ಎಲ್ಲೆಡೆ ಬಿಜೆಪಿಗೆ ಅಧಿಕಾರ
Team Udayavani, Mar 29, 2021, 4:11 PM IST
ಅಡಹಳ್ಳಿ: ರಾಜ್ಯದ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆ, ಬೆಳಗಾವಿ ಲೋಕಸಭೆ ಉಪಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವುದು ಎಷ್ಟು ಸತ್ಯವೋ ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿಯೂ ಕೂಡ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದು ಸತ್ಯ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಸಮೀಪದ ನದಿ ಇಂಗಳಗಾಂವ ಗ್ರಾಮದಲ್ಲಿ ಕೃಷ್ಣಾ ನದಿ ಹಿನ್ನೀರಿನ ತೀರ್ಥ ಗ್ರಾಮಕ್ಕೆ 2.25 ಕೋಟಿ ವೆಚ್ಚದ ಸಂಪರ್ಕ ಸೇತುವೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾರ್ಯಕರ್ತರಿಗೆ ಅಧಿಕಾರ ಕೊಡುವ ನಿದರ್ಶನ ಕೇವಲ ಜಿಜೆಪಿ ಪಕ್ಷದಲ್ಲಿ ಮಾತ್ರ ಕಾಣ ಸಿಗಲು ಸಾಧ್ಯ. ಇಂತಹ ಪಕ್ಷದ ಕಾರ್ಯಕರ್ತನೆಂದು ಹೆಮ್ಮೆ ಪಡಬೇಕು. ನಾವು ಮಾಡಿದ ಸಾಧನೆಗಳೇ ಜನಮಾನಸದಲ್ಲಿ ಉಳಿಯುತ್ತದೆ. ಬರುವ ದಿನಗಳಲ್ಲಿ ಅಥಣಿ ತಾಲೂಕಿನಲ್ಲಿ ಇನ್ನಷ್ಟು ಸೇತುವೆ ನಿರ್ಮಿಸಿ ಸಂಚಾರ ಸುಗಮವಾಗುವಂತೆ ಮಾಡಲಾಗುವುದು. ದೇಶಾದ್ಯಂತ ಎರಡನೇ ಕೋವಿಡ್ -19 ಅಲೆ ಹೆಚ್ಚಾಗಿದ್ದು, ಇದನ್ನು ತಡೆಗಟ್ಟಲು ಏ.1ರಿಂದ 45 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುವುದು ಎಂದರು.
ಎ.ಎನ್. ಪಾಟೀಲ, ಜಿ.ಎಂ. ತೇವರಮನಿ, ಸಂಜೀವ ರಾಚಗೌಡರ, ಶ್ರೀಶೈಲ ನಾಯಿಕ, ಶಂಕರ ಠಕ್ಕಣ್ಣವರ, ಅಪ್ಪು ಮದಭಾವಿ, ಕುಮಾರ ಮಠಪತಿ, ಶಂಕರಗೌಡ ಪಾಟೀಲ, ನೀರಾವರಿ ಇಲಾಖೆ ಎಡಬ್ಲ್ಯೂ ಪ್ರವೀಣ ಹುಣಸಿಕಟ್ಟಿ, ಸಿದ್ಧು ಲಾಂಡಗೆ, ಎನ್.ಸಿ. ಪವಾರ, ಅಯನಗೌಡಪಾಟೀಲ, ಶಿವರುದ್ರ ಘೂಳಪ್ಪನವರ, ಹಣಮಂತ ಬಾಡಗಿ, ಮಹಾಂತೇಶ ಪಾಟೇಲ, ಅಲಗೌಡ ಮುದಿಗೌಡರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.