ಸರ್ಕಾರಿ ಶಾಲೆ ಅಭಿವೃದ್ಧಿಗೆ ದಾನಿಗಳು ಮುಖ್ಯ: ಸಚಿವ ಮಧು ಬಂಗಾರಪ್ಪ
Team Udayavani, Sep 12, 2024, 5:15 PM IST
ಬೆಳಗಾವಿ: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಜೊತೆಗೆ ದಾನಿಗಳು ಕೈಜೋಡಿಸಿದ್ದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಲು ಸಾಧ್ಯ ಎಂದು ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಸುವರ್ಣ ವಿಧಾನಸೌಧದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ವಿದ್ಯಾರ್ಥಿಗಳಿಂದ ಅನಾವರಣಗೊಳಿಸಿ ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯ ಉಜ್ವಲಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಸಿಎಂ ಸಿದ್ದರಾಮಯ್ಯ ತಾವು ಕಲಿತ ಸಿದ್ಧರಾಮನಹುಂಡಿಯಲ್ಲಿನ ಸರ್ಕಾರಿ ಶಾಲೆಗೆ ಹತ್ತು ಲಕ್ಷ ರೂ. ತಮ್ಮ ವೇತನದಿಂದ ದಾನ ನೀಡಿದ್ದು ಎಲ್ಲ ಶಾಸಕ ಮತ್ತು ಸಚಿವರಿಗೆ ಪ್ರೇರಣೆ. ದಾನಿಗಳು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಸಹಾಯ ಮಾಡಿದ್ದಲ್ಲಿ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಬಹುದು ಎಂದರು.
ಶಿಕ್ಷಕರು ತಮ್ಮ ಶಾಲೆಗೆ ಒಂದು ತಿಂಗಳ ವೇತನ ದಾನವಾಗಿ ನೀಡಿದ್ದಲ್ಲಿ ಇತರರು ಪ್ರೇರಣೆಗೊಂಡು ಸರ್ಕಾರಿ ಶಾಲೆ ಅಭಿವೃದ್ಧಿಪಡಿಸಬಹುದು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಕರಿದ್ದು ಪಾಲಕರು ಮಕ್ಕಳನ್ನು ಪ್ರತಿದಿನ ಶಾಲೆಗೆ ಕಳುಹಿಸುವ ಜೊತೆಗೆ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಬಹುದು ಎಂದರು.
ರಾಜ್ಯದಲ್ಲಿ ಸರ್ಕಾರ ಹಾಗೂ ಅನುದಾನಿತ ಶಾಲೆಗಳಲ್ಲಿ ಅಂದಾಜು 56 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಅಂದಾಜು ಒಂದು ಕೋಟಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ
ಶೈಕ್ಷಣಿಕ ವರ್ಷದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮೂರು ಬಾರಿ ಅವಕಾಶ ನೀಡಲಾಗಿದೆ. ಇದನ್ನು ಸದುಪಯೋಗ ಪಡೆದ 82 ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಈಗ ಕಾಲೇಜುಗಳಿಗೆ ಪ್ರವೇಶ ಪಡೆದಿದ್ದಾರೆ ಎಂದರು.
ಮಕ್ಕಳಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಪೌಷ್ಟಿಕ ಆಹಾರ ನೀಡುವುದು ಸರ್ಕಾರದ ಧ್ಯೇಯ. ಈ ಹಿನ್ನೆಲೆಯಲ್ಲಿ ಅಜೀಂ ಪ್ರೇಮಜಿ ಫೌಂಡೇಶನ್ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ನೀಡುತ್ತಿರುವ ಮೊಟ್ಟೆಯನ್ನು ವಾರದ ಆರು ದಿನಗಳ ಕಾಲ ವಿತರಿಸಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸೆ.25ರಂದು ಯಾದಗಿರಿಯಲ್ಲಿ ಚಾಲನೆ ನೀಡಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ, ಶಿಕ್ಷಣ ಇಲಾಖೆಯಲ್ಲಿ ಮಹತ್ತರ ಬದಲಾವಣೆ ತರುವಲ್ಲಿ ಶಿಕ್ಷಣ ಸಚಿವರು ಪ್ರಯತ್ನಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡುವ ಮೂಲಕ ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನೀಡುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಕೇವಲ ವೇದಿಕೆಗೆ ಸೀಮಿತವಾಗದೇ ಪ್ರತಿಯೊಬ್ಬರೂ ಕೈಜೋಡಿಸಿದ್ದಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸಬಹುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜ ಮತ್ತು ದೇಶ ಬೆಳೆಯಬೇಕಾದರೆ ಸರ್ಕಾರಿ ಶಾಲೆ ಉಳಿಸಿ-ಬೆಳೆಸಬೇಕು. ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳು ಯಶಸ್ವಿಯಾಗ ಬೇಕಾದರೆ ಅಧಿಕಾರಿಗಳು, ಸಾರ್ವಜನಿಕರು ಇದರಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಬೇಕು ಎಂದರು.
ಶಾಸಕರಾದ ಎಂ. ನರೇಂದ್ರಸ್ವಾಮಿ ಹಾಗೂ ಬಸವರಾಜ ಶಿವಣ್ಣವರ ಮಾತನಾಡಿ, ಹಳೇ ವಿದ್ಯಾರ್ಥಿಗಳು ಕಲಿತ ಶಾಲೆ ಅಭಿವೃದ್ಧಿ ಹಾಗೂ ಏಳ್ಗೆಗಾಗಿ ಕೈಜೋಡಿಸುವುದು ಇದರ ಉದ್ದೇಶ. ಮಕ್ಕಳಿಗೆ ಆರೋಗ್ಯದ ಜೊತೆಗೆ ಉತ್ತಮ ಶಿಕ್ಷಣ ನೀಡಲು ಒತ್ತು ನೀಡಲಾಗಿದೆ ಎಂದರು.
ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಮಾತನಾಡಿ, ಶಿಕ್ಷಕರಿಗೆ ಹಳೇ ಪಿಂಚಣಿ ಯೋಜನೆ ಜಾರಿ, ಏಳನೇ ತರಗತಿ ನಂತರ 8 ಮತ್ತು 9ನೇ ತರಗತಿಗೆ ಅನುಮತಿ ಸೇರಿದಂತೆ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.
ಸನ್ಮಾನ: ಇದೇ ಸಂದರ್ಭದಲ್ಲಿ ತಾವು ಕಲಿತ ಶಾಲೆಗಳಿಗೆ ದಾನ ಮಾಡಿದಂತಹ ಗಣ್ಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ, ಶಾಸಕರಾದ ಆಸೀಫ್ (ರಾಜು)ಸೇಠ, ವಿಠಲ ಹಲಗೇಕರ, ವಿಶ್ವಾಸ ವೈದ್ಯ, ಬಾಬಾಸಾಹೇಬ ಪಾಟೀಲ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಹಲಗಾ, ಬಸ್ತವಾಡ ಗ್ರಾಪಂ ಅಧ್ಯಕ್ಷರಾದ ಲಕ್ಷ್ಮೀ ಗಜಪತಿ, ಮಹಾದೇವಿ ಪಾಟೀಲ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಮಾರ ಸಿಂಗ್, ಆಯುಕ್ತೆ ಕಾವೇರಿ, ಡಿಸಿ ಮೊಹಮ್ಮದ್ ರೋಷನ್, ಜಿಪಂ ಸಿಇಒ ರಾಹುಲ ಶಿಂಧೆ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗದ ಅಪರ ಆಯುಕ್ತೆ ಜಯಶ್ರೀ ಶಿಂತ್ರಿ, ಕ.ಪ್ರೌ.ಶಿ.ಪ. ಮಂಡಳಿ ಕಾರ್ಯದರ್ಶಿ ಸಕ್ರೆಪ್ಪಗೌಡ ಬಿರಾದಾರ, ಸಿಟಿಇ ಪ್ರಾಚಾರ್ಯ ಎನ್. ಶ್ರೀಕಂಠ, ಬೆಳಗಾವಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಲೀಲಾವತಿ ಹಿರೇಮಠ, ಚಿಕ್ಕೋಡಿ ಉಪ ನಿರ್ದೇಶಕ ಬಿ.ಎ. ಮೇಕಲಮರಡಿ, ಡಯಟ್ ಉಪ ನಿರ್ದೇಶಕ ಬಸವರಾಜ ನಾಲತವಾಡ ಇದ್ದರು.
ಸರ್ಕಾರಿ ಶಾಲಾ ಮಕ್ಕಳಿಗೆ ಪ್ರಾರಂಭದಿಂದಲೇ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದೊಂದಿಗೆ 45 ಸಾವಿರ ಅತಿಥಿ ಶಿಕ್ಷಕರಿಗೆ ಶಾಲಾ ಪ್ರಾರಂಭಕ್ಕೆ ಮುನ್ನವೇ ನೇಮಕಾತಿ ಆದೇಶ ಪ್ರತಿ ವಿತರಿಸಲಾಗಿದೆ. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ 1008 ಎಲ್‌ಕೆಜಿ- ಯುಕೆಜಿ ತರಗತಿ ಪ್ರಾರಂಭಿಸಲಾಗಿದ್ದು ಕ್ರಮೇಣ ಇದನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ವಹಿಸಲಾಗುವುದು.
ಮಧು ಬಂಗಾರಪ್ಪ, ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.