ನೇರ ಫೋನ್ ಇನ್ ಕಾರ್ಯಕ್ರಮ
Team Udayavani, May 28, 2020, 7:14 AM IST
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ಸಹಯೋಗದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ನಡೆಯಿತು.
ಬೆಳಗಾವಿ: ನೀರು ಉಳಿಸುವ ಬಗ್ಗೆ ಜಾಗೃತರಾಗದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆ ಇದೆ. ಮೊದಲು ನಮ್ಮ ಮನೆಗಳಲ್ಲಿ ನೀರನ್ನು ಮಿತವ್ಯಯವಾಗಿ ಬಳಸಬೇಕು ಮತ್ತು ನೀರಿನ ಮಹತ್ವ ಅರಿಯಬೇಕಾಗಿದೆ ಎಂದು ಹುಕ್ಕೇರಿ ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಅಭಯಂತರರಾದ ಎ.ಬಿ. ಪಟ್ಟಣಶೆಟ್ಟಿ ಹೇಳಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಶೌಚಾಲಯದ ನಿರ್ಮಾಣ, ನಿರ್ವಹಣೆ ಹಾಗೂ ಉಪಯೋಗ, ಸಾರ್ವಜನಿಕ ಶೌಚಾಲಯದ ಸಮಸ್ಯೆಗೆ ಸಂಬಂಧಿಸಿದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಳುಗರ ಕರೆಗಳಿಗೆ ಉತ್ತರಿಸಿದ ಅವರು, ಪ್ರತಿ ಗ್ರಾಮಗಳಲ್ಲಿ ಕುಡಿಯುವ ನೀರನ್ನು ಸಮರ್ಪಕವಾಗಿ ವಿತರಿಸಲು ಕ್ರಮಕೈಗೊಳ್ಳಲಾಗುವುದು. ಜನರು ನೀರನ್ನು ಮಿತವಾಗಿ ಬಳಸದೆ ಪೋಲು ಮಾಡುತ್ತಿದ್ದಾರೆ. ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ನೀರಿಲ್ಲದೆ ಬಹಳ ಕಷ್ಟ ಪಡಬೇಕಾಗುತ್ತದೆ ಎಂದರು.
ಆರೋಗ್ಯ ಸುಧಾರಣೆಗಾಗಿ, ಜನರ ರಕ್ಷಣೆಗಾಗಿ ಎಲ್ಲಕ್ಕಿಂತ ಹೆಚ್ಚಾಗಿ ಮಹಿಳೆಯರ ಮತ್ತು ಬಾಲಕಿಯರ ಗೌರವ ಕಾಪಾಡಲೂ ಶೌಚಾಲಯ ಸುಭದ್ರತೆಯ ಸಂಕೇತವಾಗಿದೆ. ಶೌಚಾಲಯದ ನಿರ್ಮಾಣ ಎಂದು ಹೇಳಿದ ಸಹಾಯಕ ಅಭಿಯಂತರಾದ ರವೀಂದ್ರ ಮುರಗಾಲಿ, ಶೌಚಾಲಯ ನಿರ್ವಹಣೆ ಹಾಗೂ ಉಪಯೋಗ ಮತ್ತು ಸಾರ್ವಜನಿಕ ಶೌಚಾಲಯದ ಸಮಸ್ಯೆಗೆ ಸಂಬಂಧಿಸಿದ ಕರೆಗಳಿಗೆ ಉತ್ತರಿಸಿದರು. ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಚಾರ್ಯ ಕಿರಣ ಚೌಗಲಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.