ಪ್ರೋತ್ಸಾಹ ಧನ ವಿತರಣೆ
Team Udayavani, Jun 1, 2020, 4:56 AM IST
ಅಥಣಿ: ಕೋವಿಡ್ ವಾರಿಯರ್ಸ್ ಗೆ ಸಹಕಾರಿಗಳ ಸಲಾಂ ಎಂಬ ಕಾರ್ಯಕ್ರಮದಡಿ ರವಿವಾರ ಐನಾಪುರ, ಕೃಷ್ಣಾ ಕಿತ್ತೂರ, ಮದಭಾವಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು.
ಡಿಸಿಎಂ ಲಕ್ಷ್ಮಣ ಸವದಿ ಆಶಾ ಕಾರ್ಯಕರ್ತರಿಗೆ ಚೆಕ್ ವಿತರಿಸಿ ಮಾತನಾಡಿ, ಕೋವಿಡ್ ವಿರುದ್ಧದ ಹೋರಾಟದಲ್ಲಿ ವೈದ್ಯರ ಜೊತೆಗೂಡಿ ಆಶಾ ಕಾರ್ಯಕರ್ತರು ಕೆಲಸ ಮಾಡಿದ್ದನ್ನು ಗುರುತಿಸಿ ಅಭಿನಂದಿಸುವ ಕೆಲಸಕ್ಕೆ ಸರ್ಕಾರ ಚಾಲನೆ ನೀಡಿದೆ. ನಿಮ್ಮ ಕೆಲಸವನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ನಾವು ಸಹಕಾರ ಸಂಘಗಳ ಸಹಾಯ ಬಯಸಿದಾಗ ರಾಜ್ಯದ ಎಲ್ಲ ಸಹಕಾರಿ ಸಂಘಗಳು ಮುಂದಾದವು. ಈಗ ತಾಲೂಕಿನ 456 ಆಶಾ ಕಾರ್ಯಕರ್ತರಿಗೆ ತಲಾ ಮೂರು ಸಾವಿರ ರೂ. ಚೆಕ್ ವಿತರಿಸಲಾಗುತ್ತಿದೆ ಎಂದರು.
ಈ ವೇಳೆ ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ವಿನಾಯಕ ಲಕ್ಸಾಣಿ, ರವಿ ಪೂಜಾರಿ, ಪ್ರಕಾಶ ಕೊರಬು ಸೇರಿದಂತೆ ಹಲವು ಸಹಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.