ಆತಂಕ ಬೇಡ; ಸಿಗಲಿದೆ ಎಲ್ಲ ಸೌಲಭ್ಯ


Team Udayavani, May 2, 2020, 5:22 PM IST

ಆತಂಕ ಬೇಡ; ಸಿಗಲಿದೆ ಎಲ್ಲ ಸೌಲಭ್ಯ

ಬೆಳಗಾವಿ: ಕೋವಿಡ್ 19 ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾದ ಕಾರಣಕ್ಕೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಇಲ್ಲಿನ ಜನರ ಸಮಸ್ಯೆಗಳನ್ನು ಜಿಲ್ಲಾಡಳಿತ ಗಮನಿಸಿದ್ದು, ವೈದ್ಯಕೀಯ ಸೌಲಭ್ಯ, ಅಗತ್ಯ ವಸ್ತುಗಳ ಪೂರೈಕೆ, ಜಾನುವಾರುಗಳಿಗೆ ಮೇವು ಸೇರಿದಂತೆ ಎಲ್ಲ ಬಗೆಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್‌ ಬಿ ಬೊಮ್ಮನಹಳ್ಳಿ ಅವರು ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಭರವಸೆ ನೀಡಿದರು.

ಕಂಟೆ„ನ್ಮೆಂಟ್‌ ಝೋನ್‌ ಪ್ರದೇಶವಾಗಿ ಗುರುತಿಸಿಕೊಂಡಿರುವ ಹಿರೇ ಬಾಗೇವಾಡಿಯಲ್ಲಿ ಕೋವಿಡ್‌-19 ತಡೆಗಟ್ಟುವಿಕೆ ಹಾಗೂ ಅಲ್ಲಿನ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಸಂಬಂಧಿಸಿದಂತೆ ಹಿರೇ ಬಾಗೇವಾಡಿ ಪೊಲೀಸ್‌ ಠಾಣೆ ಆವರಣದಲ್ಲಿ ಶುಕ್ರವಾರ ಗ್ರಾಮಸ್ಥರ ಸಭೆ ನಡೆಸಿದ ಅವರು, ಕೋವಿಡ್ 19  ಸೋಂಕು ಸಂಪೂರ್ಣವಾಗಿ ತಡೆಗಟ್ಟಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದಕ್ಕೆ ಎಲ್ಲರ ಸಹಕಾರ ಬೇಕು ಎಂದರು.

ಕಂಟೆ„ನ್ಮೆಂಟ್‌ ಝೋನ್‌ ನಲ್ಲಿ ಟ್ರ್ಯಾಕ್ಟರ್‌ ಮೂಲಕ ಪಡಿತರ ಆಹಾರಧಾನ್ಯವನ್ನು ವಿತರಿಸಲು ಸೂಚನೆ ನೀಡಿದ ಅವರು, ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದಿರುವ ವಲಸೆ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ಕಿಟ್‌ ವಿತರಿಸಬೇಕು. ಪ್ರತಿದಿನ ಸ್ವತ್ಛತೆ ಮತ್ತು ಸೋಂಕು ನಿವಾರಕ ಔಷಧಿಗಳನ್ನು ಸಿಂಪಡಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾಲು, ದಿನಸಿ, ತರಕಾರಿ ಸೇರಿದಂತೆ ಎಲ್ಲ ಬಗೆಯ ಅಗತ್ಯ ವಸ್ತುಗಳ ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲಾಗುವುದು.

ಗ್ರಾಮದಲ್ಲಿ 2700 ಮನೆಗಳು, ಸುಮಾರು 3000 ಕುಟುಂಬಗಳಿದ್ದು, ಪ್ರತಿ ಕುಟುಂಬಕ್ಕೂ ಅಗತ್ಯವಿರುವ ವಸ್ತುಗಳನ್ನು ಪೂರೈಸುವ ಬಗ್ಗೆ ಸರ್ಕಾರದ ನಿಯಮಾವಳಿ ಪ್ರಕಾರ ಪರಿಶೀಲಿಸಲಾಗುವುದು. ಆದರೆ ಎಲ್ಲ ಕುಟುಂಬಗಳಿಗೆ ಪೂರೈಸುವುದು ಸಾಧ್ಯವಾಗದಿದ್ದರೆ ಸ್ಥಿತಿವಂತ ಕುಟುಂಬಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.

175 ಜನರ ವರದಿ ಬಾಕಿ: ಹಿರೇ ಬಾಗೇವಾಡಿ ಗ್ರಾಮದ 175 ಜನರ ಗಂಟಲು ದ್ರವ ಮಾದರಿಯ ವರದಿ ಬರಬೇಕಿದೆ. ಜನರಿಗೆ ತುರ್ತು ವೈದ್ಯಕೀಯ ಸೌಲಭ್ಯ ಒದಗಿಸಲು ಮೊಬೆ„ಲ್‌ ಕ್ಲೀನಿಕ್‌ ಈಗಾಗಲೇ ಗ್ರಾಮಕ್ಕೆ ಒದಗಿಸಲಾಗಿದ್ದು, ಅವಶ್ಯಕತೆ ಆಧರಿಸಿ ಇನ್ನು ಎರಡು ಮೊಬೆ„ಲ್‌ ಕ್ಲೀನಿಕ್‌ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿದಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಬರುವ 15 ದಿನಗಳಲ್ಲಿ ಗ್ರಾಮದ ಎಲ್ಲ ಜನರ ಗಂಟಲು ದ್ರವ ಮಾದರಿ ಸಂಗ್ರಹಿಸುವ ಮೂಲಕ ಸೋಂಕು ಹರಡುವಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಅರೋಗ್ಯ ಇಲಾಖೆ ಅಧಿಕಾರಿಗಳು ಮಾರ್ಗಸೂಚಿ ಪ್ರಕಾರ ಸೋಂಕಿತರು, ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದವರ ಗಂಟಲು ದ್ರವದ ಮಾದರಿಯನ್ನು ಮಾತ್ರ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದರು. ಅತೀ ಹೆಚ್ಚು ಪ್ರಕರಣ ಕಂಡುಬರುವ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಹೆ„ರಿಸ್ಕ್ ಗ್ರೂಪ್‌ನಲ್ಲಿರುವರ ಹಾಗೂ ಉಸಿರಾಟ ತೊಂದರೆ, ಜ್ವರ, ಹೃದಯ ಅಥವಾ ಕಿಡ್ನಿ ತೊಂದರೆ ಇರುವವರ ಮಾದರಿಯನ್ನು ಪರೀಕ್ಷಿಸಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಕಂಟೇನ್ಮೆಂಟ್‌ ಝೋನ್‌ ನಲ್ಲಿ ಏಪ್ರಿಲ್‌ ನಲ್ಲಿ 2820 ಕಾರ್ಡುದಾರರಿಗೆ ಒಟ್ಟು 870 ಕ್ವಿಂಟಲ್‌ ಅಕ್ಕಿ ವಿತರಿಸಲಾಗಿದೆ. ಮೇ ತಿಂಗಳ ಕೇಂದ್ರದ ಗರೀಬ್‌ ಕಲ್ಯಾಣ ಯೋಜನೆಯಡಿ 905 ಕ್ವಿಂಟಲ್‌ ಅಕ್ಕಿ ಬಂದಿರುತ್ತದೆ. ಪ್ರತಿ ಸದಸ್ಯರಿಗೆ ಹತ್ತು ಕೆ.ಜಿ. ಅಕ್ಕಿ ಹಾಗೂ ಒಂದು ಕೆ.ಜಿ. ಬೇಳೆ ನೀಡಲಾಗುತ್ತಿದೆ. ಬಿಪಿಎಲ್‌ ಕಾರ್ಡಿಗೆ ಅರ್ಜಿ ಹಾಕಿದ್ದರೆ ಅಂತಹವರಿಗೂ ಹತ್ತು ಕೆ.ಜಿ ಅಕ್ಕಿ ಈ ತಿಂಗಳಿನಲ್ಲಿ ಉಚಿತವಾಗಿ ನೀಡಲಾಗುವುದು ಎಂದು ಆಹಾರ ಮತ್ತ ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಹೇಳಿದರು.

ಗ್ರಾಮದಲ್ಲಿ 37 ಪ್ರಕರಣಗಳು ಪತ್ತೆಯಾಗಿರುವುದರಿಂದ ಕರೊನಾ ತಡೆಗಟ್ಟಲು ಇನ್ನಷ್ಟು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇದು ಕೆಂಪು ವಲಯ ಆಗಿರುವುದರಿಂದ ಸರ್ಕಾರದಿಂದ ಎಲ್ಲರಿಗೂ ಮಾಸ್ಕ್ ವಿತರಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು. ರೈತರು ಜಮೀನುಗಳಿಗೆ ತೆರಳಿ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುವುದು ಮತ್ತು ಜಾನುವಾರುಗಳಿಗೆ ಮೇವು ಒದಗಿಸುವುದು ಕಷ್ಟವಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ರಾಜೇಂದ್ರ ಕೆ.ವಿ. ಪೊಲೀಸ್‌ ಆಯುಕ್ತ ಬಿ.ಎಸ್‌. ಲೋಕೇಶ್‌ ಕುಮಾರ್‌, ಡಿಸಿಪಿ ಸೀಮಾ ಲಾಟಕರ, ಡಿಸಿಪಿ ಯಶೋಧಾ ವಂಟಗೋಡಿ, ಎಸಿಪಿ ನಾರಾಯಣ ಭರಮನಿ, ಗ್ರಾಪಂ ಅಧ್ಯಕ್ಷೆ ಕಲಾವತಿ ಧರೆಣ್ಣವರ, ಚನ್ನರಾಜ್‌ ಹಟ್ಟಿಹೊಳಿ ಉಪಸ್ಥಿತರಿದ್ದರು. ಅಡವೇಶ ಇಟಗಿ, ಸಿ.ಸಿ.ಪಾಟೀಲ, ಸಯ್ಯದ್‌ ಖಾದ್ರಿ, ಶ್ರೀಶೈಲ್‌ ಫಡಗಲ್‌, ಬಾಪು ನಾವಲಗಟ್ಟಿ, ಶ್ರೀಕಾಂತ್‌ ಮಾಧುಬರಮಣ್ಣವರ ಮೊದಲಾದವರು ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.

ಇನ್ನೂ ಹೆಚ್ಚಿನ ಪರೀಕ್ಷೆ ನಡೆಯಲಿ :  ಶಾಸಕಿ ಲಕ್ಷ್ಮಿ ಹೆಬ್ಟಾಳಕರ ಮಾತನಾಡಿ, ಹಿರೇಬಾಗೇವಾಡಿ ಗ್ರಾಮದಲ್ಲಿ ಹೆಚ್ಚು ಪ್ರಕರಣ ಕಂಡುಬಂದಿರುವುದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಮೊದಲು ಅವರ ಆತಂಕ ದೂರ ಮಾಡುವ ಕೆಲಸವಾಗಬೇಕಿದೆ. ಪ್ರಕರಣ ಹೆಚ್ಚಾಗಿ ಕಂಡುಬಂದಿರುವ ಗ್ರಾಮದ ನಿರ್ದಿಷ್ಟ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಪರೀಕ್ಷೆಗಳು ನಡೆಸಬೇಕು ಎಂದರು. ಗ್ರಾಮದಲ್ಲಿ ಸರ್ಕಾರದಿಂದ ನೀಡಲಾಗುತ್ತಿರುವ ಉಚಿತ ಹಾಲು ಒದಗಿಸಬೇಕು. ತರಕಾರಿ ಮಾರಾಟಕ್ಕೆ ಗ್ರಾಮದಲ್ಲಿ ವ್ಯವಸ್ಥೆ ಕಲ್ಪಿಸಬೇಕು. ನಿರಂತರವಾಗಿ ಕೆಲಸ ಮಾಡುತ್ತಿರುವ ಆರೋಗ್ಯ, ಪೊಲೀಸ್‌, ಅಂಗನವಾಡಿ ಕಾರ್ಯಕರ್ತರಿಗೆ ವಿಶ್ರಾಂತಿ ನೀಡಿ, ಬೇರೆ ಕಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಶಾಸಕಿ ಹೆಬ್ಟಾಳಕರ ಹೇಳಿದರು.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.