ಮಾಡು ಇಲ್ಲವೇ ಮಡಿ ಹೋರಾಟ; ಮೃತ್ಯುಂಜಯ ಸ್ವಾಮೀಜಿ
ಚೆನ್ನಮ್ಮ ವೃತ್ತದಲ್ಲಿರುವ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಯಿತು.
Team Udayavani, May 18, 2022, 5:49 PM IST
ಬೈಲಹೊಂಗಲ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸರ್ಕಾರ ಅ ಧಿವೇಶನದಲ್ಲಿ ಕೊಟ್ಟ ಮಾತಿನಂತೆ ಮೀಸಲಾತಿ ನೀಡದಿದ್ದರೆ ಮೇ 23 ರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿಯ ಮನೆಯಿಂದಲೇ ಹೋರಾಟ ಆರಂಭಿಸಿ ರಾಜ್ಯಾದ್ಯಂತ ಜಿಲ್ಲಾ ಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಇದು ಪಂಚಮಸಾಲಿ 2ಎ ಮೀಸಲಾತಿಗಾಗಿ ಮಾಡು ಇಲ್ಲವೇ ಮಡಿ ಹೋರಾಟವಾಗಲಿದೆ ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಮಂಗಳವಾರ ಪಟ್ಟಣದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ತಾಲೂಕು ಘಟಕದಿಂದ 2ಎ ಮೀಸಲಾತಿಗೆ ಒತ್ತಾಯಿಸಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆ ನೇತೃತ್ವವಹಿಸಿ ಅವರು ಮಾತನಾಡಿ, ಸರ್ಕಾರ ಸಮಾಜದ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ನಿಷ್ಕಾಳಜಿ ಮಾಡಿದರೆ ಬರುವ ದಿನಮಾನಗಳಲ್ಲಿ ಸಮಾಜದ ಜನರು ತಕ್ಕ ಪಾಠ ಕಲಿಸಬೇಕಾಗುತ್ತದೆ. ಕಾಲಹರಣ ಮಾಡದೆ ಸಮಾಜದ ಬೇಡಿಕೆಯಾಗಿರುವ 2ಎ ಮೀಸಲಾತಿ ನೀಡಿ
ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.
ಕಾಡಾ ಅಧ್ಯಕ್ಷ ಡಾ| ವಿಶ್ವನಾಥ ಪಾಟೀಲ, ತಾಲೂಕು ಅಧ್ಯಕ್ಷ ಶ್ರೀಶೈಲ ಬೋಳನ್ನವರ, ಮಹಾಂತೇಶ ತುರಮರಿ, ಶಂಕರ ಮಾಡಲಗಿ, ಎಫ್. ಎಸ್.ಸಿದ್ದನಗೌಡರ, ಪಂಚನಗೌಡ ದ್ಯಾಮನಗೌಡರ, ರೋಹಿಣಿ ಬಾಬಾಸಾಹೇಬ ಪಾಟೀಲ, ಗೀತಾಂಜಲಿ ಮಾತನಾಡಿದರು. ಮಿನಿ ವಿಧಾನಸೌಧದಲ್ಲಿರುವ ಬಸವೇಶ್ವರ ಮೂರ್ತಿ, ಚೆನ್ನಮ್ಮ ವೃತ್ತದಲ್ಲಿರುವ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆ ಇಂಚಲ
ಕ್ರಾಸ್, ಎಪಿಎಂಸಿ ಗಣೇಶ ದೇವಸ್ಥಾನ, ಬಸ್ ನಿಲ್ಸಾಣ , ರಾಯಣ್ಣ ವೃತ್ತ, ಮೂಲಕ ಎಸಿ ಕಚೇರಿ ತಲುಪಿತು.
ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಮಾಜಿ ಅಧ್ಯಕ್ಷ ಬಾಬು ಕುಡಸೋಮಣ್ಣವರ, ಸೋಮೇಶ್ವರ ಕಾರ್ಖಾನೆ ಉಪಾಧ್ಯಕ್ಷ ರಾಜು ಕುಡಸೋಮಣ್ಣವರ, ಮುಖಂಡರಾದ ಮಹೇಶ ಹರಕುಣಿ, ಮುರುಗೇಶ ಗುಂಡ್ಲೂರ, ಶ್ರೀಶೈಲ ಯಡಳ್ಳಿ, ಮಹಾಂತೇಶ ಮತ್ತಿಕೊಪ್ಪ, ಎಂ.ವಾಯ್,ಸೋಮನ್ನವರ, ರಾಜಶೇಖರ ಮೂಗಿ, ವಿರೇಶ ಹಲಕಿ, ಗಂಗಾಧರ ಹುಲಕುಂದ, ಶ್ರೀಶೈಲ ಶರಣಪ್ಪನವರ, ಸಂಜೀವಗೌಡರ ಫಾಟೀಲ, ಆರ್.ಕೆ.ಪಾಟೀಲ,ಪಿರಗೋಜಿ, ಈರಣ್ಣಾ ಬೇಟಗೇರಿ, ಮಹಾಂತೇಶ ಗುಂಡ್ಲೂರ, ಎಸ್.ಬಿ.ಸಂಗನಗೌಡರ ವಿವಿಧ ಗ್ರಾಮಗಳಿಂದ ಆಗಮಿಸಿದ ನೂರಾರು ಪಂಚಮಸಾಲಿ ಸಮಾಜದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.