ನೂತನ ಶಿಕ್ಷಣ ನೀತಿಯಿಂದ ಅಭಿವೃದ್ಧಿ
ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವಾಗಿಸುವ ಉದ್ದೇಶ
Team Udayavani, Apr 14, 2022, 2:58 PM IST
ಬೆಳಗಾವಿ: ರಾಷ್ಟೀಯ ಶಿಕ್ಷಣ ನೀತಿ ಅಳವಡಿಕೆಯಿಂದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ತರಲಾಗುವುದು. ಇದರಿಂದ ಭವಿಷ್ಯದಲ್ಲಿ ವಿವಿಧ ಕ್ಷೇತ್ರಗಳು ಅಭಿವೃದ್ಧಿ ಆಗಲಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.
ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ರಾಷ್ಟೀಯ ಶಿಕ್ಷಣ ನೀತಿ-2020ರ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕ ರಾಜ್ಯ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಿದೆ. 34 ವರ್ಷಗಳ ನಂತರ ಮೊದಲ ಬಾರಿಗೆ ಜಾರಿಗೆ ತಂದ ಶಿಕ್ಷಣ ನೀತಿ ಇದಾಗಿದ್ದು, ದೇಶದ ವಿವಿಧ ಕ್ಷೇತ್ರಗಳಲ್ಲಿ ಬದಲಾವಣೆ ತರಲಿದೆ ಎಂದರು.
ಭಾರತವನ್ನು ಜ್ಞಾನ ಜಗತ್ತಿನ ಬಲಶಾಲಿ ರಾಷ್ಟ್ರವನ್ನಾಗಿಸಲು ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ, ಸಮತೆಯುಳ್ಳ ಮತ್ತು ಚಲನಶೀಲ ಜ್ಞಾನ ಸಮಾಜವನ್ನಾಗಿ ಪರಿವರ್ತಿಸುವುದು ಈ ಶೈಕ್ಷಣಿಕ ನೀತಿಯ ದೃಷ್ಟಿಕೋನದ ಮೂಲ ಉದ್ದೇಶವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೂ ಶಿಕ್ಷಣ ತಲುಪಬೇಕು ಎಂಬುದು ಶೈಕ್ಷಣಿಕ ಪದ್ಧತಿಯ ಸಿದ್ಧಾಂತವಾಗಿದ್ದು, ಸಾಮಾಜಿಕ ಬೆಳವಣಿಗೆಗೆ ಬೇಕಾಗುವ ಕಲಿಕೆಯ ಅವಶ್ಯಕ ಪಠ್ಯ ಹಾಗೂ ಚಟುವಟಿಕೆಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ಭಾಗವಹಿಸಬೇಕು ಎಂದು ಹೇಳಿದರು.
ರಾಷ್ಟೀಯ ಶಿಕ್ಷಣ ನೀತಿ ಜಾರಿಗೆ ತಂದ ನಂತರ ಅನೇಕ ಶಿಕ್ಷಕರು ಗೊಂದಲಕ್ಕೆ ಒಳಗಾಗಿದ್ದು, ಮುಂಬರುವ ದಿನಗಳಲ್ಲಿ ಈ ಕುರಿತು ಕಾರ್ಯಗಾರ ಏರ್ಪಡಿಸುವ ಮೂಲಕ ಸೂಕ್ತ ಸಲಹೆಗಳನ್ನು ನೀಡಲಾಗುವುದು. ಪ್ರತಿ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರಿಗೆ ರಾಷ್ಟೀಯ ಶಿಕ್ಷಣ ನೀತಿಯ ಪಠ್ಯ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದರು.
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ ಬೆನಕೆ ಮಾತನಾಡಿ, ಪಠ್ಯಗಳ ಬದಲಾವಣೆಯಿಂದ ಮಕ್ಕಳ ಭವಿಷ್ಯದಲ್ಲಿ ಉತ್ತಮ ಬದಲಾವಣೆಯಾಗಲಿದೆ. ರಾಷ್ಟೀಯ ಶಿಕ್ಷಣ ನೀತಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆಯ ಕಾರ್ಯ ನಿರ್ವಹಿಸಲಿದೆ ಎಂದರು.
ರಾಷ್ಟೀಯ ಶಿಕ್ಷಣ ನೀತಿ ಸಮೀಕ್ಷೆ ಮೂಲಕ ಸಾರ್ವಜನಿಕರ ಸಲಹೆ ಪಡೆದು, 65 ಪುಟಗಳ ರಾಷ್ಟೀಯ ಶಿಕ್ಷಣ ನೀತಿಯ ನಡುವಳಿಗಳನ್ನು ಪ್ರಕಟಿಸಲಾಗಿದೆ. ಉತ್ತಮ ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪೂರ, ಹನುಮಂತ ನಿರಾಣಿ, ಡಿಡಿಪಿಐ ಗಜಾನನ ಮನ್ನಿಕೇರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.