ಕೇಂದ್ರ ವಿರುದ್ಧ ಔಷಧ ವ್ಯಾಪಾರಿಗಳ ಆಕ್ರೋಶ-ಪ್ರತಿಭಟನೆ
Team Udayavani, Nov 30, 2019, 2:17 PM IST
ಬೆಳಗಾವಿ: ಔಷಧ ಹಾಗೂ ಕಾಂತಿವರ್ಧಕ 1945ರ ಶೆಡ್ನೂಲ್‌ಕೆ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ರಿಟೇಲ್ ಫಾರ್ಮಸಿ ಅಸೋಸಿಯೇಷನ್ ನೇತೃತ್ವದಲ್ಲಿ ಔಷಧಿಅಂಗಡಿಗಳ ಮಾಲೀಕರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ಮನವಿ ರವಾನಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಔಷಧ ಮಾರಾಟ ಮಾಡುವ ಅಧಿಕಾರ ನೀಡಲು ಕೇಂದ್ರ ಮುಂದಾಗಿರುವುದು ಸರಿಯಲ್ಲ ಎಂದು ದೂರಿದರು.
1948ರ ಕಾಯ್ದೆ ಪ್ರಕಾರ ಔಷಧಗಳನ್ನು ಫಾರ್ಮಸಿಗಳು ಮಾತ್ರ ನೀಡಬೇಕು. ಆದರೆ ಏನೂ ಗೊತ್ತಿಲ್ಲದವರಿಗೆ ಔಷಧ ಮಾರಾಟ ಮಾಡಲು ಅವಕಾಶ ನೀಡಿದರೆ ರೋಗಿಗಳಿಗೆ ತೊಂದರೆಯಾಗಲಿದೆ. ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ? ರೋಗಿಗಳ ಜೀವದೊಂದಿಗೆ ಚೆಲ್ಲಾಟ ಆಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ. ಇಂಥ ಕಾಯ್ದೆಗಳಿಗೆ ಜನರಿಗೆ ತೊಂದರೆ ನೀಡಿದಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಧ್ಯಕ್ಷ ನಂದಕಿಶೋರ ಸಾರಸ್ವತ, ವಿನೋದ ಕೋಳಿವಾಡ, ವಿಜಯ ಸಾಣಿಕೊಪ್ಪ, ಶೈಲೇಂದ್ರ ಜೈನ, ರೋಹಿತ ಸವಾಗುಂಜಿ, ಮಹೇಶಗೌಡ ಪಾಟೀಲ, ಮಹೇಶ ಬೀಳಗಿ, ಪವನ ದೇಸಾಯಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.