ಇ-ಪಾಸ್ ಇಲ್ಲದೇ ಅಕ್ರಮ ಪ್ರವೇಶ ಮಾಡಿದ್ರೆ ಕ್ರಿಮಿನಲ್ ಕೇಸ್: ಡಿಸಿ
Team Udayavani, May 15, 2020, 11:22 AM IST
ಬೆಳಗಾವಿ: ಮಾರ್ಗಸೂಚಿ ಪ್ರಕಾರ ಸೇವಾ ಸಿಂಧು ಮೂಲಕ ಸೂಕ್ತ ಅನುಮತಿ ಪತ್ರ (ಇ-ಪಾಸ್) ಪಡೆಯದೇ ಕೆಲವರು ನೆರೆಯ ರಾಜ್ಯಗಳಿಂದ ಕಾನೂನು ಬಾಹಿರವಾಗಿ ಅಡ್ಡಮಾರ್ಗದಲ್ಲಿ ಬೆಳಗಾವಿ ಜಿಲ್ಲೆ ಪ್ರವೇಶಿಸುತ್ತಿರುವುದು ಕಂಡು ಬಂದಿದೆ. ಈ ರೀತಿ ಅಕ್ರಮವಾಗಿ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾ ಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಈ ರೀತಿ ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನು ಬಾಹಿರವಾಗಿರುತ್ತದೆ. ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಸೇವಾ ಸಿಂಧು ಮೂಲಕ ಇ-ಪಾಸ್ ಪಡೆಯದೇ ಮಹಾರಾಷ್ಟ್ರ ಸೇರಿದಂತೆ ಇತರೆ ನೆರೆಯ ರಾಜ್ಯಗಳ ಮೂಲಕ ಬೆಳಗಾವಿ ಜಿಲ್ಲೆಯನ್ನು ಯಾರಾದರೂ ಪ್ರವೇಶಿಸಿದ್ದರೆ ಅಂತಹವರು ಸ್ವಯಂ ಪ್ರೇರಣೆಯಿಂದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಪರೀಕ್ಷೆಗೆ ಒಳಪಡಬೇಕು. ಇದೇ ರೀತಿ ಸಂಬಂಧಿಸಿದ ಪೊಲೀಸ್ ಠಾಣೆಗೂ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.
ಈ ರೀತಿ ಅಕ್ರಮವಾಗಿ ಪ್ರವೇಶಿಸಿದವರು ಒಂದು ವೇಳೆ ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ಮಾಹಿತಿ ನೀಡದಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಅನ್ಯ ರಾಜ್ಯಗಳಿಂದ ಅಕ್ರಮವಾಗಿ ಬಂದಿರುವವರ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ಕೂಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ 0831-2407290 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.