ನೆರೆ ಪರಿಹಾರದಲ್ಲಿ ತಾರತಮ್ಯ-ಪ್ರತಿಭಟನೆ
Team Udayavani, Jan 28, 2020, 2:33 PM IST
ಬೆಳಗಾವಿ: ನೆರೆ ಪರಿಹಾರ ವಿತರಿಸುವಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಅನೇಕ ಗ್ರಾಮಗಳ ಬದುಕು ಅತಂತ್ರವಾಗಿದ್ದು, ಇನ್ನೂ ಅನೇಕ ಗ್ರಾಮಗಳಿಗೆ ನೆರೆ ಪರಿಹಾರ ಬಾರದೇ ನಿತ್ಯ ಸಮಸ್ಯೆ ಅನುಭವಿಸುವಂತಾಗಿದೆ. ಪರಿಹಾರವನ್ನು ಉಳ್ಳವರ ಪಾಲಾಗುತ್ತಿದ್ದು, ಕೂಡಲೇ ಇದನ್ನು ಸರಿಪಡಿಸಿ ಜನರಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಆಗ್ರಹಿಸಿದರು.
ಮೂಡಲಗಿ ತಾಲೂಕಿನ ತಿಗಡಿ, ಉದಗಟ್ಟಿ ಗ್ರಾಮದಲ್ಲಿ ನೆರೆ ಪರಿಹಾರ ನೀಡುವಲ್ಲಿ ಅಲ್ಲಿನ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ. ಪಿಡಿಒ ಹಾಗೂ ಇತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಆಗಸ್ಟ್‌ನಲ್ಲಿ ಬಂದ ಪ್ರವಾಹದಿಂದಾಗಿ ಜನಜೀವನ ತತ್ತರಿಸಿ ಹೋಗಿದೆ. ಆದರೆ ಸಂಕಷ್ಟದಲ್ಲಿರುವ ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡುವಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ. ಅರ್ಹ ರೈತರಿಗೆ ಪರಿಹಾರ ನೀಡಿಲ್ಲ. ಇದಕ್ಕೆ ಅಲ್ಲಿನ ಪಿಡಿಒ, ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿಗಳೇ ನೇರ ಹೊಣೆಗಾರರು ಎಂದು ದೂರಿದರು.
ಪರಿಹಾರ ತಾರತಮ್ಯ ಕುರಿತು ಈಗಾಗಲೇ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಪ್ರಯೋಜನವಾಗಿಲ್ಲ. ಕೂಡಲೇ ಈ ಲೋಪವನ್ನು ಸರಿಪಡಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಶಿವರಡ್ಡಿ ಹುಚರಡ್ಡಿ, ಸಂಜಯ ರಜಪೂತ, ಬಸು ಪಾಟೀಲ, ಸವಿತಾ ಹುಚ್ಚನ್ನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.