ಪರಿಣಾಮಕಾರಿಯಾಗಿದೆ ಸುಧಾರಿತ ಗಸ್ತು ವ್ಯವಸ್ಥೆ
Team Udayavani, Jul 7, 2017, 4:48 PM IST
ಹುಕ್ಕೇರಿ: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು, ಅಪರಾಧ ಪ್ರಕರಣಗಳನ್ನು ತಡೆಯುವುದರ ಜತೆಗೆ ಪೊಲೀಸ್ ಇಲಾಖೆಯನ್ನು ಜನಸ್ನೇಹಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಸುಧಾರಿತ ಗಸ್ತು ವ್ಯವಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದು ಗೋಕಾಕ ಡಿಎಸ್ಪಿ ಈ.ಎಸ್. ವೀರಭದ್ರಪ್ಪ ಹೇಳಿದರು.
ಪಟ್ಟಣದ ವಿಶ್ವರಾಜ ಭವನದಲ್ಲಿ ಗುರುವಾರ ಸಂಜೆ ಹುಕ್ಕೇರಿ ಪೊಲೀಸ್ ಠಾಣೆ ಏರ್ಪಡಿಸಿದ್ದ ಸುಧಾರಿತ ಗಸ್ತು ವ್ಯವಸ್ಥೆ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಹಾಗೂ ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ.
ಮಹಿಳೆ ಮತ್ತು ಮಕ್ಕಳ ರಕ್ಷಣೆ, ಶಾಂತಿ ಸುವ್ಯವಸ್ಥೆ ಕಾಪಾಡುವುದು ಸೇರಿದಂತೆ ಇಲಾಖೆ ಹಾಗೂ ಸಾರ್ವಜನಿಕರ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ದಿಸೆಯಲ್ಲಿ ಸುಧಾರಿತ ಗಸ್ತು ವ್ಯವಸ್ಥೆ ಸಾಕಷ್ಟು ಪರಿಣಾಕಾರಿಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.
2015 ರಲ್ಲಿ ಈ ಸುಧಾರಿತ ಬೀಟ್ ವ್ಯವಸ್ಥೆಯ ರೂಪರೇಷೆ ಸಿದ್ಧಪಡಿಸಲಾಯಿತು. ಬಳಿಕ 2016 ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಆರಂಭವಾದ ಈ ವ್ಯವಸ್ಥೆ 2017 ರಲ್ಲಿ ಇಡೀ ರಾಜ್ಯದ ಎಲ್ಲ ಜಿಲ್ಲೆಗಳೂ ವಿಸ್ತರಣೆಯಾಗಿದೆ. ಈ ವ್ಯವಸ್ಥೆ ಮಾದರಿಯಾಗಿದ್ದು ಅನ್ಯ ರಾಜ್ಯಗಳೂ ಈ ರೀತಿಯ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಿವೆ ಎಂದು ಅವರು ಹೇಳಿದರು.
ಸಿಪಿಐ ಸಂದೀಪ ಮುರಗೋಡ, ಪಿಎಸ್ ಐಗಳಾದ ರವಿ ಯಡವನ್ನವರ, ಬಾಳಪ್ಪಾ ತಳವಾರ, ಮುಖಂಡರಾದ ಉದಯ ಹುಕ್ಕೇರಿ, ಗುರು ಕುಲಕರ್ಣಿ, ಅಶೋಕ ಅಂಕಲಗಿ, ಎಸ್. ಕೆ.ಮಕಾನದಾರ, ಪ್ರಕಾಶ ದೇಶಪಾಂಡೆ, ಬಸವರಾಜ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.