ಮೋದಿ ಸರ್ಕಾರದಿಂದ ದೇಶದ ಅಭಿವೃದ್ಧಿ; ಈರಣ್ಣ ಕಡಾಡಿ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತದ ಆರ್ಥಿಕ ಪರಿಸ್ಥಿತಿ ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆ
Team Udayavani, Jun 1, 2022, 6:10 PM IST
ಮೂಡಲಗಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಗತಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು 15 ದಿನ ಪ್ರತಿದಿನ 5 ಗಂಟೆಯಂತೆ ಒಟ್ಟು 75 ಗಂಟೆಗಳ ಕಾಲ ಸರ್ಕಾರದ ಯೋಜನೆ ಫಲಾನುಭವಿಗಳೊಂದಿಗೆ ಸಂಪರ್ಕ ಸಾಧಿಸಲು ಶ್ರಮಿಸಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.
ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸದಸ್ಯರ ಜನಸಂಪರ್ಕ ಕಾರ್ಯಾಲಯದಲ್ಲಿ ಮಂಗಳವಾರ ಪ್ರಧಾನ ಮಂತ್ರಿಗಳು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನಡೆಸಿದ ನೇರ ಸಂವಾದ ಕಾರ್ಯಕ್ರಮ ರೈತರೊಂದಿಗೆ ವೀಕ್ಷಿಸಿ, ನಂತರ ಅವರು ಮಾತನಾಡಿದರು.
30 ವರ್ಷಗಳ ನಂತರ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ಅ ಧಿಕಾರಕ್ಕೆ ಬಂದ ಮೇಲೆ ದೇಶದ ಅಭಿವೃದ್ಧಿ ಗತಿ ಬದಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಖ್ಯಾತಿ ಹೆಚ್ಚಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತದ ಆರ್ಥಿಕ ಪರಿಸ್ಥಿತಿ ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಕೋವಿಡ್ ನಂತಹ ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿಯೂ ಜನರಿಗೆ ಯಾವುದೇ ತೊಂದರೆಯಾಗದಂತೆ ಆರೋಗ್ಯ ಮತ್ತು ಆಹಾರ ಎಲ್ಲ ವ್ಯವಸ್ಥೆ ಸಮರ್ಪಕವಾಗಿ ಮಾಡುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
8 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ರೈತ ಪರವಾಗಿ ವಿಶೇಷ ಕಳಕಳಿ ಹೊಂದಿದ್ದು, ನೂರಾರು ಯೋಜನೆ ಜಾರಿಗೆ ತಂದಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇಂದು ದೇಶದ 10 ಕೋಟಿಗೂ ಅಧಿಕ ರೈತ ಬಂಧುಗಳಿಗೆ 21 ಸಾವಿರ ಕೋಟಿ ರೂ. ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದಾರೆ ಎಂದರು.
ಈ ವೇಳೆ ಬಸವರಾಜ ಕಡಾಡಿ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ರೈತ ಮೋರ್ಚಾ ಅಧ್ಯಕ್ಷ ತಮ್ಮಣ್ಣ ದೇವರ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ, ಪದಾಧಿ ಕಾರಿಗಳಾದ ಶ್ರೀಕಾಂತ ಕೌಜಲಗಿ, ಸುರೇಶ ಮಠಪತಿ, ಶ್ರೀಶೈಲ ಪೂಜೇರಿ, ಅಡಿವೆಪ್ಪ ಕುರಬೇಟ, ದುಂಡಪ್ಪ ನಿಂಗನ್ನವರ, ಭೀಮಶಿ ಬಂಗಾರಿ, ಅಶೋಕ ಶಿವಾಪೂರ, ಬಸವರಾಜ ಗಾಡವಿ, ಮಂಗಲಾ ಕೌಜಲಗಿ, ಕಮಲಾ ಬಡಗಾಂವಿ, ಶ್ರೀಶೈಲ ತುಪ್ಪದ, ಶಿವಗೊಂಡ ವ್ಯಾಪಾರಿ, ಸಹದೇವ ಹೆಬ್ಟಾಳ, ಪರಪ್ಪ ಮಳವಾಡ, ಈರಣ್ಣ ಮುನ್ನೋಳಿಮಠ, ಶಿವಪ್ಪ ಬಿ. ಪಾಟೀಲ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Bengaluru Crime: ಕತ್ತು ಬಿಗಿದು ಇಬ್ಬರು ಮಕ್ಕಳನ್ನು ಕೊಂದ ಅಮ್ಮ!
IRACON:ಸಂಧಿವಾತ ಸಮಸ್ಯೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು: ಡಾ.ಶರಣಪ್ರಕಾಶ ಪಾಟೀಲ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.