ಬೆಳಗಾವಿ ಜಿಲ್ಲೆಗೆ ಬಂದು ರೌಂಡ್ ಹಾಕಿದ ಡಿಜಿ ಸೂದ್
ಪೊಲೀಸ್ ಅಧಿಕಾರಿಗಳ ಸಭೆ ; ಪೊಲೀಸ್ ವಸ್ತು ಸಂಗ್ರಹಾಲಯ ಉದ್ಘಾಟನೆ-ವೀಕ್ಷಣೆ
Team Udayavani, Aug 18, 2021, 3:05 PM IST
ಬೆಳಗಾವಿ: ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು.
ಇಲ್ಲಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭಾಭವನದಲ್ಲಿ ಸಭೆ ನಡೆಸಿದ ಡಿಜಿಪಿ ಪ್ರವೀಣ ಸೂದ್ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಹೊಸ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆಯ ಹೊಸ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಪ್ರವೀಣ ಸೂದ್ ಅವರು, ಮುಂದಿನ ದಿನಗಳಲ್ಲಿ ಅಗತ್ಯ ಚಟುವಟಿಕೆಗಳನ್ನು ಕೈಗೊಳ್ಳುವುದರ ಬಗ್ಗೆಯೂ ಅಧಿಕಾರಿಗಳಿಂದ ವರದಿ ಪಡೆದುಕೊಂಡರು. ನಂತರ ಇಲಾಖೆಯಲ್ಲಿಯ ಪ್ರಮುಖ
ಚಟುವಟಿಕೆಗಳ ಬಗ್ಗೆ ಸಮಗ್ರ ವರದಿ ಪಡೆದು ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಹೇಳಿದರು. ಪೊಲೀಸ್ ಇಲಾಖೆಯಲ್ಲಿಯ ಆಡಳಿತಾತ್ಮಕ ವಿಷಯಗಳಲ್ಲಿಯ ಪ್ರಮುಖ ಅಂಶಗಳನ್ನು ತಿಳಿದುಕೊಂಡು ಆಯಾ ತಾಲೂಕಿನಲ್ಲಿಯ ಆಡಳಿತದ ಬಗ್ಗೆ ಪರಿಶೀಲನೆ
ನಡೆಸಿದರು.
ಇದನ್ನೂ ಓದಿ:5,375 ಕೋಟಿ ರೂ ಮೊತ್ತದಲ್ಲಿ ‘ಎಫ್404–ಜಿಇ–ಐಎನ್ 20’ ಎಂಜಿನ್ ಖರೀದಿಸಲಿದೆ ಎಚ್‌ಎಎಲ್..!
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಕೋವಿಡ್-19 ಕಾಲದಲ್ಲಿ ಅಗತ್ಯ ಕ್ರಮ ಕೈಗೊಂಡಿರುವ ಬಗ್ಗೆ ವರದಿ ನೀಡಿದರು. ಜತೆಗೆ ಪ್ರವಾಹ ಪೀಡಿತ ತಾಲೂಕುಗಳಲ್ಲಿ ಪೊಲೀಸ್ ಇಲಾಖೆ ಕೈಗೊಂಡಿರುವ ಕಾರ್ಯಗಳ ಬಗ್ಗೆ ವಿವರಿಸಿದರು. ನೆರೆಯಲ್ಲಿ ಜನರ ಪ್ರಾಣ ರಕ್ಷಣೆ, ಸಂತ್ರಸ್ತರ ಸ್ಥಳಾಂತರ ಹೀಗೆ ವಿವಿಧ ವಿಷಯಗಳನ್ನು ತಿಳಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚುತ್ತಿರುವುದರಿಂದ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಬೆಳಗಾವಿ ಜಿಲ್ಲೆ ಪ್ರವೇಶಿಸುವ ಪ್ರಯಾಣಿಕರ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯವಾಗಿ ಪರಿಶೀಲಿಸಿಯೇ ಬಿಡಲಾಗುತ್ತಿದೆ. ನೆಗೆಟಿವ್ ವರದಿ ಇಲ್ಲದವರ ವಾಹನಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಕೊಗನೊಳ್ಳಿ, ಕಾಗವಾಡ ಸೇರಿದಂತೆ ಅನೇಕ ಕಡೆಗೆ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.
ಉತ್ತರ ವಲಯ ಐಜಿಪಿ ಸತೀಶಕುಮಾರ್ ಸೇರಿದಂತೆ ಜಿಲ್ಲೆಯ ಡಿಎಸ್‌ಪಿ, ಸಿಪಿಐ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರು.
ಇದಕ್ಕೂ ಮುನ್ನ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರು ಪೊಲೀಸ್ ಕಮೀಷನರೇಟ್ ಕಚೇರಿ ಕಟ್ಟಡ ನಿರ್ಮಾಣ ಬಗ್ಗೆ ಪರಿಶೀಲನೆ ನಡೆಸಿದರು.
ನಂತರ ಪೊಲೀಸ್ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸಿ, ವೀಕ್ಷಿಸಿದರು. ಖಾನಾಪುರದ ಪೊಲೀಸ್ ತರಬೇತಿ ಶಾಲೆಗೆ ಭೇಟಿ ನೀಡಿದರು. ಪೊಲೀಸ್ ಕೇಂದ್ರ ಸ್ಥಾನಕ್ಕೆ ಭೇಟಿ ನೀಡಿ ಪೊಲೀಸ್ ಕಲ್ಯಾಣ ಕಾರ್ಯಕ್ರಮಗಳು ಹಾಗೂ ವಸತಿಗೃಹಗಳ ನಿರ್ಮಾಣದ ಬಗ್ಗೆ ಪರಿಶೀಲನೆ ನಡೆಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.