ರಾಜ್ಯಸಭಾ ಟಿಕೆಟ್ ಕೇಳುವುದರಲ್ಲಿ ತಪ್ಪೇನಿಲ್ಲ, ನಾನೂ ಕೇಳ್ತಿನಿ: ಡಾ. ಪ್ರಭಾಕರ ಕೋರೆ
Team Udayavani, Jun 1, 2020, 2:49 PM IST
ಬೆಳಗಾವಿ: ಬಿಜೆಪಿ ಪಕ್ಷ ಸಿದ್ಧಾಂತದ ಮೇಲೆ ನಡೆದಿರುವ ಪಕ್ಷ. ಯಾರು ಉತ್ತಮ ಕೆಲಸ ಮಾಡುತ್ತಾರೋ ಅವರಿಗೆ ಟಿಕೆಟ್ ಸಿಗುತ್ತದೆ ಎಂದು ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಕತ್ತಿ ಸಹೋದರರಿಂದ ರಾಜ್ಯಸಭಾ ಟಿಕೆಟ್ ಡಿಮ್ಯಾಂಡ್ ವಿಚಾರದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯಸಭಾ ಟಿಕೆಟ್ ಕೇಳುವುದರಲ್ಲಿ ತಪ್ಪೇನಿಲ್ಲ. ನಾನೂ ಕೇಳುತ್ತೇನೆ, ಅವರೂ ಕೇಳ್ತಾರೆ. ರಾಜಕಾರಣದಲ್ಲಿ ಜತೆಗೆ ಇದ್ದವರು ಕೇಳಬಾರದು ಅಂತ ಏನಿಲ್ಲ ಎಂದರು.
ಬಿಜೆಪಿ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಪ್ರತಿಯೊಬ್ಬರೂ ಟಿಕೆಟ್ ಕೇಳುವ ಹಕ್ಕು ಇದೆ. ಪಕ್ಷ ಯಾರನ್ನು ನಿರ್ಧಾರ ಮಾಡ್ತಾರೆ ಅವರು ರಾಜ್ಯಸಭಾ ಸದಸ್ಯರಾಗುತ್ತಾರೆ ಎಂದ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯಿಲ್ಲ. ಯಾರೋ ಒಬ್ಬರಿಂದ ನಾಯಕತ್ವ ಬದಲಾವಣೆ ಸಾಧ್ಯವಿಲ್ಲ. ಮುಂದಿನ ಮೂರು ವರ್ಷ ಬಿ ಎಸ್ ಯಡಿಯೂರಪ್ಪ ಅವರೇ ರಾಜ್ಯದ ಸಿಎಂ ಆಗಿರ್ತಾರೆ. ಅವರೇ ಅವಧಿ ಪೂರ್ಣಗೊಳಿಸುತ್ತಾರೆ ಎಂದರು.
ರಮೇಶ ಕತ್ತಿಗೆ ಚಿಕ್ಕೋಡಿ ಲೋಕಸಭಾ ಟಿಕೆಟ್ ಕೈ ತಪ್ಪಲು ಪ್ರಭಾಕರ ಕೋರೆ, ಲಕ್ಷ್ಮಣ ಸವದಿ, ಜೊಲ್ಲೆ ಕಾರಣ ಆರೋಪಕ್ಕೆ ಉತ್ತರಿಸದ ಅವರು, ನಾನೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೆ, ಆದರೆ ನನಗೆ ರಾಜ್ಯಸಭೆ ಟಿಕೆಟ್ ಕೊಟ್ಟರು. ಜೊಲ್ಲೆಗೆ ಲೋಕಸಭಾ ಕ್ಷೇತ್ರದ ಟಿಕೆಟ್ ಕೋಟ್ಟರು. ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.