ದ್ರಾಕ್ಷಿ ಬೆಳೆ ಬೆಂಬಿಡದ ರೋಗ ಕಾಟ

ಹವಾಮಾನ ವೈಪರೀತ್ಯ-ಮಳೆ-ಮೋಡ ಕವಿದ ವಾತಾವರಣದಿಂದ ಬೆಳೆಗೆ ಡೌನಿ ಮಿಲ್ಡವ್‌-ಕೊಳೆ ರೋಗ

Team Udayavani, Oct 15, 2022, 12:22 PM IST

8

ಕೋಹಳ್ಳಿ: ಕಳೆದ ಮೂರ್‍ನಾಲ್ಕು ದಿನಗಳಿಂದ ದಿನಗಳಿಂದ ಸುರಿಯುತ್ತಿರುವ ಮಳೆ, ಮೋಡ ಕವಿದ ವಾತಾವರಣ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಅಥಣಿ ತಾಲೂಕಿನ ದ್ರಾಕ್ಷಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದ್ರಾಕ್ಷಿ ಬೆಳೆಗೆ ಡೌನಿ ಮಿಲ್ಡಿವ್‌ (ಭೂಜು ತುಪ್ಪಟ) ರೋಗ ತಗುಲಿ ಬೆಳೆ ನಾಶವಾಗುತ್ತಿದೆ.

ಅಥಣಿ ತಾಲೂಕಿನ ಸುಮಾರು 4 ಸಾವಿರ ಹೆಕ್ಟರ್‌ಗಿಂತಲೂ ಹೆಚ್ಚಿನ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತದೆ. ತಾಲೂಕಿನ ಪೂರ್ವ ಹಾಗೂ ಉತ್ತರ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತದೆ. ಶೇ.70 ಕ್ಕಿಂತ ಹೆಚ್ಚು ರೈತರು ಸಪ್ಟೆಂಬರ್‌ ತಿಂಗಳಿನಲ್ಲಿ ಚಾಟನಿ ಮಾಡಿದ್ದಾರೆ. ಚಾಟನಿ ಮಾಡಿದ ದ್ರಾಕ್ಷಿ ತೋಟಗಳಲ್ಲಿ ಈಗ ಹೂವುಗಳು ಮೂಡಿ, ಕಾಯಿ ಕಟ್ಟುವ ಹಂತದಲ್ಲಿದೆ.

ಇಂತಹ ಸ್ಥಿತಿಯಲ್ಲಿ ನಾಲ್ಕು ದಿನಗಳಿಂದ ಮಳೆ ಸುರಿದಿದ್ದರಿಂದ ಡವಣಿ ಹಾಗೂ ಕೊಳೆ ರೋಗದಿಂದ ದ್ರಾಕ್ಷಿ ಕಾಳುಗಳ ಗೊಂಚಲು ಕೊಳೆಯುವುದು ಮತ್ತು ಹೂವುಗಳು ಉದರುತ್ತಿವೆ. ತಾಲೂಕಿನ ಕೋಹಳ್ಳಿ, ಬಡಚಿ, ಯಕ್ಕಂಚಿ, ಯಲಿಹಡಲಗಿ, ಅಡಹಳ್ಳಿ, ಅಡಹಳ್ಳಟ್ಟಿ, ಕಕಮರಿ, ರಾಮತೀರ್ಥ, ಕೊಟ್ಟಲಗಿ, ಅರಟಾಳ, ಬಾಡಗಿ ಸೇರಿದಂತೆ ತೆಲಸಂಗ ಹೋಬಳಿ ವ್ಯಾಪ್ತಿಯಲ್ಲಿ ಬರುವ ಅನೇಕ ಹಳ್ಳಿಗಳಲ್ಲಿ ದ್ರಾಕ್ಷಿ ಬೆಳೆಗೆ ರೋಗ ತಗಲಿದೆ. ಈಗ ಅಕ್ಟೋಬರ್‌ ಮೊದಲ ವಾರದಲ್ಲಿ ಚಾಟನಿ ಮಾಡಿದ ತೋಟಗಳಲ್ಲಿ ಹೂವು ಚಿಗುರು ಒಡೆಯುತ್ತಿದ್ದು, ಇದಕ್ಕೂ ಕೂಡ ಡೌನಿ ರೋಗ ತಗಲುವ ಆತಂಕ ರೈತರಿಗೆ ಕಾಡುತ್ತಿದೆ.

ಡೌನಿ ಹಾಗೂ ಕೊಳೆ ರೋಗ ಬೇಗನೆ ವ್ಯಾಪಿಸಿ ಹೂವು, ಕಾಯಿ ಕಟ್ಟುವ ಕಾಳುಗಳನ್ನು ನಾಶ ಮಾಡುತ್ತದೆ. ಇದರಿಂದ ದ್ರಾಕ್ಷಿ ಗೊನೆಯಲ್ಲಿರುವ ಕಾಳುಗಳು ಮತ್ತು ಹೂವು ಕಳಚಿ ನೆಲಕ್ಕೆ ಬಿಳುತ್ತವೆ. ಮಳೆಯಿಂದ ಗೊನೆಯಲ್ಲಿ ನೀರು ನಿಂತು ದ್ರಾಕ್ಷಿ ಗೊನೆಗಳು ಕೊಳೆಯುತ್ತವೆ. ದಿನದಲ್ಲಿ ಮೂರು ಬಾರಿ ಔಷಧ ಸಿಂಪಡಿಸಿದರೂ ರೋಗ ಹತೋಟಿಗೆ ಬರುತ್ತಿಲ್ಲ ಎನ್ನುತ್ತಾರೆ ಬೆಳೆಗಾರರು.

ಅಧಿಕಾರಿಗಳ ಭೇಟಿಗೆ ಆಗ್ರಹ: ತೋಟಗಾರಿಕೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳು ತೋಟಗಳಿಗೆ ಭೇಟಿ ನೀಡಿ ಹಾನಿ ಮಾಹಿತಿ ಪಡೆದುಕೊಳ್ಳಬೇಕು. ಸರಕಾರ ಈ ಭಾಗದ ದ್ರಾಕ್ಷಿ ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡಬೇಕು. ವಿಮೆ ತುಂಬಿದ ರೈತರಿಗೆ ಶೀಘ್ರ ಹಣ ಬಿಡುಗಡೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಹವಾಮಾನ ವೈಪರೀತ್ಯದಿಂದ ದ್ರಾಕ್ಷಿ ಬೆಳೆಗೆ ಡೌನಿ ರೋಗ ಬಂದಿದ್ದು, ರೈತರಿಗೆ ಮುನ್ನೆಚ್ಚರಿಕೆ ಕ್ರಮಗಳ ಜಾಗೃತಿ ಮೂಡಿಸಲಾಗಿದೆ. ವಾತಾವರಣದಲ್ಲಿ ಏರು-ಪೇರು ಆಗಿ ಎಲೆ ಮತ್ತು ಹೂವಿನಲ್ಲಿ ನೀರು ನಿಲ್ಲುವುದರಿಂದ ರೋಗ ಹೆಚ್ಚಾಗುತ್ತಿದೆ. ರೈತರು ಅಧಿಕಾರಿಗಳಿಂದ ಬೆಳೆ ರಕ್ಷಣೆ ಮಾಹಿತಿ ಪಡೆದುಕೊಳ್ಳಬೇಕು.  –ಶ್ವೇತಾ ಹಾಡಕರ, ನಿರ್ದೇಶಕರು, ತೋಟಗಾರಿಕೆ ಇಲಾಖೆ, ಅಥಣಿ.

ಅಥಣಿ ತಾಲೂಕಿನಲ್ಲಿ ಮೂರು ದಿನಗಳಿಂದ ಸುರಿದ ಮಳೆಗೆ ದ್ರಾಕ್ಷಿ ಹಾಗೂ ಇತರೆ ಬೆಳೆಗಳು ಹಾನಿಯಾದ ಬಗ್ಗೆ ರೈತರಿಂದ ಮಾಹಿತಿ ಬಂದಿದೆ. ತಾಲೂಕು ಅಧಿಕಾರಿಗಳಿಗೆ ರೈತರ ತೋಟಕ್ಕೆ ಭೇಟಿ ನೀಡಿ ಹಾನಿ ಸರ್ವೇ ಮಾಡಲು ಸೂಚಿಸಿದ್ದೇನೆ.  –ಮಹೇಶ ಕುಮಠಳ್ಳಿ, ಶಾಸಕರು ಅಥಣಿ.

ಕಲ್ಮೇಶ ಸತ್ತಿ

ಟಾಪ್ ನ್ಯೂಸ್

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

13

Belagavi: ಗಾಂಧಿ‌ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.