ಜಿಲ್ಲಾಸ್ಪತ್ರೆ ಅವ್ಯವಸ್ಥೆಗೆ ವೈದ್ಯರ ತರಾಟೆ
Team Udayavani, Oct 16, 2019, 11:56 AM IST
ಬೆಳಗಾವಿ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಅವರು ಜಿಲ್ಲಾಸ್ಪತ್ರೆಗೆ ಮಂಗಳವಾರ ಬೆಳಗ್ಗೆ ಹಠಾತ್ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳು ಹಾಗೂ ವೈದ್ಯರನ್ನು ತರಾಟೆಗೆ ತೆಗೆದುಕೊಂಡರು.
ಇಲ್ಲಿಯ ಜಿಲ್ಲಾಸ್ಪತ್ರೆ ಅವ್ಯವಸ್ಥೆಗಳ ಆಗರ ಆಗಿದೆ ಎನ್ನುವ ಸಾರ್ವಜನಿಕರ ದೂರುಗಳ ಆಧಾರದ ಮೇಲೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಶಂಕರಗೌಡ ಅವರು, ಆಸ್ಪತ್ರೆಗೆ ತೆರಳಿ ಪ್ರತಿ ವಿಭಾಗವನ್ನು ಪರಿಶೀಲಿಸಿ ಸ್ವಚ್ಛತೆ ಇಲ್ಲದಿರುವುದು, ರೋಗಿಗಳಿಗೆ ಕುಳಿತುಕೊಳ್ಳಲು ಸ್ಥಳಾವಕಾಶ ಇಲ್ಲದಿರುವುದು, ಗರ್ಭಿಣಿಯರು 2-3ಗಂಟೆ ಸಾಲು ಹಚ್ಚಿ ನಿಂತುಕೊಳ್ಳಬೇಕಾದ ಪರಿಸ್ಥಿತಿ, ಸರಕಾರ ಒದಗಿಸಿರುವ ಯಂತ್ರಗಳನ್ನು ಬಳಸದಿರುವುದು, ರೋಗಿಗಳ ಹಾಸಿಗೆ ಮಲಿನ ಆಗಿರುವುದು ಸೇರಿದಂತೆ ವಿವಿಧ ಅವ್ಯವಸ್ಥೆಗಳನ್ನು ಕಂಡು ಕೆಂಡಾಮಂಡಲರಾದರು.
ರೋಗಿಗಳನ್ನು ಮಾತನಾಡಿಸಿ ಸೌಲಭ್ಯಗಳು ಮತ್ತು ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರತಿ ವಾರ್ಡ್ ಪರಿಶೀಲಿಸಿ ಅಲ್ಲಿನ ಸಿಬ್ಬಂದಿಯನ್ನು ಪ್ರಶ್ನಿಸಿದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಕಳಸದ ಅವರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಇಂತಹ ಆಸ್ಪತ್ರೆಗೆ ರೋಗಿಗಳು ಹೇಗೆ ಬರಬೇಕು. ಸರ್ಕಾರ ನೀಡುವ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಆಗುವುದಿಲ್ಲವೇ. ಆಸ್ಪತ್ರೆಗೆ ಬಡವರು ಬರುತ್ತಾರೆ ಎಂದರೆ ಅವರಿಗೆ ಬೆಲೆ ಇಲ್ಲವೇ ಎಂದು ಎಂದು ಪ್ರಶ್ನಿಸಿದರು. ರೋಗಿಗಳಿಗೆ ನೀಡುವ ಆಹಾರದ ಗುಣಮಟ್ಟದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಶಂಕರಗೌಡ ಪಾಟೀಲ, ಶೌಚಾಲಯಗಳಿಗೆ ಭೇಟಿ ನೀಡಿ ಅಸ್ವತ್ಛತೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಮೇಯರ್ ವಿಜಯ ಮೋರೆ ಹಾಗೂ ಕಾರ್ಯಕರ್ತರು ಶಂಕರಗೌಡ ಪಾಟೀಲ ಅವರಿಗೆ ಸಾಥ್ ನೀಡಿದರು. ಆಸ್ಪತ್ರೆಯಲ್ಲಿ ಮಹಿಳೆಯರು ನೆಲದ ಮೇಲೆ ಮಲಗುತ್ತಾರೆ. ಕುಡಿಯಲು ನೀರಿನ ವ್ಯವಸ್ಥೆ ಇಲ್ಲ. ಸರ್ಕಾರ ನೀಡಿರುವ ಎಂಆರ್‌ಐ ಯಂತ್ರ ಇನ್ನೂ ಬಳಕೆ ಮಾಡುತ್ತಿಲ್ಲ ಎಂದು ವಿಜಯ ಮೋರೆ ಮಾಹಿತಿ ನೀಡಿದರು. ಇದೇ ಅವ್ಯವಸ್ಥೆ ಮುಂದುವರಿದರೆ ಸಹಿಸಲು ಸಾಧ್ಯವಿಲ್ಲ. ತಕ್ಷಣ ಆಸ್ಪತ್ರೆಯ ಆರೋಗ್ಯ ಸುಧಾರಿಸಬೇಕು ಎಂದು ಶಂಕರಗೌಡ ಪಾಟೀಲ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.