ಯಾಂತ್ರಿಕ ಜೀವನಶೈಲಿಯಿಂದ ಕಾಯಿಲೆ ಹೆಚ್ಚು
ಉಚಿತ ಹೃದಯರೋಗ ತಪಾಸಣೆ ಶಿಬಿರ ; ಹದಿ ಹರೆಯದವರಲ್ಲಿ ಕಾಣಿಸಿಕೊಳ್ಳುತ್ತಿದೆ ಹೃದಯರೋಗ-ಆತಂಕ
Team Udayavani, Jun 2, 2022, 5:19 PM IST
ರಾಮದುರ್ಗ: ಇಂದಿನ ಯಾಂತ್ರಿಕ ಜೀವನಶೈಲಿಯಿಂದಾಗಿ ಹೆಚ್ಚಿನ ಜನರಲ್ಲಿ ಹೃದಯ ಸಂಬಂಧಿ ಕಾಯಿಲೆ ಹೆಚ್ಚಾಗುತ್ತಿವೆ. ಮೊದಲು ವಯಸ್ಕರಲ್ಲಿ ಕಾಣಿಸುತ್ತಿದ್ದ ಹೃದಯ ರೋಗ ಈಗ ಹದಿ ಹರೆಯದವರಲ್ಲಿ ಕಾಣಿಸಿಕೊಳ್ಳುತ್ತಿದೆ ಎಂದು ಆಯುರ್ವೇದ ವೈದ್ಯ ಡಾ| ಮಂಜುನಾಥ ಕುರುಡಗಿ ಆತಂಕ ವ್ಯಕ್ತಪಡಿಸಿದರು.
ಪಟ್ಟಣದ ನೇಕಾರ ಪೇಟೆಯ ಶ್ರೀ ದುಗ್ಗಳೆ ದಾಸಿಮಯ್ಯ ಮಹಿಳಾ ಮಂಡಳದ ಪ್ರಥಮ ವಾರ್ಷಿಕೋತ್ಸವ ನಿಮಿತ್ತ ಮಹಿಳಾ ಮಂಡಳ ಹಾಗೂ ಧಾರವಾಡದ ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್ ಆಶ್ರಯದಲ್ಲಿ ತಾಲೂಕು ಆಯುರ್ವೇದ ಆಸ್ಪತ್ರೆಯಲ್ಲಿ ನಡೆದ ಉಚಿತ ಹೃದಯರೋಗ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಅವಸರದ ಜೀವನದಲ್ಲಿ ನಿಯಮಿತ ಆಹಾರ ಸೇವಿಸದೇ ಜಂಕ್ ಫುಡ್‌ನಿಂದ ಹೃದಯ ಸಂಬಂ ಧಿತ ರೋಗಗಳ ಹೆಚ್ಚಳಕ್ಕೆ ಕಾರಣವಾಗಿದೆ. ನಮ್ಮ ಪಚನಕ್ರಿಯೆಗೆ ಅನುಸಾರ ಮಿತ ಆಹಾರ ಸೇವನೆ ಹಾಗೂ ರಾಗ-ದ್ವೇಷಗಳಿಂದ ದೂರ ಉಳಿದಲ್ಲಿ ರೋಗಗಳಿಂದ ದೂರ ಉಳಿಯಲು ಸಾಧ್ಯವಿದೆ ಎಂದರು.
ಎಸ್‌ಡಿಎಂ ಆಸ್ಪತ್ರೆ ಹೃದಯ ರೋಗ ತಜ್ಞ ಡಾ| ಮಹೇಶ ಹೊನ್ನಳ್ಳಿ ಮಾತನಾಡಿ, ತಂಬಾಕು ವ್ಯಸನ ಹಾಗೂ ಮದ್ಯ ಸೇವನೆಯಿಂದ ಸಾಕಷ್ಟು ಯುವಕರು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಪಡೆಯದೇ ಅನೇಕರು ಬಲಿಯಾಗುತ್ತಿದ್ದಾರೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಅನೇಕ ಸವಲತ್ತು ಕಲ್ಪಿಸಿದೆ. ಜೊತೆಗೆ ಇಂತಹ ಉಚಿತ ಶಿಬಿರಗಳ ಸದುಪಯೋಗ ಪಡೆದು ಆರೋಗ್ಯ ವೃದ್ಧಿಸಿಕೊಳ್ಳಬೇಕು ಎಂದರು.
ಧಾರವಾಡದ ನಾರಾಯಣ ಹಾರ್ಟ್ ಸೆಂಟರ್‌ನ ಸೀನಿಯರ್ ಮ್ಯಾನೇಜರ್ ಅಜಯ್ ಹುಲಮನಿ ಮಾತನಾಡಿ, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿರುವ ಸೌಲಭ್ಯಗಳು ನಮ್ಮ ಧಾರವಾಡದ ಆಸ್ಪತ್ರೆಯಲ್ಲಿವೆ. ಆರೋಗ್ಯ-ಬಿಪಿಎಲ್ ಕಾರ್ಡ ಮೂಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದರು.
ಪುರಸಭೆ ಮಾಜಿ ಅಧ್ಯಕ್ಷೆ ಗಾಯತ್ರಿ ದೇವಾಂಗಮಠ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮಹಿಳಾ ಮಂಡಳ ಅಧ್ಯಕ್ಷೆ ಪೂಜಾ ಕಟಾವಕರ ಅಧ್ಯಕ್ಷತೆ ವಹಿಸಿದ್ದರು. ಶಿಬಿರದಲ್ಲಿ ಒಟ್ಟು 201 ಜನರ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ವೇಳೆ ಶ್ರೀ ಬನಶಂಕರಿ ದೇವಾಂಗ ಸಮಾಜದ ಅಧ್ಯಕ್ಷ ನಾರಾಯಣ ಬೆನ್ನೂರ, ಜಿಪಂ ಮಾಜಿ ಸದಸ್ಯೆ ರತ್ನಾ ಯಾದವಾಡ, ನ್ಯಾಯವಾದಿ ಜಮುನಾ ಪಟ್ಟಣ, ಡಾ| ವೀರೇಶ ಗೊರಾಬಾಳ, ಎಸ್.ಎಂ. ಮುರುಡಿ, ಶ್ರೀನಿವಾಸ ಕುರುಡಗಿ, ಪ್ರಕಾಶ ಸೂಳಿಭಾಂವಿ, ಪುಂಡಲೀಕ ವಡಕಣ್ಣವರ ಇದ್ದರು. ವೈಜಯಂತಿ ಕನಕನ್ನವರ ಸ್ವಾಗತಿಸಿದರು. ಎಸ್.ಎಸ್. ಯಲಿಗೋಡ ನಿರೂಪಿಸಿದರು. ಲಲಿತಾ ಕಾಟೂಕರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.