Yediyurappa ತಟ್ಟೆಯಲ್ಲಿ ಹೆಗ್ಗಣವಲ್ಲ ಕತ್ತೆ ಸತ್ತು ಬಿದ್ದಿದೆ: ಸಿಎಂ ಸಿದ್ದರಾಮಯ್ಯ
ಬಿಜೆಪಿಯವರ ಉಳಿದ ಎಲ್ಲ ಪ್ರಕರಣಗಳನ್ನೂ ತನಿಖೆಗೆ ನೀಡಲಾಗುವುದು..
Team Udayavani, Aug 5, 2024, 6:59 PM IST
ಗೋಕಾಕ್ (ಬೆಳಗಾವಿ): ‘ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಕಾಯ್ದೆಯಡಿ ಕೇಸು ದಾಖಲಾಗಿದೆ. ಯಡಿಯೂರಪ್ಪ ತಟ್ಟೆಯಲ್ಲಿ ಹೆಗ್ಗಣವಲ್ಲ ಕತ್ತೆ ಸತ್ತು ಬಿದ್ದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಕಿದರು.
ಗೋಕಾಕ್ ನಗರದಲ್ಲಿ ಸೋಮವಾರ(ಆಗಸ್ಟ್5 ) ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಯಡಿಯೂರಪ್ಪ ಅವರೇ ಪೋಕ್ಸೊ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಪಾದಯಾತ್ರೆ ಮುಗಿಯುವುದರೊಳಗೆ ನಾನು ರಾಜೀನಾಮೆ ನೀಡುವಂತೆ ಯಡಿಯೂರಪ್ಪ ಕೇಳಿದ್ದಾರೆ. ಅವರಿಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಇದೆಯೇ?’ ಎಂದು ಪ್ರಶ್ನಿಸಿದರು.
ಯಡಿಯೂರಪ್ಪ ವಿರುದ್ಧ ಈಗಾಗಲೇ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಸದ್ಯ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರಿಂದ ಹೊರಗೆ ಇದ್ದಾರೆ. ಇಲ್ಲದಿದ್ದರೆ ಜೈಲಿನಲ್ಲಿ ಇರಬೇಕಾಗಿತ್ತು. ಅವರ ಮೇಲೆ ಎಷ್ಟು ಕೇಸ್ ಇವೆ, ಯಾವ ಯಾವ ಕೇಸ್ ಇವೆ ಎಂದು ಅವರಿಗೆ ಗೊತ್ತಿದೆಯೇ? ಈಗ ನನ್ನ ರಾಜೀನಾಮೆ ಕೇಳಲು ನೈತಿಕತೆ ಇದೆಯೇ? ಯಡಿಯೂರಪ್ಪ ಸೇರಿದಂತೆ ಬಿಜೆಪಿಯವರು 21 ಪ್ರಕರಣ ಎದುರಿಸುತ್ತಿದ್ದಾರೆ. ಈಗಾಗಲೇ ಕೆಲವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಉಳಿದ ಎಲ್ಲ ಪ್ರಕರಣಗಳನ್ನೂ ತನಿಖೆಗೆ ನೀಡಲಾಗುವುದು’ ಎಂದರು.
ಸರ್ಕಾರದ ಬಳಿ ದುಡ್ಡಿಲ್ಲ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ”ದುಡ್ಡು ಇಲ್ಲದಿದ್ದರೆ ಇಷ್ಟೆಲ್ಲ ಯೋಜನೆ ಹೇಗೆ ಕೊಟ್ಟಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ. ಈಗ ಸುಳ್ಳನ್ನು ಸತ್ಯ ಮಾಡುವುದರಲ್ಲಿ ಪಳಗಿ ಬಿಟ್ಟಿದ್ದಾರೆ. ಸುಳ್ಳನ್ನೇ ಸತ್ಯ ಮಾಡುವುದು ಆರೆಸ್ಸೆಸ್‌ನವರಿಂದ ತರಬೇತಿ ನೀಡಲಾಗಿದೆ” ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.