ಜನಪ್ರಿಯ ಗ್ರಾಮೀಣ ಕ್ರೀಡೆ: ತ್ಯಾಗಿ
ರಾಜ್ಯಮಟ್ಟದ ಖೋ ಖೋ ಪಂದ್ಯಾವಳಿ ಉದ್ಘಾಟನೆ
Team Udayavani, May 10, 2022, 12:23 PM IST
ಮೂಡಲಗಿ: ಖೋ ಖೋ ದೇಶಿ ಕ್ರೀಡೆಯಾಗಿದ್ದು ರಾಷ್ಟ್ರ ಹಾಗೂ ಅಂತರಾಷ್ಟೀಯ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದೆ ಎಂದು ಭಾರತೀಯ ಖೋ-ಖೋ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ತ್ಯಾಗಿ ಹೇಳಿದರು.
ತಾಲೂಕಿನ ನಾಗನೂರ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಶಾಲಾ ಮೈದಾನದಲ್ಲಿ ರಾಜ್ಯ ಖೋ-ಖೋ ಅಸೋಸಿಯೇಷನ್ ಹಾಗೂ ಬೆಳಗಾವಿ ಜಿಲ್ಲಾ ಖೋ-ಖೋ ಅಸೋಸಿಯೇಶನ್ ಮತ್ತು ನಾಗನೂರ ಶ್ರೀ ಮಹಾಲಿಂಗೇಶ್ವರ ನ್ಪೋಟ್ಸì ಕ್ಲಬ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ 18 ವರ್ಷದೊಳಗಿನ ಬಾಲಕ/ಬಾಲಕಿಯರ ಹೊನಲು ಬೆಳಕಿನ ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ನವದೆಹಲಿಯಲ್ಲಿ ಮುಂಬರುವ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಏಷಿಯನ್ ಖೋ-ಖೋ ಚಾಂಪಿಯನ್ ಷಿಪ್ ಆಯೋಜಿಸುವುದರ ಜೊತೆಗೆ ಕ್ರಿಯೆಟಿವ್ ಖೋ-ಖೋ ಕ್ರೀಡಾಕೂಟ ನಡೆಸಲಾಗುವುದು ಎಂದರು.
ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿ ಕ್ಯಾರಗುಡ್ಡ ಮಠದ ಅಭಿನವ ಮಂಜುನಾಥ ಶ್ರೀಗಳು ಮಾತನಾಡಿ, ಕ್ರೀಡಾಕೂಟಗಳು ದೇಹ ಮತ್ತು ಮನಸ್ಸು ಒಂದುಗೂಡಿಸುವ ಕೆಲಸ ಮಾಡುತ್ತವೆ. ಕ್ರೀಡಾಪಟುಗಳು ವ್ಯಸನಿಗಳಾಗದೆ ಪ್ರತಿಯೊಬ್ಬರು ಚಾರಿತ್ರ್ಯವಂತರಾಗಬೇಕು ಎಂದರು.
ಬೆಂಗಳೂರು ಖೋ ಖೋ ಅಸೋಸಿಯೇಶನ್‌ನ ಅಧ್ಯಕ್ಷ ಹಾಗೂ ಕೆ.ಕೆ.ಎಫ್.ಐ ಉಪಾಧ್ಯಕ್ಷ ಲೋಕೇಶ್ವರ ಮಾತನಾಡಿ, ಭಾರತೀಯ ಖೋ ಖೋ ಸಂಸ್ಥೆಯಿಂದ ಹತ್ತು ಲಕ್ಷ ರೂ. ಮೌಲ್ಯದ ಮ್ಯಾಟ್ ನೀಡಿದ್ದು ಕ್ರೀಡಾಪಟುಗಳು, ಕ್ರೀಡೆಗೆ ಹೆ„ಟೆಕ್ ಸ್ಪರ್ಶ ನೀಡಿದಂತಾಗಿದೆ ಎಂದರು.
ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ್ ಮಾತನಾಡಿ, ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಕೇಂದ್ರ ಸರ್ಕಾರದಿಂದ ಟೋಕಿಯೊ ಒಲಿಂಪಿಕ್ಸ್, ಪ್ಯಾರಾ ಒಲಿಂಪಿಕ್ಸ್ ಸೇರಿದಂತೆ ಫ್ರಾನ್ಸ್ ಒಲಿಂಪಿಕ್ಸ್ ನಲ್ಲಿ ಪಾಲ್ಗೊಳ್ಳಲು 75 ಕ್ರೀಡಾಪಟುಗಳುಗೆ 5 ವರ್ಷದಲ್ಲಿ ಒಬ್ಬ ಕ್ರೀಡಾಪಟುವಿಗೆ 5 ಲಕ್ಷ ರೂ. ನಂತೆ ಖರ್ಚು ಮಾಡಲು ಅನುದಾನ ದೊರೆತಿದ್ದು ಕ್ರೀಡೆಗೆ ಸಿಕ್ಕ ಅವಕಾಶವಾಗಿದೆ ಎಂದರು.
ಕೆಎಂಎಫ್ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ ಅವರು ಕ್ರೀಡಾಕೂಟದ ಉತ್ತೇಜನಕ್ಕಾಗಿ 2 ಲಕ್ಷ ರೂ. ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸನಗೌಡ ರಾ ಪಾಟೀಲ, ಕರ್ನಾಟಕ ರಾಜ್ಯ ಖೋ ಖೋ ಅಸೋಸಿಯೇಶನ್ ಉಪಾಧ್ಯಕ್ಷ ಶಿವಯೋಗಿ ಎಲಿ, ಬೆಂಗಳೂರು ಖೋ ಖೋ ಅಸೋಸಿಯೇಶನ್ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ. ಆರ್, ಬೆಳಗಾವಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಂದನಾ ಶಿಂಧೆ, ಪರಸಪ್ಪ ಬಬಲಿ ಮಾತನಾಡಿದರು.
ವೇದಿಕೆಯಲ್ಲಿ ಶ್ರೀನಿವಾಸ್‌ಗೌಡ ಪಾಟೀಲ, ಕೆಂಚಗೌಡ ಪಾಟೀಲ, ಬಲವಂತ ಕರಬನ್ನವರ, ಬಸವರಾಜ ಕರಿಹೊಳಿ, ಬಸವರಾಜ ಹೊಸಮನಿ, ಚಂದ್ರು ಬೆಳಗಲಿ, ಎಸ್.ಎಲ್. ಹೊಸಮನಿ, ಸಿದ್ದಣ್ಣ ಯಾದಗೂಡ , ಬಿ ಜಿ.ತಡಸನ್ನವರ, ಕೆ.ಕೆ. ಸಕ್ರೆಪ್ಪಗೋಳ, ಭೀಮಗೌಡ ಹೊಸಮನಿ, ಶಿವಾನಂದ ಹಳಿಗೌಡರ, ಕೆ.ಎಸ್.ಮಾರಾಪೂರ, ಬಿ.ಎಸ್.ಮೇಟಿ, ಗಜಾನನ ಯರಗಣವಿ, ಈರಣ್ಣ ಬಿ ಹಳಿಗೌಡರ ಇತರರು ಇದ್ದರು.
ಉಪಾಧ್ಯಕ್ಷ ಸಿ.ಆರ್ .ಪೂಜೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಆರ್. ಎಂ.ಗುಡಿಸಿ ಹಾಗೂ ರವೀಂದ್ರ ಕಬ್ಬೂರ ನಿರೂಪಿಸಿದರು. ದೈಹಿಕ ಶಿಕ್ಷಕ ಸಿ.ಎಸ್.ಹಿರೇಮಠ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.